ಈ ಬಾರಿ ಬಜೆಟ್ ಲ್ಲಿ ರೈತರಿಗೆ ಆದ್ಯತೆ ಎಂದ ಸಿಎಂ BSY : ಬಂಪರ್ ಕೊಡುಗೆ ನಿರೀಕ್ಷೆ

By Kannadaprabha News  |  First Published Jan 4, 2020, 2:34 PM IST

ಈ ಬಾರಿ ರಾಜ್ಯ ಬಜೆಟ್ಟಿನಲ್ಲಿ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭರವಸೆ ನೀಡಿದ್ದು, ಬಂಪರ್ ಕೊಡುಗಡೆ ನಿರೀಕ್ಷೆ ಮಾಡಲಾಗಿದೆ. 


ಹಾಸನ [ಜ.04]:  ಮುಂದಿನ ವಾರದಿಂದ ರಾಜ್ಯ ಬಜೆಟ್ ಗೆ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. 

ಹಾಸನದಲ್ಲಿ ನಡೆಯುತ್ತಿರುವ ಪುಷ್ಪಗಿರಿ ಉತ್ಸವಕ್ಕೆ ಚಾಲನೆ ನೀಡಲು ಆಗಮಿಸಿದ್ದ ವೇಳೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಈ ಬಾರಿ ಬಜೆಟ್ ನಲ್ಲಿ ರೈತರಿಗೆ ಆದ್ಯತೆ ನೀಡಲಾಗುತ್ತದೆ. ಪ್ರವಾಸೋದ್ಯಮ ಕ್ಷೇತ್ರಕ್ಕೆ ರಾಜ್ಯದ ಮುಂದಿನ ಬಜೆಟ್ ನಲ್ಲಿ ಹೆಚ್ಚು ಒತ್ತು ನೀಡಲಾಗುತ್ತದೆ ಎಂದಿದ್ದು, ಈ ನಿಟ್ಟಿನಲ್ಲಿ ಈ ಬಾರಿ ಬಜೆಟ್ಟಿನಲ್ಲಿ ಕೃಷಿ ಕ್ಷೇತ್ರಕ್ಕೆ ಬಂಪರ್ ನಿರೀಕ್ಷೆ ಮಾಡಲಾಗಿದೆ.

Tap to resize

Latest Videos

ಇನ್ನು ರಾಜ್ಯದಲ್ಲಿ ಉಂಟಾದ ನೆರೆ ಪರಿಹಾರ ಸಂಬಂಧ ಕೇಂದ್ರಕ್ಕೆ ಮತ್ತೊಮ್ಮೆ ಹೋಗಿ ಹೆಚ್ಚಿನ ಅನುದಾನ ನೀಡಲು ಮನವಿ ಮಾಡುತ್ತೇನೆ. ಸಂಬಂಧ ಪಟ್ಟ ಇಲಾಖೆ ಸಚಿವರನ್ನು ಭೇಟಿ ಮಾಡಿ ಮಾತನಾಡುತ್ತೇನೆ ಎಂದರು. 

ಇನ್ನು ರಾಜ್ಯದಲ್ಲಿ ಉಪ ಚುನಾವಣೆ ನಡೆದು ತಿಂಗಳು ಕಳೆದರೂ ಸಂಪುಟ ವಿಸ್ತರಣೆಯಾಗಿಲ್ಲ. ಈ ಬಗ್ಗೆಯೂ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ, ಶೀಘ್ರ ದಿಲ್ಲಿಗೆ ತೆರಳಿ ಹೈ ಕಮಾಂಡ್ ಜೊತೆಗೆ ಚರ್ಚೆ ನಡೆಸಲಾಗುವುದು ಎಂದರು.  

ಜ.8ರಂದು ಬಂದ್ ಆಗಲಿದೆ ಕರ್ನಾಟಕ ? ಏನಾಗಲಿದೆ ಎಫೆಕ್ಟ್..

ಪ್ರಧಾನಿ ನರೇಂದ್ರ ಮೋದಿ ರಾಜ್ಯದಕ್ಕೆ ಆಗಮಿಸಿದ್ದ ವೇಳೆ ಸಿಎಂ ಪರಿಹಾರ ಸಂಬಂಧ ವೇದಿಕೆಯಲ್ಲಿಯೇ ಪ್ರಸ್ತಾಪಿಸಿದ್ದು, ಆದರೆ ಈ ಬಗ್ಗೆ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲವೆಂದು ವಿಪಕ್ಷಗಳು ವಾಗ್ದಾಳಿ ನಡೆಸಿದ್ದು, ಪರಿಹಾರಕ್ಕೆ ಮತ್ತೊಮ್ಮೆ ದಿಲ್ಲಿಗೆ ತೆರಳುವುದಾಗಿ ಹೇಳಿದ್ದಾರೆ.

click me!