ಸಿಎಂ ಯಡಿಯೂರಪ್ಪ ಕುಟುಂಬದ ಸದಸ್ಯರಿಗೆ ಕೊರೋನಾ ಟೆಸ್ಟ್‌: ವರದಿ ಬಹಿರಂಗ

Kannadaprabha News   | Asianet News
Published : Aug 05, 2020, 07:37 AM ISTUpdated : Aug 05, 2020, 07:45 AM IST
ಸಿಎಂ ಯಡಿಯೂರಪ್ಪ ಕುಟುಂಬದ ಸದಸ್ಯರಿಗೆ ಕೊರೋನಾ ಟೆಸ್ಟ್‌: ವರದಿ ಬಹಿರಂಗ

ಸಾರಾಂಶ

ಸಿಎಂ ಕುಟುಂಬ ಸದಸ್ಯರು ಕಾವೇರಿ ನಿವಾಸಕ್ಕೆ ಆಗಮಿಸಿ ವರಮಹಾಲಕ್ಷ್ಮಿ ಹಬ್ಬ ಆಚರಣೆ ಮಾಡಿದ್ದರು| ಪರೀಕ್ಷೆ ನಡೆಸಿದಾಗ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಪುತ್ರಿ ಪದ್ಮಾವತಿ ಅವರಿಗೆ ಪಾಸಿಟಿವ್‌ ಕಂಡು ಬಂದಿತ್ತು| ಉಳಿದ ಸದಸ್ಯರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿತ್ತು. ಎಲ್ಲರ ವರದಿ ನೆಗೆಟಿವ್‌ ಬಂದಿದೆ|

ಬೆಂಗಳೂರು(ಆ.05): ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರ ಕುಟುಂಬ ಸದಸ್ಯರನ್ನು ಪರೀಕ್ಷಿಸಲಾಗಿದ್ದು, ಎಲ್ಲರ ವರದಿಯು ನೆಗೆಟಿವ್‌ ಬಂದಿದೆ. ಇದರಿಂದ ಮುಖ್ಯಮಂತ್ರಿಗಳ ಕುಟುಂಬ ನಿಟ್ಟುಸಿರು ಬಿಟ್ಟಿದೆ.

ಕುಟುಂಬ ಸದಸ್ಯರು ಕಾವೇರಿ ನಿವಾಸಕ್ಕೆ ಆಗಮಿಸಿ ವರಮಹಾಲಕ್ಷ್ಮಿ ಹಬ್ಬ ಆಚರಣೆ ಮಾಡಿದ್ದರು. ಬಳಿಕ ಸಾಮಾನ್ಯ ಪರೀಕ್ಷೆ ನಡೆಸಿದಾಗ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಪುತ್ರಿ ಪದ್ಮಾವತಿ ಅವರಿಗೆ ಪಾಸಿಟಿವ್‌ ಕಂಡು ಬಂದಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಸದಸ್ಯರನ್ನು ಪರೀಕ್ಷೆ ನಡೆಸಲಾಗಿತ್ತು. ಎಲ್ಲರ ವರದಿ ನೆಗೆಟಿವ್‌ ಬಂದಿದೆ. ಈ ನಡುವೆ, ಮುಖ್ಯಮಂತ್ರಿಗಳ ಅಧಿಕೃತ ಕಚೇರಿ ಕೃಷ್ಣಾದಲ್ಲಿ 23 ಮತ್ತು ಕಾವೇರಿ ನಿವಾಸದ 37 ಸಿಬ್ಬಂದಿ ಸೇರಿ ಒಟ್ಟು 60 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಎಲ್ಲರ ವರದಿಯು ನೆಗೆಟಿವ್‌ ಬಂದಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಆಸ್ಪತ್ರೆಯಿಂದಲೇ ಸಿಎಂ ಬಿಎಸ್‌ವೈ ಕೆಲಸ: ಚಿಕಿತ್ಸೆ ಪಡೆಯುತ್ತಲೇ ಕಡತ ಪರಿಶೀಲನೆ!

ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಾವೇರಿ ನಿವಾಸಕ್ಕೆ ಆರೋಗ್ಯ ಅಧಿಕಾರಿಗಳು ಸ್ಟಿಕ್ಕರ್‌ ಅಂಟಿಸಿದ್ದು, ನಾವೀಗ ಗೃಹ ಕ್ವಾರಂಟೈನ್‌ನಲ್ಲಿದ್ದೇವೆ. ಮನೆಗೆ ಭೇಟಿ ನೀಡದಿರಿ ಎಂದು ಬರೆಯಲಾಗಿದೆ. ಆ.16ರ ವರೆಗೆ ಕಾರಂಟೈನ್‌ನಲ್ಲಿ ಇರುವಂತೆ ನಮೂದಿಸಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ