ಸರ್ವಪಕ್ಷ ಸಭೆ ಅಂತ್ಯ: ಲಾಕ್‌ಡೌನ್ ಸುಳಿವು ಕೊಟ್ರಾ ಸಿಎಂ?

By Suvarna News  |  First Published Apr 20, 2021, 7:25 PM IST

ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ವಪಕ್ಷಗಳ ಸಭೆ ಅಂತ್ಯವಾಗಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪರೋಕ್ಷವಾಗಿ ಲಾಕ್‌ಡೌನ್ ಸುಳಿವು ಕೊಟ್ಟಿದ್ದಾರೆ.


ಬೆಂಗಳೂರು, (ಏ.20): ರಾಜ್ಯದಲ್ಲಿ ಕೊರೋನಾ ಸೋಂಕು ತಡೆಗೆ ಲಾಕ್‌ಡೌನ್ ಜಾರಿ ಮಾಡುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪರೋಕ್ಷವಾಗಿ ಸುಳಿವು ಕೊಟ್ಟಂತಿದೆ.

 ರಾಜ್ಯದಲ್ಲಿ ಕೊರೋನಾ ಸ್ಥಿತಿಗತಿಗಳ ಕುರಿತು ಇಂದು (ಏ.20) ರಾಜ್ಯಪಾಲರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ. ಕುಮಾರಸ್ವಾಮಿ ಲಾಕ್‌ಡೌನ್‌ ಜಾರಿ ಮಾಡಬೇಕೆಂದು ಸಲಹೆ ಕೊಟ್ರೆ, ಸಿದ್ದರಾಮಯ್ಯ ಅವರು 144 ಸೆಕ್ಷನ್ ಜಾರಿಗೆ ಮಾಡಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

Tap to resize

Latest Videos

ಸರ್ವಪಕ್ಷಗಳ ಸಭೆಯಲ್ಲಿ ಅಚ್ಚರಿ ಸಲಹೆ ಕೊಟ್ಟ ಮಾಜಿ ಸಿಎಂ ಕುಮಾರಸ್ವಾಮಿ! 

ಇನ್ನು ಈ ಮಾಜಿ ಸಿಎಂಗಳ ಅಭಿಪ್ರಾಯಕ್ಕೆ ಪ್ರತಿಕ್ರಿಯಿಸಿದ ಸಿ.ಎಂ ಬಿಎಸ್ ಯಡಿಯೂರಪ್ಪ ಅವರು, ಲಾಕ್‌ಡೌನ್ ಬಗ್ಗೆ ಚರ್ಚೆ ಮಾಡುವುದಾಗಿ ಹೇಳಿದ್ದು, ಕೆಲವೇ ಹೊತ್ತಿನಲ್ಲಿ ಸರ್ಕಾರದ ನಿರ್ಧಾರ ಪ್ರಕಟಿಸಲಾಗುವುದು ಎಂದು ಹೇಳಿದರು.

ಲಾಕ್ ಡೌನ್ ಜಾರಿ ಬಗ್ಗೆ ಚರ್ಚಿಸುತ್ತೇವೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಅವರು ನೀಡಿದ ಸಲಹೆ ಪರಿಗಣಿಸಲಾಗಿದೆ. ಈ ವಿಚಾರದ ಬಗ್ಗೆ ನಂತರ ನಾನು ಚರ್ಚೆ ಮಾಡುತ್ತೇನೆ. ಸಚಿವರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

click me!