
ಬೆಂಗಳೂರು(ಅ.24): ರಾಜ್ಯದಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ನೆರವಾಗಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಬೆಳಗಾವಿ, ಉತ್ತರ ಕನ್ನಡ, ಕೊಡಗು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದಾಗಿ ಜನತೆಗೆ ಸಂಕಷ್ಟಉಂಟಾಗಿದೆ. ನೊಂದ ಸಂತ್ರಸ್ತರಿಗೆ ಮಾನವೀಯ ನೆಲೆಗಟ್ಟಿನ ಮೇಲೆ ರಾಜ್ಯದ ಜನತೆ ಸ್ಪಂದಿಸಬೇಕು ಎಂದು ಕೋರಿದ್ದಾರೆ.
ಕಳಸಾ-ಬಂಡೂರಿ ಯೋಜನೆ ದಾರಿ ಶೇ.90 ಸುಗಮ: ಸಿಎಂ.
ಗಾಯದ ಮೇಲೆ ಬರೆ ಎಳೆದಂತೆ ರಾಜ್ಯದಲ್ಲಿ ಮಳೆಯ ರುದ್ರನರ್ತನ ಮುಂದುವರೆದಿದ್ದು, 13 ಮಂದಿಯನ್ನು ಬಲಿ ಪಡೆದಿದೆ. ನೆರೆ ಸಂತ್ರಸ್ತರಿಗೆ ನೆರವಾಗಲು ಮತ್ತು ಬದುಕನ್ನು ಕಟ್ಟಿಕೊಳ್ಳಲು ಸ್ವಪ್ರೇರಣೆಯಿಂದ ದೇಣಿಗೆ ನೀಡಬೇಕು. ಆಸ್ತಕರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆಯನ್ನು ನೀಡಬಹುದು. ಪೇಟಿಎಂ, ಗೂಗಲ್ ಪೇ, ಅಮೆಜಾನ್ ಪೇ, ಫೋನ್ ಪೇ ಮತ್ತು ಕ್ಯೂ.ಆರ್. ಕೋಡ್‌ಗಳ ಮೂಲಕವೂ ದೇಣಿಗೆ ನೀಡಲು ಅವಕಾಶ ಇದೆ. ಆದಾಯ ತೆರಿಗೆ ಕಾಯ್ದೆ 80ಜಿ (2) ಅಡಿ ಅದಕ್ಕೆ ತೆರಿಗೆ ವಿನಾಯಿತಿ ಇದೆ ಎಂದು ಹೇಳಿದ್ದಾರೆ.
ಇಲ್ಲಿಗೆ ದೇಣಿಗೆ ನೀಡಿ
ಖಾತೆಯ ಹೆಸರು - Chief Minister Relief Fund Natural Calamity
ಬ್ಯಾಂಕ್ ಹೆಸರು - SBI (State Bank of India)
ಶಾಖೆ - Vidhanasoudha Branch
ಖಾತೆ ಸಂಖ್ಯೆ - 37887098605
ಚೆಕ್/ಡಿಡಿ ಕಳುಹಿಸಬೇಕಾದ ವಿಳಾಸ - ನಂ.235-ಎ, 2ನೇ ಮಹಡಿ, ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆ, ವಿಧಾನಸೌಧ, ಬೆಂಗಳೂರು - 560001
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ