ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೋನ ಕೇಸ್‌ಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 14 ದಿನಗಳವರೆಗೆ ಲಾಕ್‌ಡೌನ್ ತೀರ್ಮಾನ ತೆಗೆದುಕೊಂಡಿದೆ.
ಬೆಂಗಳೂರು(ಏ.27): ಕೋವಿಡ್‌ನ ಎರಡನೇ ಅಲೆಯ ತೀವ್ರತೆ ಗಂಭೀರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಒಳಗೊಂಡ ಎರಡು ವಾರಗಳ ಜನತಾ ಕಫä್ರ್ಯ ಜಾರಿಗೊಳಿಸಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.
ಅದರನ್ವಯ ಮಂಗಳವಾರ ರಾತ್ರಿ 9 ಗಂಟೆಯಿಂದ ಮೇ 12ರ ಬೆಳಗ್ಗೆ 6 ಗಂಟೆವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಆರ್ಥಿಕ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಪ್ರತಿನಿತ್ಯ ಬೆಳಗ್ಗೆ 6 ಗಂಟೆಯಿಂದ 10ರವರೆಗೆ ಕೇವಲ 4 ಗಂಟೆಗಳ ಕಾಲ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಈ ವೇಳೆ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಖರೀದಿಸಬಹುದಾಗಿದೆ. ಸಾರ್ವಜನಿಕ ಸಾರಿಗೆ ನಿರ್ಬಂಧಿಸಲಾಗಿದೆ. ಅನಿವಾರ‍್ಯ ಕಾರಣವಿದ್ದರೆ ಮಾತ್ರ ಸ್ವಂತ ವಾಹನದಲ್ಲಿ ತೆರಳಲು ಅವಕಾಶ ಕಲ್ಪಿಸಲಾಗಿದೆ.
undefined
ಸೋಮವಾರ ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜನತಾ ಕಫä್ರ್ಯ ಹೇರಲು ನಿರ್ಧಾರ ಕೈಗೊಳ್ಳಲಾಯಿತು. ಆ ಸಭೆಯ ತೀರ್ಮಾನದಂತೆ ರಾತ್ರಿ ಹೊತ್ತಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಹೊಸ ಮಾರ್ಗಸೂಚಿಯನ್ನು ಅಧಿಕೃತವಾಗಿ ಪ್ರಕಟಿಸಿದರು.
ಮೇ ನಲ್ಲಿ ಕೊರೊನಾ ವೈರಸ್ ಉತ್ತುಂಗಕ್ಕೆ, ಕಂಟ್ರೋಲ್‌ಗೆ ತಜ್ಞರು ಹೇಳೋದೇನು.?
ಮಹಾರಾಷ್ಟ್ರ ರಾಜಧಾನಿ ಮುಂಬೈಯಲ್ಲಿ ಅಲ್ಲಿನ ಸರ್ಕಾರ ಕಟ್ಟುನಿಟ್ಟಿನ ಜನತಾ ಕಫä್ರ್ಯ ಜಾರಿಗೊಳಿಸಿದ ಬಳಿಕವೇ ಕೋವಿಡ್ ಪ್ರಕರಣಗಳ ಪ್ರಮಾಣ ಇಳಿಮುಖವಾಗಿದೆ. ಹೀಗಾಗಿ, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿತು.
ಬಸ್ ಇಲ್ಲ:
ವಾರಾಂತ್ಯ ಕಫä್ರ್ಯ ರೀತಿಯಲ್ಲಿಯೇ ಮಂಗಳವಾರದಿಂದ ರಾತ್ರಿಯಿಂದ 14 ದಿನಗಳ ಕಾಲ ತುರ್ತು ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಳ್ಳಲಿದೆ. ಆದರೆ, ಈ ಅವಧಿಯಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಮೆಟ್ರೋ ಸೇರಿದಂತೆ ಯಾವುದೇ ರೀತಿಯ ಸಾರ್ವಜನಿಕ ಸಾರಿಗೆ ವಾಹನ ವ್ಯವಸ್ಥೆ ಇರುವುದಿಲ್ಲ. ಜನರು ತಮ್ಮ ಸ್ವಂತ ವಾಹನಗಳಲ್ಲಿಯೂ ಅನಿವಾರ್ಯ ಕಾರಣ ಹೊರತುಪಡಿಸಿ ಅನಗತ್ಯವಾಗಿ ಸಂಚರಿಸುವಂತಿಲ್ಲ.
ಇವೆಲ್ಲ ಬಂದ್:
ಸಿನಿಮಾ ಮಂದಿರ, ಶಾಪಿಂಗ್ ಮಾಲ್‌ಗಳು, ಯೋಗ ಕೇಂದ್ರಗಳು, ಜಿಮ್‌ಗಳು, ಸ್ವಿಮಿಂಗ್ ಫäಲ್, ಪಾರ್ಕ್ಗಳು, ರಾಜಕೀಯ, ಧಾರ್ಮಿಕ ಕಾರ್ಯಗಳನ್ನು ನಿಷೇಧಿಸಲಾಗಿದೆ. ಹೊಟೇಲ್, ರೆಸ್ಟೋರೆಂಟ್‌ನಲ್ಲಿ ಕುಳಿತು ಊಟ ಮಾಡಲು ಅವಕಾಶ ಇಲ್ಲ. ಬದಲಿಗೆ ಪಾರ್ಸಲ್ ಕೊಂಡೊಯ್ಯುವುದಕ್ಕೆ ಅನುಮತಿ ನೀಡಲಾಗಿದೆ. ಮದ್ಯದಂಗಡಿಗಳಿಗೆ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ತೆರೆಯಲು ಅನುಮತಿ ನೀಡಲಾಗಿದ್ದು, ನಾಲ್ಕು ತಾಸುಗಳ ಕಾಲ ಮಾತ್ರ ಮಾರಾಟ ಮಾಡಬಹುದು. ಮನೆಗೆ ಕೊಂಡೊಯ್ಯಲು ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೆ, ಹಣ್ಣು, ತರಕಾರಿ, ಮಾಂಸದಂಗಡಿ, ಹಾಲು ಮಾರಾಟ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟವು ಸಹ ನಾಲ್ಕು ತಾಸುಗಳಿಗೆ ಮಾತ್ರ ಅನುವು ಮಾಡಿಕೊಡಲಾಗಿದೆ.
ಗಾರ್ಮೆಂಟ್ಸ್ ಇಲ್ಲ:
ಗಾರ್ಮೆಂಟ್ಸ್ ಹೊರತುಪಡಿಸಿ ಇನ್ನುಳಿದ ಉತ್ಪಾದನಾ ವಲಯಕ್ಕೆ ಅನುಮತಿ ನೀಡಲಾಗಿದೆ. ವಿಮಾನ ,ರೈಲು ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ. ಆದರೆ, ವಿಮಾನ ನಿಲ್ದಾಣ, ರೈಲು ನಿಲ್ದಾಣಕ್ಕೆ ಪ್ರಯಾಣಿಸುವವರಿಗಾಗಿ ವಿಮಾನ ನಿಲ್ದಾಣಕ್ಕೆ ತೆರಳುವ ಬಸ್‌ಗಳು, ಕ್ಯಾಬ್‌ಗಳ ಅವಕಾಶ ಮಾಡಿಕೊಡಲಾಗಿದೆ. ಕಡ್ಡಾಯವಾಗಿ ಪ್ರಯಾಣಿಕರು ಟಿಕೆಟ್ ಹೊಂದಿರಬೇಕು. ಶಾಲಾ-ಕಾಲೇಜುಗಳು, ಕೋಚಿಂಗ್ ಸಂಸ್ಥೆಗಳ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಆನ್‌ಲೈನ್ ಶಿಕ್ಷಣಕ್ಕೆ ಯಾವುದೇ ಸಮಸ್ಯೆ ಇಲ್ಲವಾಗಿದ್ದು, ಎಂದಿನಂತೆ ನಡೆಯಲಿದೆ. ಭಾರತೀಯ ಸ್ವಿಮಿಂಗ್ ಫೆಡರೇಷನ್‌ನಿಂದ ಅನುಮತಿ ಪಡೆದು ಕ್ರೀಡಾಪಟುಗಳಿಗೆ ತರಬೇತಿ ನೀಡುವ ಸ್ವಿಮೀಂಗ್ ಫäಲ್‌ಗೆ ಮಾತ್ರ ಅನುಮತಿ ನೀಡಲಾಗಿದೆ. ಮೈದಾನದಲ್ಲಿಯೂ ಕ್ರೀಡಾಪಟುಗಳು ತರಬೇತಿ ಪಡೆಯಲು ಅವಕಾಶ ನೀಡಲಾಗಿದೆ.
ಮನೆಯಿಂದ ಹೊರಬರಬೇಡಿ- ಸಿಎಂ:
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಮಂಗಳವಾರ ಸಂಜೆಯಿಂದ ಹೊಸದಾಗಿ ಕೋವಿಡ್ ಕಫä್ರ್ಯ ಜಾರಿಗೆ ಬರಲಿದೆ. ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಮಾತ್ರ ಹಾಲು, ತರಕಾರಿ, ದಿನಸಿ ವಸ್ತುಗಳು ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ವಿನಾಯಿತಿ ನೀಡಲಾಗಿದೆ. ಬೆಳಗ್ಗೆ 10 ಗಂಟೆಯ ಬಳಿಕ ವ್ಯಾಪಾರಸ್ಥರು, ಪೊಲೀಸರ ಮಧ್ಯಪ್ರವೇಶ, ಬಲಪ್ರಯೋಗಕ್ಕೆ ಅವಕಾಶ ಇಲ್ಲದ ರೀತಿಯಲ್ಲಿ ತಮ್ಮ ಎಲ್ಲ ರೀತಿಯ ವಹಿವಾಟನ್ನು ಸ್ಥಗಿತಗೊಳಿಸುವ ಮೂಲಕ ಕಫä್ರ್ಯಗೆ ಸಹಕಾರ ನೀಡಬೇಕು. ಸಾರ್ವಜನಿಕರು ಯಾವುದೇ ಕಾರಣಕ್ಕು ಮನೆಯಿಂದ ಹೊರಗೆ ಬರಬಾರದು ಎಂದು ಹೇಳಿದರು.
ಗೂಡ್ಸ್ ವಾಹನಗಳ ಓಡಾಟಕ್ಕೆ ಯಾವುದೇ ಸಮಸ್ಯೆ ಇರುವುದಿಲ್ಲ. ಹಣ್ಣು, ತರಕಾರಿ ಸೇರಿದಂತೆ ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಅವಕಾಶ ನೀಡಲಾಗಿದೆ. ಅಂತಾರಾಜ್ಯ ಗೂಡ್ಸ್ ವಾಹನಗಳ ಸಂಚಾರ ಇರಲಿದೆ. ಗಾರ್ಮೆಂಟ್ಸ್ ಹೊರತುಪಡಿಸಿ ಇತರೆ ಉತ್ಪಾದನೆ, ಕಟ್ಟಡ ನಿರ್ಮಾಣ, ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇಲ್ಲ. ಉಳಿದಂತೆ ಎಲ್ಲಾ ಚಟುವಟಿಕೆಗಳು, ವಹಿವಾಟಿಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಹೇರಿರುವ ನಿರ್ಬಂಧವನ್ನು ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿ, ತಾಲೂಕು ಮಟ್ಟದಲ್ಲಿ ತಹಶೀಲ್ದಾರ್‌ಗಳು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಈ ಅಧಿಕಾರಿಗಳು ನೋಡಲ್ ಅಧಿಕಾರಿಗಳಾಗಿರುತ್ತಾರೆ ಎಂದು ತಿಳಿಸಿದರು.
ಬೆಂಗಳೂರಲ್ಲಿ ಕೋವಿಡ್ ಸೋಂಕಿನ ಸಂಖ್ಯೆಗಳು ಮಹಾರಾಷ್ಟ್ರ ರಾಜ್ಯವನ್ನು ಮೀರಿಸುತ್ತಿದೆ. ಪ್ರತಿನಿತ್ಯ 20 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟದ ಎಲ್ಲಾ ಸಹದ್ಯೋಗಿಗಳ ಜತೆ ಮತ್ತು ಕೋವಿಡ್ ನಿಯಂತ್ರಣ ಸಂಬಂಧ ರಚನೆಯಾಗಿರುವ ತಜ್ಞರ ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ಚರ್ಚೆ ನಡೆಸಿದ ಬಳಿಕ ರಾಜ್ಯದಲ್ಲಿ ಸಂಪೂರ್ಣ ಕಫä್ರ್ಯ ವಿಧಿಸಲು ತೀರ್ಮಾನಿಸಲಾಗಿದೆ. 14 ದಿನಗಳ ಬಿಗಿ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಪ್ರಕರಣಗಳು ಇದೇ ರೀತಿ ಹೆಚ್ಚಾಗುತ್ತಿದ್ದರೆ ಮತ್ತಷ್ಟುದಿನ ಕಫä್ರ್ಯವನ್ನು ಮುಂದುವರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಆಮ್ಲಜನಕ ಕೊರತೆ ಇಲ್ಲ. ಸರ್ಕಾರವು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. 300 ಟನ್‌ನಿಂದ 800 ಟನ್‌ವರೆಗೆ ಕೇಂದ್ರ ಪೂರೈಕೆ ಮಾಡಲು ಒಪ್ಪಿಗೆ ನೀಡಿದೆ. ಹೀಗಾಗಿ ಯಾವುದೇ ಚಿಂತೆ ಪಡಬೇಕಾದ ಅಗತ್ಯ ಇಲ್ಲ. ರೆಮಿಡಿಸಿವಿರ್ ಅನ್ನು 50 ಸಾವಿರದಿಂದ 1.20 ಲಕ್ಷಕ್ಕೆ ಹೆಚ್ಚಿಸಿ ಕೇಂದ್ರವು ಪೂರೈಕೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆ ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದರು.