ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಸರ್ವ ಪಕ್ಷಗಳ ಸಭೆ ಕರೆದ ಸಿಎಂ, ಲಾಕ್‌ಡೌನ್ ಆಗುತ್ತಾ?

Published : Apr 12, 2021, 04:50 PM ISTUpdated : Apr 12, 2021, 04:54 PM IST
ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಸರ್ವ ಪಕ್ಷಗಳ ಸಭೆ ಕರೆದ ಸಿಎಂ, ಲಾಕ್‌ಡೌನ್ ಆಗುತ್ತಾ?

ಸಾರಾಂಶ

ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸರ್ವಪಕ್ಷ ಸಭೆ ಕರೆದಿದ್ದಾರೆ.

ಬೆಂಗಳೂರು, (ಏ.12): ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಕೊರೋನಾ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಸಿಎಂ ಸರ್ವಪಕ್ಷಗಳ ಸಭೆ ಕರೆದಿದ್ದಾರೆ.

ಇಂದು (ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ವಪಕ್ಷ ಸಭೆ ಕರೆಯಲಾಗುವುದು. ಏಪ್ರಿಲ್ 18, 19ರಂದು ಸಭೆ ಕರೆದು ಚರ್ಚಿಸಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

Fact Check; ಏ. 19ರವರೆಗೆ ಭಾರತದಲ್ಲಿ ಲಾಕ್‌ಡೌನ್? 

ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಎಚ್.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲರೊಂದಿಗೂ ಚರ್ಚಿಸಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಕೊರೋನಾ ಕುರಿತಾಗಿ ಜನರು ಹೆಚ್ಚು ಜಾಗೃತರಾಗಿರಬೇಕು. ಕಟ್ಟುನಿಟ್ಟಾಗಿ ನಿಯಮಗಳನ್ನು ಪಾಲಿಸಬೇಕು. ಜನರು ಸಹಕರಿಸದಿದ್ದರೆ ಅನಿವಾರ್ಯವಾಗಿ ಲಾಕ್ ಡೌನ್ ಮೊರೆ ಹೋಗಬೇಕಾದ ಸ್ಥಿತಿ ಬರಬಹುದು ಎಂದು ಸಿಎಂ ಎಚ್ಚರಿಕೆ ಕೊಟ್ಟರು.

ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ದಿನಕ್ಕೆ ಕನಿಷ್ಠ 10 ಸಾವಿರ ಪ್ರಕರಣಗಳು ಪತ್ತೆಯಾಗುತ್ತಿವೆ. ಇದರಿಂದ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಈ ಸರ್ವ ಪಕ್ಷಗಳ ಸಭೆ ಕರೆದಿದ್ದು, ಲಾಕ್‌ಡೌನ್ ಮಾಡುವ ಬಗ್ಗೆಯೂ ಚರ್ಚೆಗಳು ನಡೆಯುವ ಸಾಧ್ಯತೆಗಳಿವೆ. 

ಒಟ್ಟಿನಲ್ಲಿ ಸಾರ್ವಜನಿಕರು ಎಚ್ಚರದಿಂದ ಇರಬೇಕು. ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಹಾಗೂ ಅನಗತ್ಯವಾಗಿ ಸುತ್ತಾಡುವುದನ್ನು ಬಿಡಬೇಕು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 10 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!