ದಿಢೀರ್ ಸಚಿವ ಸಂಪುಟ ಸಭೆ ಕರೆದ ಬಿಎಸ್‌ವೈ: ಲಾಕ್‌ಡೌನ್ ಸಡಿಲ ಅಥವಾ ಬಿಗಿ ನಾ..?

By Suvarna News  |  First Published Apr 16, 2020, 7:27 PM IST
ರಾಜ್ಯದಲ್ಲಿ ಕೋರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ. ಲಾಕ್‌ಡೌನ್‌ ಸಡಿಲ ಅಥವಾ ಮತ್ತಷ್ಟು ಬಿಗಿ ನಾ?

ಬೆಂಗಳೂರು, (ಏ.16): ಕರ್ನಾಟದಲ್ಲಿ ಕೊರೋನಾ ರುದ್ರ ನರ್ತನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ರಾಜ್ಯ ಸರ್ಕಾರದ ನಿದ್ದೆಗೆಡಿಸಿದೆ. 

 ಏಪ್ರಿಲ್ 20 ರಂದು ಸೋಂಕಿನ ಪ್ರಮಾಣ, ಲಾಕ್ ಡೌನ್ ನಿರ್ಬಂಧದ ಅವಲೋಕನ ಮಾಡುವುದಾಗಿ ಪ್ರಧಾನಿ ಮೋದಿ ಹೇಳಿದ್ದರು. ಆದ್ರೆ, ರಾಜ್ಯದಲ್ಲಿ ಸೊಂಕು ಹೆಚ್ಚುತ್ತಿರುವುದರಿಂದ ಲಾಕ್‌ಡೌನ್‌ ಸಡಿಲಗೊಳಿಸುವುದು ಕಷ್ಟ ಸಾಧ್ಯ.

ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 36 ಕೊರೋನಾ ಕೇಸ್‌ಗಳು ಪತ್ತೆಯಾಗಿವೆ. ಹೀಗಾಗಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಸಚಿವ ಸಂಪುಟ ಸಭೆ ಸಭೆ ಕರೆದಿದ್ದಾರೆ.

ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ 3 ಕಠಿಣ ಕ್ರಮ ಇಂದಿನಿಂದಲೇ ಜಾರಿ

 ಏಪ್ರಿಲ್ 20ರಂದು ಬೆಳಗ್ಗೆ 11 ಗಂಟೆಗೆ ಸಿಎಂ ಯಡಿಯೂರಪ್ಪ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ರಾಜ್ಯದಲ್ಲಿ ಲಾಕ್‌ಡೌನ್ ಮುಂದುವರೆಸಬೇಕೆ? ಬೇಡವೇ? ಎಂಬುದರ ಬಗ್ಗೆ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.

ಲಾಕ್‌ಡೌನ್ ಇದ್ರೂ, ಸಾರ್ವಜನಿಕರು ಬೇಕಾಬಿಟ್ಟಿ ಸಂಚರಿಸುತ್ತಿದ್ದಾರೆ. ಕೊರೋನಾ ವೈರಸ್‌ನ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಾ ಹೋಗುತ್ತಿದೆ. ಇದು ಹೀಗೇ ಮುಂದುವರಿದರೆ ವೈರಸ್‌ನ ನಿಯಂತ್ರಣ ಹೇಗೆ? ಸರ್ಕಾರ ಮುಂದೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು? ಎಂಬುದರ ಬಗ್ಗೆ ಈ ಸಭೆಯಲ್ಲಿ ಚರ್ಚಿಸಿ ಹಲವು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ.

ಅಷ್ಟೇ ಅಲ್ಲದೇ ಕೊರೋನಾ ಸೋಂಕು ಹೆಚ್ಚಾಗಿರುವ ಜಿಲ್ಲೆಗಳಲ್ಲಿ ನಿರ್ಬಂಧ ಇನ್ನಷ್ಟು ಕಠಿಣಗೊಳಿಸಿ, ಗ್ರೀನ್ ಝೋನ್ ವ್ಯಾಪ್ತಿಯಲ್ಲಿ ನಿರ್ಬಂಧ ಸಡಿಲಗೊಳಿಸುವ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ.

ಒಟ್ಟಿನಲ್ಲಿ ಸೋಂಕು ನಿಯಂತ್ರಣಕ್ಕೆ ಬಂದ್ರೆ ಏಪ್ರಿಲ್ 20ರ ನಂತರ ಲಾಕ್‌ಡೌನ್‌ ಸಡಿಲಗೊಳಿಸುವ ಯೋಚನೆಯನ್ನು ರಾಜ್ಯ ಸರ್ಕಾರ ಮಾಡತ್ತು. ಆದ್ರೆ, ಗುರುವಾರದ ಅಂಕಿ-ಸಂಖ್ಯೆಗಳನ್ನು ನೋಡಿದ್ರೆ ಲಾಕ್‌ಡೌನ್ ಸಡಿಲಗೊಳಿಸುವ ಯೋಚನೆಯನ್ನು ಕೈಬಿಟ್ಟು ಮತ್ತಷ್ಟು ಬಿಗಿಗೊಳಿಸಿ ರೆಡ್‌ ಝೋನ್‌ನಲ್ಲಿರೋ ಜಿಲ್ಲೆಗಳನ್ನ ಸೀಲ್‌ಡೌನ್ ಮಾಡಿದ್ರೂ ಅಚ್ಚರಿಪಡಬೇಕಿಲ್ಲ.
click me!