* ನಾಯಕತ್ವ ಬದಲಾವಣೆ ಮಧ್ಯೆ ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್
* ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಮನವಿಗೆ ಸ್ಪಂದಿಸಿದ ಸಿಎಂ
* ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ನೀಡಲು ಸಿಎಂ ಆದೇಶ
ಬೆಂಗಳೂರು, (ಜು.20): ಕೋವಿಡ್ ಕಾರಣದಿಂದ ಸ್ಥಗಿತಗೊಂಡಿದ್ದ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ.
ನಾಯಕತ್ವ ಬದಲವಾಣೆ ಚರ್ಚೆ ಮಧ್ಯೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು (ಮಂಗಳವಾರ) ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
undefined
ಉಗ್ರರ ದಾಳಿ ಭೀತಿಗೆ ದೆಹಲಿ ಹೈ ಅಲರ್ಟ್, BSYಗೆ ಕಾಂಗ್ರೆಸ್ ಸಪೋರ್ಟ್; ಜು.20ರ ಟಾಪ್ 10 ಸುದ್ದಿ!
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರು ಮಾಡಿಕೊಂಡ ಮನವಿಗೆ ಸ್ಪಂದಿಸಿರುವ ಸರ್ಕಾರ, ತಕ್ಷಣ ಹಿಂದಿನ ಬಾಕಿಯೂ ಸೇರಿ ಶೇ.11 ತುಟ್ಟಿ ಭತ್ಯೆಯನ್ನು ಜುಲೈ 1ರಿಂದ ಅನ್ವಯವಾಗುವಂತೆ ಬಿಡುಗಡೆ ಮಾಡಲು ಆದೇಶಿಸಿದ್ದಾರೆ.
ರಾಜ್ಯ ಸರ್ಕಾರದ ಈ ಆದೇಶದಿಂದ 6 ಲಕ್ಷ ಸರ್ಕಾರಿ ನೌಕರರು, 4.5 ಲಕ್ಷ ಪಿಂಚಣಿದಾರರು ಹಾಗೂ 3 ಲಕ್ಷ ನಿಗಮ ಮಂಡಳಿ ನೌಕರರಿಗೆ ಅನ್ವಯವಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ತಿಳಿಸಿದ್ದಾರೆ.