
ಬೆಂಗಳೂರು, (ಆ.04): ನಾಳೆ ಅಂದ್ರೆ ಆಗಸ್ಟ್ 5ರಂದು ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಕೆ ಹಿನ್ನೆಲೆಯಲ್ಲಿ ರಾಜ್ಯದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಳೆ ಪ್ರಭು ಶ್ರೀರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಐತಿಹಾಸಿಕ ಶ್ರೀರಾಮ ದೇಗುಲಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಮತ್ತು ಪ್ರತಿ ಮನೆಗಳಲ್ಲಿ ಇಷ್ಟದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಬೇಕೆಂದು ರಾಜ್ಯದ ಜನತೆಯಲ್ಲಿ ಸಿಎಂ ಮನವಿ ಮಾಡಿದ್ದಾರೆ.
ಆಗಸ್ಟ್ 5ರಂದು ಕರ್ನಾಟಕದಾದ್ಯಂತ ಪೊಲೀಸ್ ಸರ್ಪಗಾವಲು: ಬಾಲ ಬಿಚ್ಚಿದ್ರೆ ಹುಷಾರ್
ಆಯೋಧ್ಯೆಯಲ್ಲಿ ರಾಮ ಮಂದಿರ ಭೂಮಿ ಪೂಜೆ ನೆರವೇರುವ ಸಂದರ್ಭದಲ್ಲಿ ರಾಜ್ಯದ ಧಾರ್ಮಿಕದತ್ತಿ ಇಲಾಖೆ, ಖಾಸಗಿ ದೇವಸ್ಥಾನಗಳಲ್ಲಿ ಪೂಜೆ ನಡೆಸಿ ಶ್ರೀರಾಮ ಮಂದಿರ ನಿರ್ಮಾಣ ಮಂಗಳಕರವಾಗರಲಿ ಎಂಬಆಶಯವನ್ನ ಸಿಎಂ ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಸೂಚನೆ ಮೇರೆಗೆ ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ