ರಾಜ್ಯದಲ್ಲಿ ಮತ್ತೆ ಕೊರೋನಾ ಏರಿಕೆ: ಸಾರ್ವಜನಿಕರಿಗೆ ಸಿಎಂ ವಿಶೇಷ ಮನವಿ

By Suvarna NewsFirst Published Mar 19, 2021, 5:29 PM IST
Highlights

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಅಬ್ಬರ ತೀವ್ರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಾಜ್ಯದ ಜನತೆಗೆ ಮನವಿಯೊಂದು ಮಾಡಿಕೊಂಡಿದ್ದಾರೆ.

ಬೆಂಗಳೂರು, (ಮಾ.19): ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಮತ್ತೆ ತೀವ್ರವಾಗುತ್ತಿದೆ. ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದ್ರೆ ನಾಗರೀಕರ ಸಹಕಾರವಿಲ್ಲದೇ ಇದು ಯಶಸ್ವಿಯಾಗದು. ಹೀಗಾಗಿ ರಾಜ್ಯದ ಜನರು ಎಲ್ಲಾ ಸುರಕ್ಷತಾ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವ ಮೂಲಕ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಈ ಕುರಿತಂತೆ ರಾಜ್ಯದ ಜನರನ್ನು ಉದ್ದೇಶಿಸಿ ಪತ್ರದ ಮೂಲಕ ಮನವಿ ಮಾಡಿಕೊಂಡಿರುವ ಸಿಎಂ, ನಾಗರೀಕ ಬಂಧುಗಳೇ.. ಕೋವಿಡ್-19 ಸಾಂಕ್ರಾಮಿಕ ಪ್ರಕರಣಗಳ ಸಂಖ್ಯೆ ಮತ್ತೆ ತೀವ್ರವಾಗುತ್ತಿದೆ. ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದ್ರೆ, ನಾಗರೀಕರ ಸಹಕಾರವಿಲ್ಲದೆ ಇದು ಯಶಸ್ವಿಯಾಗದು. ಮಾಸ್ಕ್ ಧಾರಣೆ, ಸ್ವಚ್ಛತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ನಮ್ಮ ಜೀವನಕ್ರಮವಾಗಲಿ, ಈ ಮುನ್ನೆಚ್ಚರಿಕೆಯ ಕ್ರಮಗಳ ನಿರ್ಲಕ್ಷ್ಯ ಸರ್ವಥಾ ಸಲ್ಲದು.

ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿಯಾಗುತ್ತಾ ಎನ್ನುವ ಸುದ್ದಿಗೆ ಗೃಹ ಸಚಿವರ ಸ್ಪಷ್ಟನೆ

ಹಿರಿಯ ನಾಗರೀಕರು, ಇತರ ಆರೋಗ್ಯ ಸಮಸ್ಯೆಯುಳ್ಳ 45 ರಿಂದ 60 ವರ್ಷದೊಳಗಿನ ವ್ಯಕ್ತಿಗಳು ತಪ್ಪದೇ ಲಸಿಕೆ ಪಡೆದುಕೊಂಡು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ. ಆದ್ರೇ ಮುನ್ನೆಚ್ಚರಿಕೆಯ ಕ್ರಮಗಳ ಪಾಲನೆಯ ನಿರಂತರವಾಗಿ ಮುಂದುವರೆಯಲಿ. ಸಾರ್ವಜನಿಕ ಸ್ಥಳಗಳಲ್ಲಿ ಈ ಕ್ರಮಗಳನ್ನು ತಪ್ಪದೇ ಪಾಲಿಸುವ ಮೂಲಕ, ನಮ್ಮ ಜವಾಬ್ದಾರಿಯನ್ನು ನಿರ್ವಹಿಸೋಣ. ಕೋವಿಡ್-19 ನಿಯಂತ್ರಿಸೋಣ ಎಂದು ಮನವಿ ಮಾಡಿಕೊಂಡಿದ್ದಾರೆ.

"ಎಲ್ಲಾ ಸುರಕ್ಷತಾ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವ ಮೂಲಕ ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ" : ರಾಜ್ಯದ ಸಮಸ್ತ ನಾಗರಿಕರಲ್ಲಿ ಮುಖ್ಯಮಂತ್ರಿ ರವರ ಮನವಿ. pic.twitter.com/LbQBfOAl2u

— CM of Karnataka (@CMofKarnataka)
click me!