ಕಲಬುರಗಿ ಜಿಲ್ಲಾಧಿಕಾರಿ ವರ್ಗಾವಣೆ: 2 ಗಂಟೆಯಲ್ಲೇ ಆದೇಶ ವಾಪಸ್..!

By Suvarna NewsFirst Published Apr 28, 2020, 9:33 PM IST
Highlights

ಕೊರೋನಾ ವಿರುದ್ದ ಟೊಂಕ ಕಟ್ಟಿ ಹೋರಾಡುತ್ತಿರುವ ಕಲಬುರಗಿ ಜಿಲ್ಲಾಧಿಕಾರಿಯನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ ಎರಡೇ ಗಂಟೆಗಳಲ್ಲಿ ಬಿಎಸ್ ಯಡಿಯೂರಪ್ಪ ಬ್ರೇಕ್ ಹಾಕಿದ್ದಾರೆ. 

ಬೆಂಗಳೂರು, (ಏ.28): ಕಲಬುರಗಿ ಜಿಲ್ಲಾಧಿಕಾರಿ ಬಿ. ಶರತ್ ವರ್ಗಾವಣೆಗೆ ಸಿಎಂ ಬಿಎಸ್ ಯಡಿಯೂರಪ್ಪ ತಡೆ ಹಿಡಿದಿದ್ದಾರೆ.

ಎರಡು ಗಂಟೆ ಹಿಂದೆ ಅಷ್ಟೆ ಕಲಬುರಗಿ ಜಿಲ್ಲಾಧಿಕಾರಿ ಶರತ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದ್ರೆ, ಇದೀಗ ಏಕಾಏಕಿ ಯಡಿಯೂರಪ್ಪ ತಡೆಹಿಡಿದಿದ್ದಾರೆ.

ಖುದ್ದು ಯಡಿಯೂರಪ್ಪ ಅವರೇ ಜಿಲ್ಲಾಧಿಕಾರಿ ಶರತ್ ಅವರಿಗೆ ದೂರವಾಣಿ ಕರೆ ಮಾಡಿದ್ದು, ಅವರ ಕಾರ್ಯವೈಖರಿಯನ್ನು ಪ್ರಶಂಶಿಸಿದರು. ಅಲ್ಲದೇ ವರ್ಗಾವಣೆ ಮಾಡುವುದಿಲ್ಲ. ನೀವೇ ಮುಂದುವರಿಯಿರಿ ಎಂದು ಹೇಳಿದ್ದಾರೆ.

ಕೊರೋನಾ ವಿರುದ್ಧ ಹಗಲಿರುಳು ಹೋರಾಡುತ್ತಿರುವ ಕಲಬುರಗಿ ಜಿಲ್ಲಾಧಿಕಾರಿ ದಿಢೀರ್ ಎತ್ತಂಗಡಿ...!

ದಿನದಿಂದ ದಿನಕ್ಕೆ ಕಲಬುರಗಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು,ಇದನ್ನು ತಡೆಗಟ್ಟುಲು ಜಿಲ್ಲಾಧಿಕಾರಿ ಶರತ್ ಹಗಲು ರಾತ್ರಿ ಹೋರಾಟ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಡಿಸಿ ಶರತ್ ಅವರನ್ನು ರಾಜ್ಯ ಸರ್ಕಾರ ದಿಢೀರ್ ಎತ್ತಂಗಡಿ ಮಾಡಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು.

ಇನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ಸುರಾರ್ಲಕರ್ ವಿಕಾಸ್ ಕಿಶೋರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಲಬುರಗಿ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿತ್ತು.

click me!