
ಬೆಂಗಳೂರು, (ಏ.24): ಕರ್ನಾಟಕಕ್ಕೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ರೆಮ್ಡೆಸಿವಿರ್ ಔಷಧ ಮತ್ತು ಆಕ್ಸಿಜನ್ ಪೂರೈಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಈವರೆಗೆ ಪ್ರತಿದಿನ ಪೂರೈಕೆಯಾಗುತ್ತಿದ್ದ 50 ಸಾವಿರ ರೆಮ್ಡೆಸಿವಿರ್ ಔಷಧವನ್ನು 1,20,000ಕ್ಕೆ ಏರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಇದು ಏಪ್ರಿಲ್ 27ರವರೆಗೂ ಮುಂದುವರೆಯಲಿದೆ. ಜತೆಗೆ ಈವರೆಗೆ ಪ್ರತಿದಿನ ಕರ್ನಾಟಕಕ್ಕೆ ದೊರೆಯುತ್ತಿದ್ದ 300 ಮೆಟ್ರಿಕ್ ಟನ್ ವೈದ್ಯಕೀಯ ಆಮ್ಲಜನಕದಪ್ರಮಾಣವೂ ಹೆಚ್ಚಳವಾಗಲಿದ್ದು ಇನ್ನುಮುಂದೆ 800 ಮೆಟ್ರಿಕ್ ಟನ್ ದೊರೆಯಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ಆಕ್ಸಿಜನ್ ಕೊರತೆ: ಅನುಮಾನ ವ್ಯಕ್ತಪಡಿಸಿದ ಅಶ್ವತ್ಥನಾರಾಯಣ
ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ ಸಿಎಂ ಬಿಎಸ್‌ವೈ, ರೆಮ್ಡೆಸಿವಿರ್ ಮತ್ತು ಆಕ್ಸಿಜನ್ ಪ್ರಮಾಣವನ್ನ ಹೆಚ್ಚಿಸಿದ್ದರಿಂದ ನಮ್ಮ ಕೊರೊನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ಸಿಕ್ಕಂತಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರಿಗೆ ಧನ್ಯವಾದ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ