ಟ್ರಂಪ್ ಔತಣಕೂಟಕ್ಕೆ ಆಮಂತ್ರಣ: ದೆಹಲಿಗೆ ಸಿಎಂ ಪ್ರಯಾಣ

By Suvarna NewsFirst Published Feb 24, 2020, 9:41 PM IST
Highlights

ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಂಗಳವಾರದ ಎಲ್ಲಾ ಕಾರ್ಯಕ್ರಮಗಳನ್ನ ರದ್ದುಪಡಿಸಿದ್ದು, ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಜತೆ ಔತಣಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರು, [ಫೆ.14]: ನಾಳೆ ಅಂದ್ರೆ ಮಂಗಳವಾರ ರಾತ್ರಿ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಆಯೋಜನೆಗೊಂಡಿರುವ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್​ ಅವರೊಂದಿಗಿನ ಔತಣಕೂಟದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಫೆ.25 ರಂದು  ಬೆಳಗ್ಗೆ 11.30ಕ್ಕೆ ಬೆಂಗಳೂರಿನಿಂದ ದೆಹಲಿಗೆ ಸಿಎಂ ಪ್ರಯಾಣ ಬೆಳಸಲಿದ್ದು, ರಾತ್ರಿ 8 ಗಂಟೆಗೆ ನಡೆಯಲಿರುವ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ.

ಡೊನಾಲ್ಡ್ ಟ್ರಂಪ್ ಜೊತೆ ಸಿಎಂ ಬಿಎಸ್‌ವೈ ಔತಣಕೂಟ?

 ಫೆ.25ರಂದು ಟ್ರಂಪ್ ಔತಣಕೂಟಕ್ಕೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರಿಗೆ ರಾಷ್ಟ್ರಪತಿ ಭವನದಿಂದ ಆಹ್ವಾನ ಬಂದಿತ್ತು. ಮಂಗಳವಾರ ರಾತ್ರಿ ಔತಣಕೂಟದಲ್ಲಿ ಭಾಗವಹಿಸಿದ ಬಳಿಕ ದೆಹಲಿಯಲ್ಲೇ ವಾಸ್ತವ್ಯ ಹೂಡಿ, ಫೆ. 26 ರಂದು ಬೆಂಗಳೂರಿಗೆ  ವಾಪಸಾಗಲಿದ್ದಾರೆ.

ಮತ್ತೊಂದೆಡೆ ಟ್ರಂಪ್  ಔತಣಕೂಟದಲ್ಲಿ ಭಾಗವಹಿಸದಿರಲು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿರ್ಧರಿಸಿದ್ದಾರೆ. ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಟ್ರಂಪ್​ ಕಾರ್ಯಕ್ರಮಕ್ಕೆ ಆಹ್ವಾನಿಸದಿರುವ ಬಗ್ಗೆ ಅವರಿಗೆ ಬೇಸರವಾಗಿದೆ. 

ಈ ಹಿನ್ನೆಲೆಯಲ್ಲಿ ​ಔತಣಕೂಟದಿಂದ ದೂರ ಉಳಿಯಲು ಮನಮೋಹನ್ ಸಿಂಗ್ ನಿರ್ಧರಿಸಿದ್ದಾರೆ ಎನ್ನಲಾಗಿದೆ.

click me!
Last Updated Feb 24, 2020, 9:59 PM IST
click me!