ಸಾರಿಗೆ ನೌಕರರ ಮುಷ್ಕರ: ಖಡಕ್ ಎಚ್ಚರಿಕೆ ಕೊಟ್ಟ ಸಿಎಂ

By Suvarna News  |  First Published Apr 11, 2021, 7:15 PM IST

ಆರನೇ ವೇತನಕ್ಕಾಗಿ ರಾಜ್ಯ ಸಾರಿಗೆ ನೌಕರರು ಧರಣಿ ನಡೆಸುತ್ತಿದ್ದಾರೆ. ಆದ್ರೆ, ಇತ್ತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಧರಣಿ ನಿತರ ನೌಕರರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.


ರಾಯಚೂರು, (ಏ.11):ರಾಜ್ಯ ಸಾರಿಗೆ ನೌಕರರು ಕೂಡಲೇ ಕರ್ತವ್ಯಕ್ಕೆ ಹಾಜರಾಗದಿದ್ದರೆ ವೇತನ ಕಡಿತ ಮಾಡುವುದರ ಜತೆಗೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದರು.

ಮಸ್ಕಿ ಉಪಚುನಾವಣೆ ಪ್ರಚಾರಕ್ಕೆ ಬಂದಿರುವ ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಷ್ಕರಕ್ಕೆ ಸಂಬಂಧಿಸಿ ಯಾರನ್ನೂ ಮಾತುಕತೆಗೆ ಕರೆಯವುದಿಲ್ಲ. ಈ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ನೌಕರರು ಗೌರವದಿಂದ ಕೆಲಸಕ್ಕೆ ಹಾಜರಾಬೇಕು. ಸಾರಿಗೆ ವ್ಯವಸ್ಥೆಯಿಂದ ಮುಂದಾಗುವ ಅನಾಹುತಗಳಿಗೆ ಅವರೇ ಹೊಣೆಯಾಗುತ್ತಾರೆ' ಎಂದು ಎಚ್ಚರಿಸಿದರು.

Latest Videos

undefined

ಸಾರಿಗೆ ನೌಕರರ ಮೇಲೆ ಮತ್ತಷ್ಟು ಕಠಿಣ ಕ್ರಮ!

ಕಳೆದ ಮೂರು ದಿನಗಳಿಂದ ಸಾರಿಗೆ ನೌಕರರು 6ನೇ ವೇತನಕ್ಕಾಗಿ ಕೆಲಸ ಬಿಟ್ಟು ಧರಣಿ ನಡೆಸುತ್ತಿದ್ದಾರೆ. ಆದ್ರೆ, ಇತ್ತ ಸಿಎಂ 6 ವೇತನ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಕಡ್ಡಿ ತುಂಡಾದಂತೆ ಹೇಳಿದ್ದಾರೆ. ರಾಜ್ಯ ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ಹಗ್ಗಾಜಗ್ಗಾಟ ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ತಲುಪಲಿದೆ ಎನ್ನುವುದು ಕಾದುನೋಡಬೇಕಿದೆ.

ಒಟ್ಟಿನಲ್ಲಿ ಸಾರಿಗೆ ನೌಕರರು ಹಾಗೂ ಸರ್ಕಾರ ನಡುವಿನ ತಿಕ್ಕಾಟದಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ.

click me!