
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿ ಬಂದಿದೆ. ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಇಂದು ಅಥವಾ ನಾಳೆ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಸಲ್ಲಿಸಿರುವ ಪ್ರತ್ಯೇಕ ಸಚಿವರ ಪಟ್ಟಿ ಬಗ್ಗೆ ಹೈಕಮಾಂಡ್ ಸೋಮವಾರ ಬೆಳಗ್ಗೆ 8.30ಕ್ಕೆ ಸಭೆ ನಡೆಸಿತ್ತು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಸಭೆ ನಡೆಸಿ ಅಂತಿಮ ಪಟ್ಟಿಗೆ ಮುದ್ರೆ ಒತ್ತಲಾಗಿದೆ ಎನ್ನಲಾಗಿದೆ. ಸದ್ಯ ಹೈಕಮಾಂಡ್ ಕಳುಹಿಸಿದ ಪಟ್ಟಿಯೊಂದು ಸಿಎಂ ಡಿಕೆ ಶಿವಕುಮಾರ್ ಕೈಯಲ್ಲಿ ಸೇರಿದೆ ಎನ್ನಲಾಗುತ್ತಿದೆ.
ಟಿಬಿ ಜಯಚಂದ್ರ ಸ್ಪೀಕರ್ ಆಗುವ ಸಾಧ್ಯತೆಗಳಿವೆ. ಜೂ.3ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿ 13 ಮಂದಿ ಸಚಿವರ ಜತೆ ಪ್ರಮಾಣವಚನ ಸ್ವೀಕರಿಸಿದ್ದರು.
ಪೊನ್ನಣ್ಣ (ಡೆಪ್ಯುಟಿ ಸ್ಪೀಕರ್) ಜಿಎಸ್ ಪಾಟೀಲ್ (ಸ್ಪೀಕರ್)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ