
ಬೆಂಗಳೂರು: ‘ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಕಾಂಗ್ರೆಸ್ ಸರ್ಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಶೇಕಡಾ ನೂರಕ್ಕೆ ನೂರರಷ್ಟು ಮುಂದುವರಿಯುತ್ತವೆ’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದೂ ಅವರು ಮನವಿ ಮಾಡಿದ್ದಾರೆ.
ಕೆಲವರು ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಅಕೌಂಟ್ ತೆರೆದು ಗ್ಯಾರಂಟಿ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ದೃಢೀಕರಣಕ್ಕಾಗಿ ಅವರ ಹೆಸರು, ವಿಳಾಸ, ಅಕೌಂಟ್ ನಂಬರ್ ಖಚಿತಪಡಿಸಿಕೊಳ್ಳಲು ಮತ್ತೆ ಅರ್ಜಿ ಸಲ್ಲಿಸಲು ಹೇಳಲಾಗಿದೆಯೇ ಹೊರತು ಯೋಜನೆಗಳನ್ನು ನಿಲ್ಲಿಸಲು ಅಲ್ಲ ಎಂದು ತಿಳಿಸಿದ್ದಾರೆ.
ಎಲ್ಲಾ ಐದೂ ಗ್ಯಾರಂಟಿ ಯೋಜನೆಗಳೂ ಶೇಕಡಾ ನೂರಕ್ಕೆ ನೂರು ಮುಂದುವರೆಯುತ್ತವೆ. ಹಾಗಾಗಿ ಯಾವುದೇ ಫಲಾನುಭವಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಪ್ರಕಟಣೆ ಮೂಲಕ ಸ್ಪಷ್ಟವಾಗಿ ಹೇಳಿದ್ದಾರೆ.
ಗ್ಯಾರಂಟಿ ಇದೆ, ಗ್ಯಾರಂಟಿ ಇರುತ್ತದೆ!
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಆತಂಕಬೇಡ
ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ಈ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂಬ ವಿರೋಧ ಪಕ್ಷಗಳ ಸುಳ್ಳು ಪ್ರಚಾರ ಹಾಗೂ ವದಂತಿಗಳಿಗೆ…— DK Shivakumar (@DKShivakumar) June 14, 2026
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ