
ಬೆಂಗಳೂರು (ಅ.15): ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ 33ನೇ ಕಂತಿನ 2482 ಕೋಟಿ ರು. ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು, ಇನ್ನೆರಡು ದಿನಗಳಲ್ಲಿ ರಾಜ್ಯದ 1.24 ಕೋಟಿ ಮಹಿಳೆಯರಿಗೆ ಯೋಜನೆ ಹಣ ತಲುಪಲಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಅಡಿ ಈವರೆಗೂ ಪ್ರತಿ ಫಲಾನುಭವಿಗಳಿಗೆ 32 ಕಂತುಗಳಲ್ಲಿ 64 ಸಾವಿರ ರು. ಹಣ ತಲುಪಿದೆ. ಈಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 33ನೇ ಕಂತಿನ ಹಣ ಬಿಡುಗಡೆ ಮಾಡಿದ್ದು, ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ. ಆ ಮೂಲಕ ಪ್ರತಿ ಫಲಾನುಭವಿಗಳಿಗೆ 66 ಸಾವಿರ ರು. ತಲುಪಿದಂತಾಗಲಿದೆ. ಜತೆಗೆ 1.29 ಕೋಟಿ ಮಹಿಳೆಯರಿಗೆ ಈವರೆಗೆ 79,433 ಕೋಟಿ ರು. ಪಾವತಿಯಾದಂತಾಗಲಿದೆ ಎಂದಿದ್ದಾರೆ.
ಬರದ ಸಂದರ್ಭದಲ್ಲಿ ಗೃಹಲಕ್ಷ್ಮಿ ಹಣ ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ನೀಡಲಿದೆ. ದಸರಾ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ದಿನೇಶ್ ಗೂಳಿಗೌಡ ಅವರು ಧನ್ಯವಾದ ಅರ್ಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ