CM DK Shivakumar: ದೆಹಲಿ ಭೇಟಿ ಬಳಿಕ ಇಂದು ಸಿಎಂ ಡಿಕೆಶಿ ಮೊದಲ ಡೀಸಿ, ಸಿಇಒಗಳ ಜೊತೆ ಸಭೆ

Kannadaprabha News   | Kannada Prabha
Published : Jun 13, 2026, 09:22 AM IST
DK Shivakumar

ಸಾರಾಂಶ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ರಾಜ್ಯಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ವಿಧಾನಸೌಧದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಹಲವು ನಿರ್ದೇಶನಗಳನ್ನು ನೀಡುವ ಸಾಧ್ಯತೆ.

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಜತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಶನಿವಾರ ರಾಜ್ಯಮಟ್ಟದ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ.

ಆಡಳಿತದಲ್ಲಿ ವೇಗ ಹೆಚ್ಚಿಸಲು ಸೂಚನೆ

 ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಆಡಳಿತದಲ್ಲಿ ವೇಗ ತರುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಶಿವಕುಮಾರ್‌ ಅವರು ವಿವಿಧ ನಿರ್ದೇಶನಗಳನ್ನು ನೀಡುವ ಸಾಧ್ಯತೆಯಿದೆ. ಮುಂಗಾರು ಮಳೆ, ಪ್ರವಾಹ, ಬೆಳೆ ಹಾನಿ, ರಸಗೊಬ್ಬರ, ಬಿತ್ತನೆ ಬೀಜ ಕೊರತೆ, ಕಾನೂನು ಸುವ್ಯವಸ್ಥೆ, ಪ್ರಮುಖ ಯೋಜನೆಗಳ ಸ್ಥಿತಿಗತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ. 

ಸಭೆಯಲ್ಲಿ ಯಾರರು ಭಾಗಿ?

ಇದೇ ವೇಳೆ ಸಲಹೆ ಸೂಚನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಲ್ಲಾ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯ ಮಾಹಿತಿಗಳೊಂದಿಗೆ ಈ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಜಿಲ್ಲಾಮಟ್ಟದ ಅಧಿಕಾರಿಗಳ ಜತೆ ಸಭೆ ನಡೆಸುತ್ತಿದ್ದು, ಈ ವೇಳೆ ಯಾವೆಲ್ಲಾ ನಿರ್ದೇಶನಗಳನ್ನು ನೀಡಲಿದ್ದಾರೆ ಎಂಬ ಬಗ್ಗೆ ಕುತೂಹಲ ಮೂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೇಂದ್ರದ AI Mission ಸಹಭಾಗಿತ್ವದಲ್ಲಿ 50 ಸರ್ಕಾರಿ ಕಾಲೇಜಲ್ಲಿ ಹೈಟೆಕ್‌ ಎಐ ಲ್ಯಾಬ್‌ ಸ್ಥಾಪನೆಗೆ ಮುಂದಾದ ಸರ್ಕಾರ!
MLC Naseer Ahmed: ಸಾಲಕ್ಕೆ ಪರ್ಸನಲ್ ಗ್ಯಾರಂಟರ್; ನಸೀರ್ ದಿವಾಳಿ ಎಂದು ಘೋಷಿಸಿದ NCLT: ಶಾಸಕ ಸ್ಥಾನಕ್ಕೆ ಈಗ ಕುತ್ತು?