ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಡಿಕೆ ಶಿವಕುಮಾರ್ ಪ್ರಮಾವಚನ, ಸರ್ಕಾರದಿಂದ ಆಹ್ವಾನ

Published : May 31, 2026, 02:54 PM IST
DK Shivakumar Oath Event

ಸಾರಾಂಶ

ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೇ.3ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಕೆಶಿ ಸರ್ವಧರ್ಮ ಸಮುದಾಯಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಿದ್ದಾರೆ.

ಬೆಂಗಳೂರು (ಮೇ.31) ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಹಿನ್ನಲೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತದ ನಿರ್ಧಾರದ ಮೂಲಕ ನಾಯಕನ ಆಯ್ಕೆ ಮಾಡಲಾಗಿತ್ತು. ಮೇ.3ರಂದು ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಕೆ ಶಿವಕುಮಾರ್ ಸರ್ವ ಧರ್ಮದ ಪ್ರಮುಖರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಿದ್ದಾರೆ.

ಲೋಕಭವನದಲ್ಲಿ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮ

ಬುಧವಾರ ಲೋಕಭವನದಲ್ಲಿ ಡಿಕೆ ಶಿವಕುಮಾರ್ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ 55 ಸ್ವಾಮೀಜಿಗಳು, ಕ್ರಿಶ್ಚಿಯನ್ ಸಮುದಾಯದ ಫಾದರ್, ಮುಸ್ಲಿಂ ಸಮುದಾಯದ ಮೌಲ್ವಿಗಳನ್ನು ಪ್ರಮಾಣವಚನ ಕಾರ್ಯಕ್ರಮಕ್ಕೆ ಸರ್ಕಾರದಿಂದಲೇ ಆಹ್ವಾನ ನೀಡಲು ಸೂಚನೆ ನೀಡಲಾಗಿದೆ.

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನ ಪಡೆಯಲಿರುವ ಸರ್ವ ಧರ್ಮ, ಸರ್ವ ಸಮುದಾಯಗಳ ಸ್ವಾಮೀಜಿಗಳು, ಫಾದರ್,ಮೌಲ್ವಿಗಳ ಪಟ್ಟಿ ಏಷ್ಯಾನೆಟ್ ಸುವರ್ಣ ನ್ಯೂಸ್ ಬಳಿ ಲಭ್ಯವಾಗಿದೆ.

ಡಿ.ಕೆ ಶಿವಕುಮಾರ್ ಕಚೇರಿಯಿಂದ ಪಟ್ಟಿ ಪಡೆದಿರುವ ಸಿಎಂ ಕಚೇರಿ ಸಿಬ್ಬಂದಿಗಳು ಆಹ್ವಾನದ ಶಿಷ್ಟಾಚಾರ ಶುರು ಮಾಡಿದ್ದಾರೆ.

ಆಹ್ವಾನದ ಪಟ್ಟಿಯಲ್ಲಿರುವ ಪ್ರಮುಖ ಶ್ರೀಗಳ ಹೆಸರುಗಳಿವು

  • ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು, ಆದಿಚುಂಚನಗಿರಿ ಮಹಾಸಂಸ್ಥಾನಮಠ, ಆದಿಚುಂಚನಗಿರಿ.
  • ಶ್ರೀ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಗಳು,ಸುತ್ತೂರುಮಠ,ಮೈಸೂರು.
  • ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ಶ್ರೀಸಿದ್ಧಗಂಗಾಮಠ, ತುಮಕೂರು.
  • ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮಿಗಳು, ವಿಶ್ವ ಒಕ್ಕಲಿಗ ಮಹಾಸಂಸ್ಥಾನಮಠ, ಬೆಂಗಳೂರು.
  • ಶ್ರೀ ನಂಜಾವಧೂತ ಮಹಾಸ್ವಾಮಿಗಳು,ಗುರು ಬೃಹ್ಮೇಶ್ವರಮಠ, ಪಟ್ಟನಾಯಕನಹಳ್ಳಿ, ಶಿರಾ.
  • ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗಿ ಮಹಾಸ್ವಾಮಿಗಳು, ಕಾಡಸಿದ್ಧೇಶ್ವರಮಠ, ನೊಣವಿನಕೆರೆ.
  • ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ತರಳಬಾಳು ಬೃಹನ್ಮಠ, ಸಿರಿಗೆರೆ.
  • ಶ್ರೀ ವಚನಾನಂದ ಮಹಾಸ್ವಾಮಿಗಳು,ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ, ಹರಿಹರ.
  • ಶ್ರೀ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ,ಮಹಾಸ್ವಾಮಿಗಳು,ರಂಭಾಪುರಿಪೀಠ,ಬಾಳೆಹೊನ್ನೂರು.
  • ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಮಹಾಸ್ವಾಮಿಗಳು, ಉಜ್ಜಯಿನಿಪೀಠ,ಉಜ್ಜಯಿನಿ.ವಿಜಯನಗರ ಜಿಲ್ಲೆ.
  • ಶ್ರೀ ಭೀಮಾಶಂಕರ ಶಿವಾಚಾರ್ಯ ಮಹಾಸ್ವಾಮಿಗಳು, ಕೇದಾರಪೀಠ, ಕೇದಾರನಾಥ.
  • ಶ್ರೀ ಚೆನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು,ಶ್ರೀಶೈಲಪೀಠ,ಶ್ರೀಶೈಲ.
  • ಶ್ರೀ ನಿರಂಜನಾನಂದಪುರಿ ಸ್ವಾಮೀಜಿ,ಕನಕ ಗುರುಪೀಠ,ಕಾಗಿನೆಲೆ
  • ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ,ಭೋವಿ ಗುರುಪೀಠ,ಚಿತ್ರದುರ್ಗ.
  • ಶ್ರೀ ಶಾಂತವೀರ ಸ್ವಾಮೀಜಿ,ಕುಂಚಟಿಗ ಗುರುಪೀಠ,ಹೊಸದುರ್ಗ.
  • ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ,ಮಾದಾರ ಚನ್ನಯ್ಯ ಗುರುಪೀಠ, ಚಿತ್ರದುರ್ಗ.
  • ಶ್ರೀ ವಿಶ್ವಪ್ರಸನ್ನ ತೀರ್ಥ ಮಹಾಸ್ವಾಮಿಗಳು, ಪೇಜಾವರಮಠ, ಉಡುಪಿ.
  • ಶ್ರೀ ರವಿಶಂಕರ ಗುರೂಜೀ, ಆರ್ಟ್ ಆಪ್ ಲಿವಿಂಗ್ ಆಶ್ರಮ, ಬೆಂಗಳೂರು.
  • ಶ್ರೀ ಸ್ವಸ್ತಿಶ್ರೀ ಆಗಮಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು, ದಿಗಂಬರ ಜೈನಮಠ, ಶ್ರವಣಬೆಳಗೊಳ.
  • ಶ್ರೀ ವೀರಭದ್ರ ಚನ್ನಮಲ್ಲ ಮಹಾಸ್ವಾಮಿಗಳು, ನಿಡುಮಾಮಡಿಮಠ, ಬೆಂಗಳೂರು.
  • ಆನಂದ ಬಿಕ್ಕು, ಮಹಾಬೋಧಿ ಸೊಸಾಯಿಟಿ, ಬೆಂಗಳೂರು.

ಆಹ್ವಾನ ಪಟ್ಟಿಯಲ್ಲಿರುವ ಫಾದರ್

  • ಆರ್ಚಬಿಷಪ್ ಡಾ.ಪೀಟರ್ ಮಚಾಡೋ,ಕ್ಯಾಥೋಲಿಕ್ ಚರ್ಚ,ಬೆಂಗಳೂರು.

ಆಹ್ವಾನ ಪಟ್ಟಿಯಲ್ಲಿರುವ ಮೌಲ್ವಿಗಳು

  • ಹಜರತ್ ಹಫೀಜ್ ಡಾ.ಸೈಯದ್ ಮೊಹಮ್ಮದ್ ಅಲಿ ಅಲ್ ಹುಸೈನ್,ದರ್ಗಾ ಹಜರತ್ ಖ್ವಾಜಾ ಬಂದೆನವಾಜ್, ಕಲಬುರ್ಗಿ

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೊದಲ ಲಿಸ್ಟ್‌ನಲ್ಲೇ ಸ್ಥಾನ ಪಡೆಯಲು ಶುರುವಾಯ್ತು ಭರ್ಜರಿ ಲಾಭಿ: ಕೈ ನಾಯಕರ ಈ ಆತುರಕ್ಕೆ ಅಸಲಿ ಕಾರಣವೇನು?
ಪ್ರಿಯಾಂಕ್ ಖರ್ಗೆಗೆ ಡಿಸಿಎಂ ನೀಡುವಂತೆ ದೇಗುಲದಲ್ಲಿ ಅಭಿಮಾನಿಗಳು 101 ತೆಂಗಿನಕಾಯಿ ಒಡೆದು ವಿಶೇಷ ಪೂಜೆ!