ಮಂಡ್ಯ ಬಸ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಘೋಷಿಸಿದ ಕುಮಾರಸ್ವಾಮಿ

By Web Desk  |  First Published Nov 24, 2018, 4:12 PM IST

ಕನಗನಮರಡಿ ಗ್ರಾಮದಲ್ಲಿ ಬಸ್​​ ದುರಂತ ನಡೆದ ಸ್ಥಳಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದು. ಘಟನಾ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮೃತ ಕುಟುಂಬಗಳಿಗೆ ಸಂತ್ವಾನ ಹೇಳಿ ಪರಿಹಾರ ಘೋಷಿಸಿದರು.


ಮಂಡ್ಯ, [ನ.24]: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದಲ್ಲಿ ಸಂಭವಿಸಿದ ಭೀಕರ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಹಣ ನೀಡೋದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. 

ಮಂಡ್ಯ ಬಸ್​ ದುರಂತ: ಸಾವು ಗೆದ್ದು ಬಂದ ಬಾಲಕ ಬಿಚ್ಚಿಟ್ಟ ಭಯಾನಕ ಸತ್ಯ

Latest Videos

undefined

ಬಸ್​​ ದುರಂತ ನಡೆದ ಸ್ಥಳಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದು. ಘಟನಾ ಸ್ಥಳ ಪರಿಶೀಲನೆ ನಡೆಸಿದರು. ಅಲ್ಲಿನ ಸ್ಥಳೀಯ ನಿವಾಸಿಗಳಿಂದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡ ಸಿಎಂ ಕುಮಾರಸ್ವಾಮಿ ಅವರು ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು.

ಮಂಡ್ಯ ಬಸ್ ದುರಂತ: ರಾಷ್ಟ್ರಪತಿ, ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸಂತಾಪ

 ಇನ್ನು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಹಣ ನೀಡುವುದಾಗಿ ಭರವಸೆ ನೀಡಿದರು. ಸಧ್ಯ ಮಾಹಿತಿ ಪ್ರಕಾರ ಮೃತಪಟ್ಟವರ ಸಂಖ್ಯೆ 25ಕ್ಕೇರಿದ್ದು, ಮೃತ ದೇಹಗಳನ್ನ ಹೊರತೆಗೆಯಲಾಗಿದೆ.

ಇನ್ನು ಕೆಲವರು ನಾಲೆಯಲ್ಲಿ ಕೊಚ್ಚಿ ಹೋಗಿದ್ದು,  ಸಾವು ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.

click me!