
ಮಂಗಳೂರು : ಎಲ್ಲ ಪತ್ರಕರ್ತರಿಗೆ ಸೂರು ಎಲ್ಲ ಪತ್ರಕರ್ತರಿಗೆ ಸೂರು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊಸ ಯೋಜನೆಯನ್ನು ಜಾರಿಗೆ ತರಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ನೋಂದಾಯಿತ ಮಾತ್ರವಲ್ಲ ನೋಂದಾಯಿತರಲ್ಲದ ಎಲ್ಲ ರೀತಿಯ ಪತ್ರಕರ್ತರಿಗೆ ಸೂರು ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಇದು ಪತ್ರಕರ್ತರು, ಪತ್ರಿಕಾ ಛಾಯಾಚಿತ್ರಗ್ರಾಹಕರು, ಕ್ಯಾಮೆರಾಮೆನ್‌ಗಳಿಗೂ ಅನ್ವಯವಾಗಲಿದೆ.
ಉಳಿದಂತೆ ಪತ್ರಕರ್ತರ ವಿವಿಧ ಬೇಡಿಕೆಗಳಾದ ಎಲ್ಲರಿಗೆ ಬಸ್‌ಪಾಸ್, ಸಾಮಾಜಿಕ ಭದ್ರತಾ ಯೋಜನೆ, ಅಧ್ಯಯನ ಪ್ರವಾಸಕ್ಕೆ ಅನುದಾನ ಒದಗಿಸಲು ಚಿಂತನೆ ನಡೆಸಲಾಗುವುದು. ಬಜೆಟ್‌ನಲ್ಲಿ ಇದಕ್ಕೆ ಆನುದಾನ ಕಾದಿರಿಸಲು ಚರ್ಚೆ ನಡೆಸಲಾಗುವುದು. ಈ ಯೋಜನೆಗಳನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅನುಷ್ಠಾನಗೊಳಿಸಲಾಗುವುದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ