
ಬೆಂಗಳೂರು (ನ.13): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ತಾರಕಕ್ಕೇರಿ ತಣ್ಣಗಾಗುತ್ತಿರುವಾಗಲೇ, ಮುಖ್ಯಮಂತ್ರಿಗಳು ನೋಟಿಸ್ ಪೀರಿಯಡ್‌ನಲ್ಲಿ ಇದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ಹೈಕಮಾಂಡ್ ಈಗಾಗಲೇ ನೋಟಿಸ್ ನೀಡಿದ್ದು, ಮುಖ್ಯಮಂತ್ರಿಗಳು ನೋಟಿಸ್ ಪೀರಿಯಡ್‌ನಲ್ಲಿದ್ದಾರೆ. ಈ ಕುರಿತು ಎಚ್ಚರಿಕೆಯನ್ನೂ ನೀಡಿದ್ದಾರೆ ಎಂದು ಆಪಾದಿಸಿದರು.
ಇನ್ಮುಂದೆ ನಾನು ನಿದ್ದೆ ಮಾಡಲ್ಲ; ರಾಜ್ಯಾದ್ಯಂತ ಓಡಾಡುವೆ: ಎಂಪಿ ರೇಣುಕಾಚಾರ್ಯ
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರಿಗೆ ಹಣ ಸಂಗ್ರಹಿಸಿ ಕೊಡುವ ಟಾರ್ಗೆಟ್ ಅನ್ನು ಹೈಕಮಾಂಡ್ ನೀಡಿದೆ. ಹೆಚ್ಚು ಹಣ ಕೊಟ್ಟವರು ಸಚಿವರಾಗಿ ಮುಂದುವರೆಯುತ್ತಾರೆ. ಇಲ್ಲದಿದ್ದರೆ ಎರಡೂವರೆ ವರ್ಷಗಳ ಬಳಿಕ ತೆಗೆದು ಹಾಕುತ್ತಾರೆ. ಕರ್ನಾಟಕದಲ್ಲಿ ಕಮಿಷನ್ ಸಂಗ್ರಹಿಸಿ ಅದನ್ನು ಪಂಚರಾಜ್ಯಗಳ ಚುನಾವಣೆಗೆ ಬಳಸಲಾಗುತ್ತಿದೆ. ಒಂದು ರಾಜ್ಯ, ಐದು ಚುನಾವಣೆ ಎನ್ನುವಂತಾಗಿದೆ ಎಂದರು.
ಎಚ್‌ಡಿಕೆಗೆ ಕಾಂಗ್ರೆಸ್ ಜತೆ ಏನು ಸಂಬಂಧ?
ಕುಮಾರಸ್ವಾಮಿ ಅವರಿಗೂ ಕಾಂಗ್ರೆಸ್ ಪಕ್ಷಕ್ಕೂ ಏನು ಸಂಬಂಧ? ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಿದ್ದಾರೆ. ನಾವೆಲ್ಲ ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ಕೆಲಸ ಮಾಡುತ್ತಿದ್ದೇವೆ. ಇಲ್ಲಿ ಬೇರೆ ಚರ್ಚೆಯೇ ಇಲ್ಲ.
- ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ