'ಅಂಬಿ ಅಂತಿಮ ದರ್ಶನಕ್ಕೆ ಬರೋರಿಗೆ ವಿಶೇಷ ಬಸ್​ ವ್ಯವಸ್ಥೆ, 3ದಿನ ಶೋಕಾಚರಣೆ'

By Web DeskFirst Published Nov 25, 2018, 12:26 AM IST
Highlights

ಮಂಡ್ಯದ ಗಂಡಿನ ಅಗಾಲಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಕುಮಾರಸ್ವಾಮಿ, ಅಂಬರೀಶ್ ಅವರ ಅಂತಿಮ ದರ್ಶನಕ್ಕೆ ಅಭಿಮಾನಿಗಳೆಲ್ಲರ ಸಹಕಾರ ಅಗತ್ಯ, ಎಲ್ಲರಿಗೂ ಅಂತಿಮ ದರ್ಶನ ಪಡೆಯಲು ಅವಕಾಶ ಮಾಡಿಕೊಡಲಾಗುತ್ತದೆ ಎಂದರು.

ಬೆಂಗಳೂರು, [ನ.25]: ಹಿರಿಯ ನಟ, ರೆಬಲ್ ಸ್ಟಾರ್ ಅಂಬರೀಶ್ ಇನ್ನು ನೆನಪು ಮಾತ್ರ. ಉಸಿರಾಟ ಹಾಗೂ ಶ್ವಾಸಕೋಶ ತೊಂದರೆಯಿಂದ ಬಳಲುತ್ತಿದ್ದ ಅಂಬರೀಶ್ ಶನಿವಾರ ರಾತ್ರಿ ನಗರದ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

 ಹಿರಿಯ ನಾಯಕರ ಅಗಲಿಕೆಗೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇನ್ನು ಮಂಡ್ಯದ ಗಂಡಿನ ಅಗಾಲಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಕುಮಾರಸ್ವಾಮಿ, ಅಂಬರೀಶ್ ಅವರ ಅಂತಿಮ ದರ್ಶನಕ್ಕೆ ಅಭಿಮಾನಿಗಳೆಲ್ಲರ ಸಹಕಾರ ಅಗತ್ಯ, ಎಲ್ಲರಿಗೂ ಅಂತಿಮ ದರ್ಶನ ಪಡೆಯಲು ಅವಕಾಶ ಮಾಡಿಕೊಡಲಾಗುತ್ತದೆ ಎಂದರು.

Live Updates: ಕಂಠೀರವ ಸ್ಟೇಡಿಯಂನಲ್ಲಿ ಅಂಬಿ ಅಂತಿಮ ದರ್ಶನ

ಅಂಬರೀಶ್ ಅವರ ಅಂತಿಮ ದರ್ಶನ ಪಡೆಯಲು ಸಕಲ ಸಿದ್ಧತೆ ಮಾಡಿಕೊಡಳ್ಳಲಾಗುತ್ತಿದೆ. ಮಂಡ್ಯದ ಜನರು ಅಂತಿಮ ದರ್ಶನ ಪಡೆಯಲು ವಿಶೇಷ ಬಸ್​ ವ್ಯವಸ್ಥೆ ಮಾಡಲಾಗುತ್ತದೆ ಹಾಗೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಮಾಡಲು ಈಗಾಗಲೇ ಆದೇಶಿಸಲಾಗಿದೆ ಎಂದು ಹೇಳಿದರು.

click me!