ಗ್ಯಾರಂಟಿ, ಬರ: ಅಧಿಕಾರಿಗಳ ಜತೆ ಇಂದು ಸಿಎಂ ಸಭೆ

Published : Jan 31, 2024, 04:06 AM IST
ಗ್ಯಾರಂಟಿ, ಬರ: ಅಧಿಕಾರಿಗಳ ಜತೆ ಇಂದು ಸಿಎಂ ಸಭೆ

ಸಾರಾಂಶ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ಸಭೆ ನಡೆಸುತ್ತಿದ್ದು, ಜಿಲ್ಲಾ ಮಟ್ಟದಲ್ಲಿ ಆಡಳಿತದ ಕಾರ್ಯವೈಖರಿ ಕುರಿತಂತೆ ಪರಮಾರ್ಶಿಸಲಿದ್ದಾರೆ. ಪ್ರಮುಖವಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಎಷ್ಟಿದೆ, ಏನಾದರೂ ಲೋಪಗಳಾಗಿವೆಯೇ ಎಂಬುದರ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

ಬೆಂಗಳೂರು(ಜ.31):  ಗ್ಯಾರಂಟಿ ಯೋಜನೆಗಳ ಜಾರಿ, ಬರದಿಂದ ಜಿಲ್ಲೆಗಳಲ್ಲಿ ಎದುರಾಗಿರುವ ಸಮಸ್ಯೆಗಳು ಸೇರಿದಂತೆ ಸರ್ಕಾರದ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಪರಿಶೀಲಿಸಲು ಎಲ್ಲ ಜಿಲ್ಲೆಗಳ ಉಸ್ತುವಾರಿ ಕಾರ್ಯದರ್ಶಿಗಳ ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸೌಧದಲ್ಲಿ ಸಭೆ ನಡೆಸಲಿದ್ದಾರೆ.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ಸಭೆ ನಡೆಸುತ್ತಿದ್ದು, ಜಿಲ್ಲಾ ಮಟ್ಟದಲ್ಲಿ ಆಡಳಿತದ ಕಾರ್ಯವೈಖರಿ ಕುರಿತಂತೆ ಪರಮಾರ್ಶಿಸಲಿದ್ದಾರೆ. ಪ್ರಮುಖವಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಎಷ್ಟಿದೆ, ಏನಾದರೂ ಲೋಪಗಳಾಗಿವೆಯೇ ಎಂಬುದರ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.ಅದರ ಜತೆಗೆ ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯಿಂದ ಜಿಲ್ಲಾ ಮಟ್ಟದಲ್ಲಿನ ಸಮಸ್ಯೆಗಳು, ಅವುಗಳ ನಿವಾರಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಲಾಗುತ್ತದೆ. ಜತೆಗೆ, ಜಿಲ್ಲಾ ಮಟ್ಟದಲ್ಲಿ ಆಡಳಿತದ ವೈಖರಿ, ಸರ್ಕಾರದ ಇತರ ಕಾರ್ಯಕ್ರಮಗಳ ಅನುಷ್ಠಾನ, 2023-24ನೇ ಸಾಲಿನಲ್ಲಿ ಬಜೆಟ್‌ನಲ್ಲಿ ಘೋಷಿಸಲಾದ ಯೋಜನೆಗಳು ಜಿಲ್ಲಾಮಟ್ಟದಲ್ಲಿ ಎಷ್ಟರ ಮಟ್ಟಿಗೆ ಅನುಷ್ಠಾನಗೊಳಿಸಲಾಗಿದೆ ಎಂಬುದರ ವಿವರವನ್ನೂ ಮುಖ್ಯಮಂತ್ರಿಗಳು ಪಡೆಯಲಿದ್ದಾರೆ.

ಸಿಎಂ ಸಿದ್ದುಗೆ ಅಧಿಕಾರ, ಮಜಾ ಮಾಡಲು ಸರ್ಕಾರ ಬೇಕು: ವಿಜಯೇಂದ್ರ

ಕೆಡಿಪಿ ಸಭೆಯ ಗುರಿಯ ಬಗ್ಗೆ ಪರಾಮರ್ಶೆ

ಈ ಹಿಂದೆ ಮುಖ್ಯಮಂತ್ರಿಗಳು ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ನಡೆಸಿದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಸಂದರ್ಭದಲ್ಲಿ ಮಾನವ ಸೂಚ್ಯಂಕ ಅಭಿವೃದ್ಧಿ ಸೇರಿದಂತೆ ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನದ ಕುರಿತಂತೆ ಗುರಿ ನೀಡಲಾಗಿತ್ತು. ಕೆಡಿಪಿ ಸಭೆಯಲ್ಲಿ ಜಿಲ್ಲಾ ಮಟ್ಟದಲ್ಲಿ ನೀಡಲಾಗಿದ್ದ ಗುರಿ ಮುಟ್ಟಲಾಗಿದೆಯೇ ಎಂಬ ಬಗ್ಗೆಯೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆಯಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ