ರಾಮನಗರ ಬೆಂಗಳೂರು ಸೇರ್ಪಡೆ ಬಗ್ಗೆ ನನ್ನ ಬಳಿ ಯಾರೂ ಚರ್ಚೆ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Published : Oct 28, 2023, 05:50 PM IST
ರಾಮನಗರ ಬೆಂಗಳೂರು ಸೇರ್ಪಡೆ ಬಗ್ಗೆ ನನ್ನ ಬಳಿ ಯಾರೂ ಚರ್ಚೆ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಸಾರಾಂಶ

ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ ಮಾಡ್ತಿರೋದು ನಿಜ. ಆದರೆ ಆ ಪ್ರಯತ್ನದಲ್ಲಿ ಸಫಲ ಆಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ  50 ಕೋಟಿ ರೂ ಆಫರ್ ನೀಡಿದೆ ಎಂಬ ವಿಚಾರ ನನಗೆ ಗೊತ್ತಿಲ್ಲ. ಆ ವಿಚಾರವನ್ನು ರವಿ ಗಾಣಿಗ ಬಳಿಯೇ ಕೇಳಿ ಎಂದರು.

ಉಡುಪಿ (ಅ.28): ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ ಮಾಡ್ತಿರೋದು ನಿಜ. ಆದರೆ ಆ ಪ್ರಯತ್ನದಲ್ಲಿ ಸಫಲ ಆಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ  50 ಕೋಟಿ ರೂ ಆಫರ್ ನೀಡಿದೆ ಎಂಬ ವಿಚಾರ ನನಗೆ ಗೊತ್ತಿಲ್ಲ. ಆ ವಿಚಾರವನ್ನು ರವಿ ಗಾಣಿಗ ಬಳಿಯೇ ಕೇಳಿ ಎಂದರು.

ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ. ಒಮ್ಮೆ ಆಪರೇಷನ್ ಕಮಲ ಮಾಡಿ ಸಕ್ಸಸ್ ಆಗಿರಬಹುದು. ಆದರೆ ಯಾವಾಗಲೂ ಹಾಗೆ ಆಗಲ್ಲ ವಿಫಲ ಪ್ರಯತ್ನ ನಡೆಸುತ್ತಿದ್ದಾರೆ. ಬಿಜೆಪಿಯವರಿಗೆ ಅಧಿಕಾರದ ದಾಹ ಹೆಚ್ಚಾಗಿದೆ. ಅಧಿಕಾರಕ್ಕೊಸ್ಕರ ಏನು ಬೇಕಾದರೂ ಮಾಡುತ್ತಾರೆ. ನಮ್ಮ ಪಕ್ಷದ ಒಬ್ಬ ಶಾಸಕನೂ ಅವರ  ಆಮಿಷಕ್ಕೆ ಒಳಗಾಗಲ್ಲ ಎಂದು ಭರವಸೆ ವ್ಯಕ್ತಪಡಿಸಿದರು.

ಮಹರ್ಷಿ ವಾಲ್ಮೀಕಿ ಜಯಂತಿಯಂದೇ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ

ರಾಮನಗರ ಚರ್ಚೆ ಇಲ್ಲ:

ಇನ್ನು ರಾಮನಗರ ಬೆಂಗಳೂರು ಸೇರ್ಪಡೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನ್ನ ಬಳಿ ರಾಮನಗರ ಬೆಂಗಳೂರಿಗೆ ಸೇರಿಸುವ ವಿಚಾರವಾಗಿ ಯಾರೂ ಚರ್ಚೆ ಮಾಡಿಲ್ಲ. ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

ಇಂದು ಮಹರ್ಷಿ ವಾಲ್ಮೀಕಿ ಜಯಂತಿ: ಎಂದೂ ಬಾಡದ ದೇವಕುಸುಮ ವಾಲ್ಮೀಕಿ ಋಷಿ

ಬಂಟ ಸಮುದಾಯಕ್ಕೆ ನಿಗಮ 

ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮುಂದಿನ ಬಜೆಟ್ ನಲ್ಲಿ ಬಂಟ ಅಭಿವೃದ್ಧಿ ನಿಗಮ ಘೋಷಿಸುತ್ತೇನೆ. ಬ್ರಹ್ಮಾವರ ಸಕ್ಕರೆ ಕಾರ್ಖಾನೆ 13 ಕೋಟಿ ಹಗರಣ ಆದ ಬಗ್ಗೆ ಆರೋಪ ಕೇಳಿ ಬಂದಿದೆ. ಹಗರಣ ಆಗಿದ್ದರೆ ನಾವು ತನಿಖೆ ಮಾಡುತ್ತೇವೆ. ತಪ್ಪು ಮಾಡಿದವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದರು ಇದೇ ವೇಳೆ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ವ್ಯವಹಾರ ಕುರಿತು ತನಿಖೆ ನಡೆಸುವುದಾಗಿ ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ಮಧುಗಿರಿ - ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು