ಅಬಕಾರಿಯಲ್ಲಿ ಭ್ರಷ್ಟಾಚಾರ ಆಗಿಲ್ಲ ಅಂದ್ರೆ ಮೋದಿ ಪ್ರಧಾನಿ ಹುದ್ದೆ ಬಿಡ್ತಾರಾ?: ಮೋದಿಗೆ ಸಿದ್ದು ಮತ್ತೆ ಸವಾಲ್‌!

Published : Nov 14, 2024, 06:30 AM IST
ಅಬಕಾರಿಯಲ್ಲಿ ಭ್ರಷ್ಟಾಚಾರ ಆಗಿಲ್ಲ ಅಂದ್ರೆ ಮೋದಿ ಪ್ರಧಾನಿ ಹುದ್ದೆ ಬಿಡ್ತಾರಾ?: ಮೋದಿಗೆ ಸಿದ್ದು ಮತ್ತೆ ಸವಾಲ್‌!

ಸಾರಾಂಶ

ಬಿಜೆಪಿಯವರು ಬರಿ ಭ್ರಷ್ಟಾಚಾರ ಎಂದು ಸುಳ್ಳು ಹೇಳುತ್ತಿ ದ್ದಾರೆ. ಬಿಜೆಪಿ ಅವಧಿಯಲ್ಲಿ ಕೋವಿಡ್ ವೇಳೆ ನಡೆದ ಭ್ರಷ್ಟಾಚಾರ ಬಗ್ಗೆ ಪ್ರಧಾನಿ ಏನು ಹೇಳುತ್ತಾರೆ. ಮೋದಿ ಅವರಿಗೆ ಕರ್ನಾಟಕ ಮತ್ತು ಸಿದ್ದರಾಮಯ್ಯ ಇಬ್ಬರೂ ಟಾರ್ಗೆಟ್ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು(ನ.14):   ಅಬಕಾರಿ ಇಲಾಖೆಯಲ್ಲಿ ಒಂದೇ ಒಂದು ಪೈಸೆ ಭಷ್ಟಾಚಾರ ಮಾಡಿದ್ದರೆ ನಾನು ರಾಜಕೀಯ ಬಿಡ್ತೀನಿ. ಇಲ್ಲಾಂದ್ರೆ ಮೋದಿ ಅವರು ಪ್ರಧಾನಿ ಸ್ಥಾನ ಬಿಡ್ತಾರಾ ಕೇಳಿ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಸವಾಲು ಹಾಕಿದ್ದಾರೆ. 

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಬರಿ ಭ್ರಷ್ಟಾಚಾರ ಎಂದು ಸುಳ್ಳು ಹೇಳುತ್ತಿ ದ್ದಾರೆ. ಬಿಜೆಪಿ ಅವಧಿಯಲ್ಲಿ ಕೋವಿಡ್ ವೇಳೆ ನಡೆದ ಭ್ರಷ್ಟಾಚಾರ ಬಗ್ಗೆ ಪ್ರಧಾನಿ ಏನು ಹೇಳುತ್ತಾರೆ. ಮೋದಿ ಅವರಿಗೆ ಕರ್ನಾಟಕ ಮತ್ತು ಸಿದ್ದರಾಮಯ್ಯ ಇಬ್ಬರೂ ಟಾರ್ಗೆಟ್ ಎಂದರು. ಕರ್ನಾಟಕ ಅತಿ ದೊಡ್ಡ ರಾಜ್ಯ. ಇಲ್ಲಿ ನಾವು 136 ಸ್ಥಾನ ಗೆದ್ದಿದ್ದೇವೆ. ಹೀಗಾಗಿ ನಮ್ಮನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ನಮ್ಮಲ್ಲಿ ಯಾವ ಭ್ರಷ್ಟಾಚಾರವೂ ಇಲ್ಲ. ಭ್ರಷ್ಟಾಚಾರ ನಡೆಯುವುದಕ್ಕೂ ಬಿಡುವುದಿಲ್ಲ ಎಂದು ಹೇಳಿದರು. 

ಕೋರ್ಟ್‌ಗಳು ಕೇಂದ್ರ ಸರ್ಕಾರದ ಮಾತು ಕೇಳುವ ಸ್ಥಿತಿ: ಯತೀಂದ್ರ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ

ಕರಿಯ ಹೇಳಿಕೆಗೆ ಸಮರ್ಥನೆ: 

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್ ಅಹಮದ್ ಅವರು ಕರಿಯ ಎಂದು ಹೇಳಿರುವುದನ್ನು ಸಮರ್ಥಿಸಿದ ಸಿದ್ದರಾಮಯ್ಯ ಅವರು, ದೇವೇಗೌಡರು ನನ್ನ ಸೊಕ್ಕು ಮುರೀತೀನಿ, ಗರ್ವಭಂಗ ಮಾಡುತ್ತೀನಿ ಎಂದು ಹೇಳಿದ್ದು ಸರಿನಾ? ಜಮೀರ್‌ಮತ್ತು ಕುಮಾರಸ್ವಾಮಿ ಥಿಕ್ ಅಂಡ್ ಸ್ಟೀನ್ ಫ್ರೆಂಡ್ಸ್. ಅವರವರ ನಡುವೆ ಏನೇನೋ ನಡೆಯು ತ್ತಿರುತ್ತದೆ. ಆ ವಿಚಾರ ಜಮೀ‌ರ್ ಈಗಾಗಲೇ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಇದೆಲ್ಲವೂ ಉಪಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ ಎಂದರು. 

ಮುಸ್ಲಿಂ ಮೀಸಲು ಚಿಂತನೆ ಇಲ್ಲ: 

ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡುವಂತೆ ಕೆಲವರು ಕೇಳಿದ್ದಾರೆ, ಮನವಿ ಕೊಟ್ಟಿದ್ದಾರೆ. ಆದರೆ ಈ ಬಗ್ಗೆ ಯಾವ ಚಿಂತನೆಯೂ ನಡೆದಿಲ್ಲ. ಬಿಜೆಪಿ ಸುಮ್ಮನೆ ಕೋಮುವಾದದ ಹಿನ್ನೆಲೆಯಲ್ಲಿ ಇದನ್ನು ವಿವಾದ ಮಾಡುತ್ತಿದೆ. ಶಾಂತಿ ಸೌಹರ್ದ ಕೆಡಿಸುವುದೇ ಅವರ ಕೆಲಸ. ಹೀಗಾಗಿ ಇದು ವಿವಾದವಾಗುತ್ತಿದೆ ಅಷ್ಟೇ ಎಂದರು. ಮುಡಾ ಕೇಸಲ್ಲಿ ಇ.ಡಿ.ತನ್ನ ಕೆಲಸ ಮಾಡುತ್ತಿದೆ. ಅದರ ಬಗ್ಗೆ ಏನೂ ಹೇಳುವುದಿಲ್ಲ. ಅವರು ಯಾರನ್ನು ಬೇಕಾ ದರೂ ಕರೆಸಲಿ, ವಿಚಾರಣೆ ಮಾಡಲಿ. ಅದು ಅವರ ತನಿಖಾ ಕ್ರಮ ಎಂದಷ್ಟೇ ಹೇಳಿದರು.

ಬಂಡೀಪುರ ರಾತ್ರಿ ಸಂಚಾರ ನಿಷೇಧ ವಾಪಸ್ ಪಡೆಯಲ್ಲ 

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ತೆಗೆಯುವ ಪ್ರಸ್ತಾವ, ಮಾತುಕತೆ ಯಾವುದೂ ಸರ್ಕಾರದ ಮುಂದೆ ಇಲ್ಲ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

20000 ರೈತರ ಜತೆ ಸೇರಿ ಡಿ. 9ಕ್ಕೆ ಸುವರ್ಣಸೌಧಕ್ಕೆ ಮುತ್ತಿಗೆ : ಬಿವೈವಿ
ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ