ರಾಜ್ಯದಲ್ಲಿ ತೀವ್ರ ಬರ ಇದ್ದರೂ ಸಿಎಂ, ಡಿಸಿಎಂಕ್ರಿಕೆಟ್‌ ವೀಕ್ಷಣೆ: ಎಚ್‌ಡಿಕೆ ಕಿಡಿ

Published : Oct 22, 2023, 07:21 AM IST
ರಾಜ್ಯದಲ್ಲಿ ತೀವ್ರ ಬರ ಇದ್ದರೂ ಸಿಎಂ, ಡಿಸಿಎಂಕ್ರಿಕೆಟ್‌ ವೀಕ್ಷಣೆ: ಎಚ್‌ಡಿಕೆ ಕಿಡಿ

ಸಾರಾಂಶ

ರಾಜ್ಯದಲ್ಲಿ ಬರ ಪರಿಸ್ಥಿತಿ, ವಿದ್ಯುತ್ ಅಭಾವ ಸೇರಿದಂತೆ ಸಾಕಷ್ಟು ಸಮಸ್ಯೆಗಳಿದ್ದರೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ಪಾಕಿಸ್ತಾನ-ಆಸ್ಟ್ರೇಲಿಯಾ ಪಂದ್ಯ ವೀಕ್ಷಣೆ ಮಾಡಿದ್ದಾರೆ. ಅವರು ಯಾರಿಗೆ ಬೆಂಬಲ ನೀಡಲು ಹೋಗಿದ್ದರು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಬೆಂಗಳೂರು (ಅ.22) :  ರಾಜ್ಯದಲ್ಲಿ ಬರ ಪರಿಸ್ಥಿತಿ, ವಿದ್ಯುತ್ ಅಭಾವ ಸೇರಿದಂತೆ ಸಾಕಷ್ಟು ಸಮಸ್ಯೆಗಳಿದ್ದರೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ಪಾಕಿಸ್ತಾನ-ಆಸ್ಟ್ರೇಲಿಯಾ ಪಂದ್ಯ ವೀಕ್ಷಣೆ ಮಾಡಿದ್ದಾರೆ. ಅವರು ಯಾರಿಗೆ ಬೆಂಬಲ ನೀಡಲು ಹೋಗಿದ್ದರು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಶನಿವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ರಾಜ್ಯವೇ ಕತ್ತಲೆಯಲ್ಲಿ ಇದ್ದರೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ತಮ್ಮ ಸಚಿವರು, ಅಧಿಕಾರಿಗಳ ಪಟಾಲಂ ಕಟ್ಟಿಕೊಂಡು ಏಳೆಂಟು ಗಂಟೆ ಕ್ರಿಕೆಟ್ ಪಂದ್ಯ ನೋಡಲು ಹೋಗಿದ್ದಾರೆ. ಅಲ್ಲಿ ಇವರೆಲ್ಲ ಮಜಾ ಮಾಡಿಕೊಂಡು ಕೂತಿದ್ದರು. ಇವರು ಯಾವ ದೇಶಕ್ಕೆ ಬೆಂಬಲ ನೀಡಲು ಹೋಗಿದ್ದರು? ಆಸ್ಟ್ರೇಲಿಯಾಕ್ಕಾ? ಅಥವಾ ಪಾಕಿಸ್ತಾನಕ್ಕಾ ಎಂಬುದನ್ನು ಜನರಿಗೆ ಹೇಳಬೇಕಲ್ಲವೆ ಎಂದು ಟೀಕಿಸಿದರು.

 

ಬೆಂಗ್ಳೂರಿನಲ್ಲಿ ನಡೆದ ಆಸ್ಟ್ರೇಲಿಯಾ - ಪಾಕಿಸ್ತಾನ ಮ್ಯಾಚ್‌ ವೀಕ್ಷಿಸಿದ ಸಿಎಂ, ಡಿಸಿಎಂ

ಭಾರತ- ಪಾಕಿಸ್ತಾನ ಪಂದ್ಯವಾದರೆ ನೋಡಲಿ ಎನ್ನಬಹುದಿತ್ತು. ಭಾರತ ತಂಡ ಆಡುತ್ತಿದ್ದರೆ, ನಮ್ಮ ತಂಡಕ್ಕೆ ಬೆಂಬಲ ಕೊಡಲು ಹೋಗಿದ್ದಾರೆ ಎಂದು ಭಾವಿಸಬಹುದಿತ್ತು. ಆದರೆ ಪಾಕಿಸ್ತಾನ- ಆಸ್ಟ್ರೇಲಿಯಾ ಪಂದ್ಯ ನೋಡಲು ಹೋಗಿದ್ದಾರೆ. ಇಂತಹ ಸಂಕಷ್ಟ ಕಾಲದಲ್ಲಿಯೂ ಇವರಿಗೆ ಎಂಜಾಯ್ ಮಾಡುವ ಮನಃಸ್ಥಿತಿ ಇದೆ. ಅದಕ್ಕೆ ಏನೆಂದು ಹೇಳುವುದು. ತಾವು ಕ್ರೀಡೆಗಳ ವಿರೋಧಿಯಲ್ಲ, ನಮ್ಮ ಬೆಂಬಲವೂ ಇದೆ. ಆದರೆ ಬರಗಾಲ, ವಿದ್ಯುತ್ ಅಭಾವದ ಸಂದರ್ಭದಲ್ಲಿ ಸಮಯ ಅವಕಾಶ ಮಾಡಿಕೊಂಡು 8 ಗಂಟೆ ಪಂದ್ಯ ವೀಕ್ಷಿಸಿದ್ದಾರೆ ಎಂದು ಕಿಡಿಕಾರಿದರು.

ಕ್ರೀಡೆಗೆ ಪ್ರೋತ್ಸಾಹ ನೀಡಲು ಕ್ರಿಕೆಟ್‌ ಪಂದ್ಯ ವೀಕ್ಷಣೆ:

ಕ್ರಿಕೆಟ್‌ ಪಂದ್ಯ ವೀಕ್ಷಣೆಗೆ ಹೋಗಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್‌ ಅವರು, ಕ್ರೀಡೆಗೆ ಪ್ರೋತ್ಸಾಹ ನೀಡುವುದು, ಬರ ನಿರ್ವಹಿಸುವುದು, ಸಮಾಜ ಸೇವೆ ಮಾಡುವುದು ಹೇಗೆ ಎಂಬುದು ನಮಗೆ ಗೊತ್ತಿದೆ. ಆದರೆ, ಅವರಿಗೆ ಕ್ರೀಡೆಯ ರುಚಿಯೇ ಇಲ್ಲ. ಕ್ರೀಡೆಗೆ ಪ್ರೋತ್ಸಾಹ ನೀಡಲೆಂದು ಕ್ರಿಕೆಟ್ ನೋಡಲು ಹೋಗಿದ್ದಾಗಿ ಹೇಳಿದರು.

ಕ್ರಿಕೆಟ್‌ ಭದ್ರತೆಗಿದ್ದ ಪೊಲೀಸರಿಗೆ ನೀಡಿದ ಮೊಸರನ್ನದಲ್ಲಿ ಹುಳ!

‘ಹೆಚ್ಚು ಶಕ್ತಿಶಾಲಿಯಾಗಿದ್ದರೆ, ಹೆಚ್ಚು ಶತ್ರುಗಳು. ಕಡಿಮೆ ಶಕ್ತಿಶಾಲಿಯಾಗಿದ್ದರೆ ಕಡಿಮೆ ಶತ್ರುಗಳು. ಶಕ್ತಿಯೇ ಇಲ್ಲದಿದ್ದರೆ ಶತ್ರುಗಳೇ ಇರುವುದಿಲ್ಲ. ಈ ಕಾರಣಕ್ಕಾಗಿಯೇ ಬಿಜೆಪಿ ಮತ್ತು ಜೆಡಿಎಸ್‌ನವರು ನನ್ನನ್ನೇ ಟಾರ್ಗೆಟ್‌ ಮಾಡುತ್ತಿದ್ದಾರೆ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ