ಸಭೆಯುದ್ದಕ್ಕೂ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು. ಔಷಧ ಪೂರೈಸಿದ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಜತೆಗೆ ಕರ್ತವ್ಯ ಲೋಪ ಎಸಗಿರುವ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಅಮಾನತು ಮಾಡುವಂತೆ ಹಾಗೂ ಜಿಲ್ಲಾಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ನೀಡುವಂತೆ ಆದೇಶಿಸಿದರು.
ಬೆಂಗಳೂರು(ಡಿ.01): ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಔಷಧ ನಿಯಂತ್ರಕರು ಮತ್ತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 'ನಿಮ್ಮ ನಿರ್ಲಕ್ಷ್ಯದಿಂದ ಈ ರೀತಿ ಪ್ರಕರಣಗಳು ಸಂಭವಿಸುತ್ತಿವೆ. ನೀವೇನು ಮಹಾರಾಜರೇ? ಎಂದು ಝಾಡಿಸಿದ್ದಾರೆ. ಜತೆಗೆ, ರಿಂಗರ್ ಲ್ಯಾಕ್ಟೇಟ್ ಐವಿ ದ್ರಾವಣ ಪೂರೈಸಿದ ಪಶ್ಚಿಮ ಬಂಗಾಳ ಮೂಲದ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಿ, ಸಂಸ್ಥೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆದೇಶಿಸಿದ್ದಾರೆ.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ ಸಂಭವಿಸಿದ ನಾಲ್ವರು ಬಾಣಂತಿಯರ ಸಾವಿನ ಕುರಿತಾಗಿ ತಮ್ಮ ಅಧ್ಯಕ್ಷತೆಯಲ್ಲಿ ಶನಿವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಭೆ ನಡೆಸಿದರು. ಸಭೆಯಲ್ಲಿ ಪ್ರಕರಣಕ್ಕೆ ಕಾರಣರಾದವರ ವಿರುದ್ದ ಕಠಿಣ ಕ್ರಮಕ್ಕೆ ಆದೇಶಿಸಿದ ಸಿದ್ದರಾಮಯ್ಯ, 'ರಿಂಗರ್ ಲ್ಯಾಕ್ಟೇಟ್ ಐವಿ ದ್ರಾವಣ ಬಳಕೆಗೂ ಮುನ್ನ ಪರೀಕ್ಷಿಸಲು ಆಗಲಿಲ್ಲವೇ? ಎಂದು ಉಮೇಶ್‌ರನ್ನು ಪ್ರಶ್ನಿಸಿದರು. ಜತೆಗೆ, ಕಳಪೆ ಔಷಧ ಪೂರೈಕೆ ಮತ್ತು ಬಳಕೆಯಾಗಬೇಕೆಂದರೆ ಅಧಿಕಾರಿಗಳು, ಔಷಧ ಪೂರೈಸುವ ಸಂಸ್ಥೆ ನಡುವೆ ಒಳ ಒಪ್ಪಂದವಾಗಿರಬಹುದು. ಈ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದರು.
undefined
ಬಳ್ಳಾರಿ ದುರಂತದ ಭಯಾನಕ ಸತ್ಯ ಬಯಲು: ಬಡ ಹೆಣ್ಣು ಮಕ್ಕಳ ಜೀವದ ಜೊತೆ ಇದೆಂಥಾ ಚೆಲ್ಲಾಟ?
ರಿಂಗರ್ ಲ್ಯಾಕ್ಟೇಟ್ ಪೂರೈಸಿದ ಸಂಸ್ಥೆ ವಿರುದ್ಧ ಪ್ರಕರಣ:
ಸಭೆಯುದ್ದಕ್ಕೂ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು. ಔಷಧ ಪೂರೈಸಿದ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಜತೆಗೆ ಕರ್ತವ್ಯ ಲೋಪ ಎಸಗಿರುವ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಅಮಾನತು ಮಾಡುವಂತೆ ಹಾಗೂ ಜಿಲ್ಲಾಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ನೀಡುವಂತೆ ಆದೇಶಿಸಿದರು. ಮೃತರ ಕುಟುಂಬದವರಿಗೆ ಸರ್ಕಾರ ನೀಡುವ 2 ಲಕ್ಷ ರು. ಪರಿಹಾರದ ಜತೆಗೆ, ಡ್ರಗ್ ಪೂರೈಸಿದ ಸಂಸ್ಥೆಯಿಂದಲೂ ಪರಿಹಾರ ವಸೂಲಿ ಮಾಡಿ ಮೃತರ ಕುಟುಂಬಕ್ಕೆ ನೀಡುವಂತೆ ಸೂಚಿಸಿದರು.
ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ:
ಬಳ್ಳಾರಿ ಪ್ರಕರಣದ ಮಾದರಿಯಲ್ಲಿ ರಾಜ್ಯದ ಇತರ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಿನ ಪ್ರಕರಣಗಳು ದಾಖಲಾಗಿವೆಯೇ ಎಂಬುದನ್ನು ಪರಿಶೀಲಿಸಬೇಕಿದೆ. ಅದಕ್ಕಾಗಿ ಅಭಿವೃದ್ಧಿ ಆ ಯುಕ್ತರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಬೇಕು.ಸಮಿ ತಿಯಿಂದ ವಾರದಲ್ಲಿ ವರದಿ ಪಡೆಯುವ ಕುರಿತು ಸಭೆಯಲ್ಲಿ ನಿರ್ಣಯಿಸಲಾಯಿತು. ಸಭೆಯಲ್ಲಿ ಸಚಿವ ದಿನೇಶ್ ಗುಂಡೂ ರಾವ್, ಡಾ. ಶರಣಪ್ರಕಾಶ್ ಪಾಟೀಲ್ ಇತರರಿದ್ದರು.
ಬಳ್ಳಾರಿ ಬಾಣಂತಿಯರ ಸಾವಿಗೆ ಗ್ಲುಕೋಸ್ ಕಾರಣ?
ತಮಿಳುನಾಡು ರೀತಿ ಔಷಧಗಳ ಖರೀದಿ ಇಲಾಖೆ ಪುನಾರಚನೆ
ಸಭೆಯಲ್ಲಿ ಔಷಧ ಖರೀದಿ ಪ್ರಕ್ರಿಯೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದವು. ಅಂತಿಮವಾಗಿ ತಮಿಳುನಾಡು ಮಾದರಿಯಲ್ಲಿ ಔಷಧಗಳ ಖರೀದಿ ಪ್ರಕ್ರಿಯೆ ಹಾಗೂ ಔಷಧ ನಿಯಂತ್ರಣ ಇಲಾಖೆ ಪುನಾರಚನೆ ಮಾಡಬೇಕು. ಅದಕ್ಕಾಗಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರ ಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚಿಸಿದರು. ಇದೇ ವೇಳೆ ಮೆಡಿಸಿನ್ ಮಾಫಿಯಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ದುರ್ಘಟನೆಗೆ ಕಾರಣರಾದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ರಿಂಗರ್ ಲ್ಯಾಕ್ಟೇಟ್ ಐವಿ ದ್ರಾವಣ ಪೂರೈಸಿದ ಸಂಸ್ಥೆ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಮತ್ತು ಡ್ರಗ್ ಕಂಟ್ರೋಲ್ ಅಮಾನತು ಮಾಡಲು ಸೂಚಿಸಲಾಗಿದೆ. ಜತೆಗೆ ರಾಜ್ಯದ ಇತರ ಆಸ್ಪತ್ರೆಗಳಲ್ಲಿ ಪರಿಶೀಲಿಸಲು ತಜ್ಞರ ಸಮಿತಿ ರಚಿಸಲಾಗುವುದು. ಮುಂದೆ ಈ ರೀತಿಯ ಪ್ರಕರಣ ಮರುಕಳಿಸದಂತೆ ಮಾಡಲು ನಿಯಮಗಳಲ್ಲಿ ಬದಲಾವಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.