ರಾಮಮಂದಿರ ಉದ್ಘಾಟನೆ ವೇಳೆ 'ಜೈ ಶ್ರೀರಾಮ್' ಘೋಷಣೆ ಕೂಗಿದ ಸಿಎಂ ಸಿದ್ದರಾಮಯ್ಯ!

By Sathish Kumar KH  |  First Published Jan 22, 2024, 5:59 PM IST

ಜೈ ಶ್ರೀರಾಮ್ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸ್ವತ್ತು ಆಗಿದೆ ಎನ್ನುತ್ತಲೇ ಸಿಎಂ ಸಿದ್ದರಾಮಯ್ಯ  'ಜೈ ಶ್ರೀರಾಮ್' ಎಂದು ಘೋಷಣೆ ಕೂಗಿದರು.


ಬೆಂಗಳೂರು (ಜ.22): ಜೈ ಶ್ರೀರಾಮ್ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸ್ವತ್ತು ಆಗಿದೆ. ನಾನು ನಾಸ್ತಿಕನಲ್ಲ, ಆಸ್ತಿಕನಾಗಿದ್ದೇನೆ ಎನ್ನುತ್ತಲೇ ಸಿಎಂ ಸಿದ್ದರಾಮಯ್ಯ  'ಜೈ ಶ್ರೀರಾಮ್'.., ಎಂದು ಘೋಷಣೆ ಕೂಗಿದರು. ಯಾಕೆ ನೀವು ಹೇಳೋದಿಲ್ವಾ? ಎಲ್ಲರೂ ಹೇಳಿ ಜೈ ಶ್ರೀರಾಮ್‌ ಎಂದು ಮತ್ತೊಮ್ಮೆ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ ಸಕುಟುಂಬ ಸಮೇತನಾಗಿರುವ ರಾಮ ಸೀತ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾನು ನಾಸ್ತಿಕನಲ್ಲ - ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳು ಇವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತಾತ್ತೇವೆ, ಗುಡಿ ಕಟ್ಟುತ್ತೇವೆ, ಪೂಜಿಸುತ್ತೇವೆ. ಜೈ ಶ್ರೀರಾಮ್ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸ್ವತ್ತು ಆಗಿದೆ. ಜೈ ಶ್ರೀರಾಮ್ ಎಂದು ಘೋಷಣೆ ಮೂಲಕ ನನ್ನ ಮಾತು ಮುಗಿಸುತ್ತೇನೆ ಎಂದರು.

Tap to resize

Latest Videos

ಬಾಬ್ರಿ ಮಸೀದಿ ಜಾಗಕ್ಕೆ ಹೋರಾಡಿದವರೆಲ್ಲಾ, ಇಂದಿನ ರಾಮ ಮಂದಿರಕ್ಕೆ ವಿರೋಧಿಸಿದ್ದಾರೆ: ಸಚಿವ ರಾಜಣ್ಣ

ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಪುರುಷ ಶ್ರೀರಾಮನ ಆಶಯವಾಗಿದೆ. ಯಾವುದೇ ಧರ್ಮ ಜಾತಿ-ಧರ್ಮ ಆಧಾರದ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಶ್ರೀರಾಮ ಸಮಾಜಮುಖಿ ಆಗಿದ್ದರು. ಒಬ್ಬ ಮಡಿವಾಳನ ಮಾತಿಗೂ ಬೆಲೆ ಕೊಟ್ಟರು. ಪಿತೃವಾಕ್ಯ ಪರಿಪಾಲನೆಗೆ ವನವಾಸಕ್ಕೆ ಹೋದರು. ಶ್ರೀರಾಮ, ಲಕ್ಷ್ಮಣ, ಸೀತೆ, ಆಂಜನೇಯರನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇವರೆಲ್ಲಾ ಸಕುಟುಂಬಸ್ಥರು ಎಂದರು.

ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಆಶಯ ಶ್ರೀರಾಮನ ಆದರ್ಶ ಮತ್ತು ವ್ಯಕ್ತಿತ್ವದಲ್ಲಿದೆ. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು ಎನ್ನುವುದೇ ರಾಮಾಯಣ, ಮಹಾಭಾರತದ ಸಂದೇಶವಾಗಿದೆ. ಪರಿಶಿಷ್ಠ ಪಂಗಡ ಸಮುದಾಯದ ವಾಲ್ಮೀಕಿ ಅವರು ರಾಮಾಯಣವನ್ನು ಬರೆದು ವಿಶ್ವಕ್ಕೆ ಕೊಟ್ಟರು. ದೇವರು ನಮ್ಮ ಆತ್ಮ ಮತ್ತು ಶರೀರದಲ್ಲೇ ಇದ್ದಾನೆ ಎಂದು ಬಸವಣ್ಣನವರು ನುಡಿದರು. ದೇಹವೇ ದೇಗುಲ ಎನ್ನುವ ಸಂದೇಶವನ್ನು ಮನುಷ್ಯ ಪ್ರಪಂಚಕ್ಕೆ ನೀಡಿದ್ದಾರೆ ಎಂದು ತಿಳಿಸಿದರು.

ಹನುಮನ ನಾಡಿನವರಾದ ನಾವು ಹನುಮನ ಎದೆಗಿಂತ ಮಿಗಿಲಾದ ಗುಡಿ ರಾಮನಿಗೆ ಬೇರಾವುದೂ ಇಲ್ಲ ಎಂದು ತಿಳಿದೇ ಆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಲಿಲ್ಲ. ಬದಲಿಗೆ ಊರೂರಿನಲ್ಲಿಯೂ ಹನುಮನಿಗೆ ಗುಡಿ ಕಟ್ಟಿದೆವು. ರಾಮನಿಗೆ ಹನುಮನ ಎದೆಗಿಂತ ಬೇರಾವುದಾದರೂ ಶ್ರೇಷ್ಠ ಗುಡಿಯನ್ನು ಈ ಜಗತ್ತಿನಲ್ಲಿ ಯಾರಾದರೂ ಕಟ್ಟಲು ಸಾಧ್ಯವೇ? ನಿಜ ರಾಮಭಕ್ತರು ಉತ್ತರ ಹೇಳಬೇಕು. ರಾಮ ತನ್ನ ಭಕ್ತರಲ್ಲಿ ನೋಡುವುದು ಅವರ ಸತ್ಯಸಂಧತೆ, ವಚನ ಪರಿಪಾಲನೆಯನ್ನೇ ಹೊರತು ಢಾಂಭಿಕತೆಯನ್ನಲ್ಲ. ರಾಜಕಾರಣಿಗಳಿಂದ ರಾಮ ನಿರೀಕ್ಷಿಸುವುದು ಶಾಂತಿ, ನೆಮ್ಮದಿ, ಸಹಬಾಳ್ವೆಯಿಂದ ಕೂಡಿದ ರಾಮರಾಜ್ಯದ ನಿರ್ಮಾಣವನ್ನು ಮಾತ್ರ ಎಂದು ಹೇಳಿದರು.

ಮಸೀದಿಯಲ್ಲಿ ಶ್ರೀರಾಮನನ್ನಿಟ್ಟು ಪೂಜಿಸಿದ ಮುಸ್ಲಿಮರು!

ಪ್ರಧಾನಿ ನರೇಂದ್ರಮೋದಿ ಅವರೇ, ನೀವು ನಿಜವಾದ ರಾಮಭಕ್ತರೇ ಅಗಿದ್ದರೆ ಚುನಾವಣೆಯ ವೇಳೆ ನಿಮ್ಮ ಪ್ರಣಾಳಿಕೆಯ ಮೂಲಕ ಈ ದೇಶದ ಜನತೆಗೆ ನೀಡಿದ್ದ ವಾಗ್ದಾನದಲ್ಲಿ ಎಷ್ಟು ವಾಗ್ದಾನಗಳನ್ನು ಈಡೇರಿಸಿದ್ದೀರಿ? ಎಷ್ಟನ್ನು ಈಡೇರಿಸಬೇಕಿದೆ ಎನ್ನುವುದನ್ನು ಅಯೋಧ್ಯೆಯಲ್ಲಿ ತಾವು ಇಂದು ಉದ್ಘಾಟಿಸುತ್ತಿರುವ ರಾಮಮಂದಿರದಲ್ಲಿ ನಿಂತು ಪ್ರಮಾಣ ಮಾಡಿ ಹೇಳಿ. ನಿಮಗೆ ಆ ಧೈರ್ಯವಿಲ್ಲ, ಅದು ಬರುವುದೂ ಇಲ್ಲ. ಏಕೆಂದರೆ ರಾಮ, ನಿಮಗೆ ಚುನಾವಣಾ ಅಸ್ತ್ರ ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

click me!