ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶ, ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ ಭಾಗಿ

By Suvarna News  |  First Published Jan 16, 2024, 3:57 PM IST

ಕರ್ನಾಟಕ ರಾಜ್ಯ ಹಿರಿಯ ಪೊಲೀಸ್  ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ ಭಾಗಿಯಾಗಿದ್ದಾರೆ.


ವರದಿ : ಹರೀಶ್ ರಾಮಸ್ವಾಮಿ ಏಷಿಯಾನೆಟ್ ಸುವರ್ಣ ನ್ಯೂಸ್ 

ಬೆಂಗಳೂರು (ಸೆ.16): ಕರ್ನಾಟಕ ರಾಜ್ಯ ಹಿರಿಯ ಪೊಲೀಸ್  ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ ಭಾಗಿಯಾಗಿದ್ದಾರೆ. ನೃಪತುಂಗ ರಸ್ತೆಯ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ.

Tap to resize

Latest Videos

ಸಭೆಯಲ್ಲಿ ರಾಜ್ಯದ ವಿವಿಧ ತನಿಖಾ ವಿಶೇಷತೆಗಳ ಕುರಿತು ಪ್ರದರ್ಶಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ , ಗರುಡ ಪಡೆ, ಎಫ್ ಎಸ್ ಎಲ್ ಹಾಗೂ ಮೊಬೈಲ್ ಕಮಾಂಡ್ ಕಂಟ್ರೋಲ್ ಸೆಂಟರ್ ಗಳ ವಿಶೇಷತೆಗಳ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಮಾಹಿತಿ ಪಡೆದರು. ಡ್ರಗ್ ಮುಕ್ತ ಕರ್ನಾಟಕ ಜಾಗೃತಿ ಕಾರ್ಯಕ್ರಮದ ಭಾಗವಾಗಿ, ಪೊಲೀಸರು ವಶಕ್ಕೆ ಪಡೆದಿರುವ ಹಲವು ಮಾದರಿಯ ಮಾದಕ ವಸ್ತುಗಳನ್ನ ಪ್ರದರ್ಶಿಸಲಾಗಿದೆ. ಸಭೆಯಲ್ಲಿ ರಾಜ್ಯದಲ್ಲಿ ಕಳೆದ ವರ್ಷ ಪೊಲೀಸ್ ಏಲಾಖೆಯಲ್ಲಿ ಸಾಧಿಸಿದ ಕಾರ್ಯಾಚರಣೆಗಳು, ಈ ವರ್ಷ ಹಾಕಿಕೊಂಡಿರುವ ಕಾರ್ಯ ಯೋಜನೆಗಳ ಚರ್ಚಿಸಲಾಗುತ್ತಿದೆ. ಅಲ್ಲದೆ ಮುಂಬರುವ ಲೋಕಸಭಾ ಚುನಾವಣೆ, ರಾಮಮಂದಿರ ಲೋಕಾರ್ಪಣೆ ಸಂದರ್ಭದಲ್ಲಿ ರಾಜ್ಯಾದ್ಯಂತ ಕೈಗೊಳ್ಳಬೇಕಿರುವ ಅಗತ್ಯ ಭದ್ರತಾ ಕ್ರಮಗಳ ಕುರಿತು ಚರ್ಚಿಸಲಾಯಿತು.

ಹೆಣ್ಣು ಮಗು ಹುಟ್ಟಲಿಲ್ಲವೆಂದು ತನ್ನ ನವಜಾತ ಗಂಡು ಶಿಶುವನ್ನು ಕೊಂದ ಪಾಪಿ ತಂದೆ!

ಸಂಕ್ಷಿಪ್ತ ಸೈಬರ್ ಕ್ರೈಂ ತನಿಖಾ ಕೈಪಿಡಿ ಬಿಡುಗಡೆ
ಇದೇ ವೇಳೆ "ಸಂಕ್ಷಿಪ್ತ ಸೈಬರ್ ಕ್ರೈಂ ತನಿಖಾ ಕೈಪಿಡಿ" ಯನ್ನು ಬಿಡುಗಡೆಗೊಳಿಸಲಾಯಿತು. ತಂತ್ರಜ್ಞಾನ ವೇಗವಾಗಿರುವ ಈ ವಿದ್ಯುನ್ಮಾನ ಯುಗದಲ್ಲಿ ಅದರಿಂದ ಆಗುತ್ತಿರುವ ಸಮಸ್ಯೆಗಳು ಕೂಡ ಜಟಿಲವಾಗಿದ್ದು, ಪೊಲೀಸ್ ಅಧಿಕಾರಿಗಳು ಇಂತಹ ಸನ್ನಿವೇಶಗಳನ್ನು ಎದುರಿಸಲು ತಾಂತ್ರಿಕವಾಗಿ ಒಂದು ಹೆಜ್ಜೆ ಮುಂದೆ ಇರಬೇಕಾಗಿರುತ್ತದೆ.ಸಂಕ್ಷಿಪ್ತ ಸೈಬರ್ ಕ್ರೈಂ ತನಿಖಾ ಕೈಪಿಡಿಯು ಅಂಥಹ  ಸೈಬರ್ ತನಿಖಾ ಪ್ರಕ್ರಿಯೆ, ಡಿಜಿಟಲ್ ಫಾರೆನ್ಸಿಕ್‌ನಲ್ಲಿ ಪ್ರಮಾಣಿತ ಅಭ್ಯಾಸಗಳು, ಇತ್ತೀಚೆಗೆ ಸೈಬರ್ ಅಪರಾಧಗಳಲ್ಲಿ ಬದಲಾದ ಸನ್ನಿವೇಶಗಳ ಒಳನೋಟವನ್ನು ಒಳಗೊಂಡಿದೆ. ಈ ಕೈಪಿಡಿಯನ್ನು ಸಿ.ಐ.ಡಿ., ಕರ್ನಾಟಕ ರವರು ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾ (ಡಿ.ಎಸ್.ಸಿ.ಐ), ಇನ್ಫೋಸಿಸ್ ಫೌಂಡೇಶನ್ ರವರ ಸಹಯೋಗದೊಂದಿಗೆ ಸ್ಥಾಪಿಸಲಾದ ಸೆಂಟರ್ ಫಾರ್ ಸೈಬರ್ ಕ್ರೈಂ ಟ್ರೈನಿಂಗ್ & ರಿಸರ್ಚ್ (ಸಿ.ಸಿ.ಐ.ಟಿ.ಆರ್) ಮೂಲಕ ಅಭಿವೃದ್ಧಿಪಡಿಸಲಾಗಿದೆ.

ವಿಶೇಷತೆಗಳು :
ಸೈಬರ್ ಅಪರಾಧಗಳ ಅವಲೋಕನ, ಸೈಬರ್ ಕಾನೂನುಗಳು, ಡಿಜಿಟಲ್ ಫಾರೆನ್ಸಿಕ್ಸ್, ಸೈಬರ್ ಅಪರಾಧಗಳ ಕಾರ್ಯವಿಧಾನಗಳು, ವಿದ್ಯುನ್ಮಾನ ಸಾಕ್ಷ್ಯಗಳ ಸ್ವೀಕಾರಾರ್ಹತೆ ಮತ್ತು ಫಾರೆನ್ಸಿಕ್ಸ್‌ನಲ್ಲಿ ಪ್ರಮಾಣಿತ ತನಿಖಾ ವಿಧಾನಗಳಿಗೆ ಮಾತ್ರ ಸೀಮಿತವಾಗದೇ ವ್ಯಾಪಕ ವಿಷಯಾಧಾರಿತ ಮಾಹಿತಿಗಳನ್ನೊಳಗೊಂಡಿದೆ. ಮತ್ತು ಡಿಜಿಟಲ್ ಫಾರೆನ್ಸಿಕ್ಸ್ ಮತ್ತು ಸೈಬರ್ ಅಪರಾಧಗಳ ತನಿಖಾ ಕ್ಷೇತ್ರದಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ನುರಿತ ಪೊಲೀಸ್ ಅಧಿಕಾರಿಗಳು ಹಾಗೂ ಡಿ.ಎಸ್.ಸಿ.ಐ. ನ ವಿಷಯ ತಜ್ಞರು ಈ ಕೈಪಿಡಿಯನ್ನ ತಯಾರಿಸಿದ್ದಾರೆ. ಕಾನೂನು ಮತ್ತು ನೈತಿಕ ಚೌಕಟ್ಟಿನ ಪರಿಮಿತಿಯೊಳಗೆ ತನಿಖಾಧಿಕಾರಿಗಳು  ಪರಿಣಾಮಕಾರಿ ತನಿಖೆ ನಡೆಸುವುದಕ್ಕೆ ಒತ್ತು ನೀಡಲಾಗಿದ್ದು ತನಿಖಾಧಿಕಾರಿಗಳ ಹೊಣೆಗಾರಿಕೆ ಮತ್ತು ಜವಾಬ್ದಾರಿಯನ್ನು ಈ ಕೈಪಿಡಿಯ ಮೂಲಕ ಸ್ಪಷ್ಟಪಡಿಸಲಾಗಿದೆ. ಸೈಬರ್ ಅಪರಾಧಗಳ ವ್ಯಾಪ್ತಿಯನ್ನು ಅರಿಯಲು ಅಗತ್ಯವಿರುವ ಜ್ಞಾನ ಹಾಗೂ ಸಾಧನಗಳೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಸಂಕ್ಷಿಪ್ತ ಸೈಬರ್ ಕ್ರೈಂ ತನಿಖಾ ಕೈಪಿಡಿಯನ್ನು ರಚಿಸಲಾಗಿದೆ.

17ನೇ ವಯಸ್ಸಿನಲ್ಲಿ ವಿವಾಹವಾಗಿ ವಿಚ್ಚೇದನ ಪಡೆದ ನಟಿ ಹಿಟ್‌ ಸಿನೆಮಾಕ್ಕಾಗಿ 33 ವರ್ಷಗಳೇ ಕಾಯಬೇಕಾಯ್ತು!

ಪೊಲೀಸ್ ಇಲಾಖೆಯಲ್ಲಿ ಎಐ, ಎಮ್.ಎಲ್ ತಂತ್ರಜ್ಞಾನ ಆಧರಿತ ನೂತನ ವ್ಯವಸ್ಥೆಗಳಿಗೆ ಚಾಲನೆ
ರಾಜ್ಯ ಪೊಲೀಸ್ ಪ್ರಧಾನ  ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ, ಪೊಲೀಸ್ ಇಲಾಖೆಯಲ್ಲಿ ಜಾರಿಗೊಳಿಸಿರುವ ಪೊಲೀಸ್ ಐಟಿ-V2 ತಂತ್ರಾಂಶ, ITPA ಸರಳ ಆಪ್, ಪೊಲೀಸ್ ಮಿತ್ರ ಚಾಟ್ ಬಾಟ್, CG ನೋಂದಣಿ ಪೋರ್ಟಲ್, ರಾಜ್ಯ ಪೊಲೀಸ್ ಕೃತಕ ಬುದ್ದಿ ಮತ್ತೆ ತಂತ್ರಾಂಶ, ಆರ್ಥಿಕ ಅಪರಾಧಗಳ ತನಿಖಾ ತಂತ್ರಾಂಶ,  ಕರ್ನಾಟಕ ಪೊಲೀಸ್ ಡೇಟಾಥಾನ್ 2024, ಹ್ಯಾಕಥಾನ್ 2024ಗಳಿಗೆ ಚಾಲನೆ ನೀಡಿದರು.

ಈ ಸಂಧರ್ಭದಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು‌ ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.

ಪೊಲೀಸ್ ಐಟಿ ವಿ2 ತಂತ್ರಜ್ಞಾನ :
ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಪೂರ್ಣ ಪ್ರಮಾಣದಲ್ಲಿ ತನಿಖಾ ಪ್ರಕ್ರಿಯೆಯನ್ನು ಸಮಗ್ರವಾಗಿ ಕೈಗೊಳ್ಳಲು ಎಫ್‌ಐಆರ್ ನೋಂದಣಿಯಿಂದ ಹಿಡಿದು ಪ್ರಕರಣದ ವಿಲೇವಾರಿವರೆಗಿನ ಎಲ್ಲಾ ಕಾರ್ಯಚಟುವಟಿಕೆಗಳನ್ನು ತಡೆರಹಿತವಾಗಿ ನಿರ್ವಹಿಸುವ ತಂತ್ರಜ್ಞಾನವಾಗಿದೆ. ಮತ್ತು ಆರ್ಟಿಫಿಶಿಯಲ್ ಇಂಟಲಿಜೆನ್ಸ್, ಮಶೀನ್ ಲರ್ನಿಂಗ್ ತಂತ್ರಜ್ಞಾನವನ್ನ ಬಳಸಿಕೊಳ್ಳುವ ಮೂಲಕ‌ ಸಾರ್ವಜನಿಕರಿಗೆ ಹೆಚ್ಚಿನ ಸೇವೆ ಒದಗಿಸಲು ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗಿದೆ.

ಐಟಿಪಿಎ (ITPA) ಸರಳ ಮೊಬೈಲ್ ಆ್ಯಪ್:
ಆಧುನಿಕ ಯುಗದ ಗುಲಾಮಗಿರಿಯ ರೂಪವಾಗಿರುವ ಮಾನವ ಕಳ್ಳಸಾಗಣಿಕೆಯು ಜನರ ಘನತೆ ಮತ್ತು ಭದ್ರತೆಗೆ ಮಾರಕವಾಗಿದೆ. ಮಾನವ ಕಳ್ಳಸಾಗಣಿಕೆಯ ವಿರುದ್ಧದ ಕಾನೂನುಗಳು ನಿರ್ಣಾಯಕವಾಗುತ್ತದೆ. ಆದ್ದರಿಂದ ಅಧಿಕಾರಿಗಳಿಗೆ ಅಗತ್ಯವಿರುವ ದಾಖಲೆಗಳು, ಕಾರ್ಯವಿಧಾನಗಳು, ಅನ್ವಯವಾಗುವ ಕಾನೂನುಗಳು ಮತ್ತು ಸಂತ್ರಸ್ಥರಿಗೆ ಆಶ್ರಯ ತಂಗುದಾಣಗಳ ಕುರಿತು ಸುಲಭವಾದ ಮಾರ್ಗದರ್ಶನ ನೀಡಲು ಸಹಕಾರಿಯಾಗಲಿದೆ.

ಚಾಟ್‌ಬಾಟ್ :
ಸಾರ್ವಜನಿಕರಿಗೆ‌ ಇಂದಿನ ಯುಗದಲ್ಲಿ ಸಾಮಾನ್ಯವಾಗಿ ಎದುರಾಗುವ ಸಮಸ್ಯೆಗಳಾದ ಸೈಬರ್ ಅಪರಾಧ, ಸಂಚಾರ, ಮಹಿಳೆ & ಮಕ್ಕಳ ಮೇಲಿನ ಸಮಸ್ಯೆಗಳು ಮತ್ತು ಹಿರಿಯ ನಾಗರೀಕರ ಸಮಸ್ಯೆಗಳಿಗೆ ಸಂಬಂಧಿಸಿದಂತ ಪ್ರಶ್ನೆಗಳಿಗೆ ಉತ್ತರ ನೀಡಲು ಅನುಕೂಲಕರವಾಗುವಂತೆ "ಪೊಲೀಸ್ ಮಿತ್ರ" ಎಂಬ ಚಾಟ್‌ಬಾಟ್ ಸೇವೆಯನ್ನು ChatGPT ತಂತ್ರಜ್ಞಾನದೊಂದಿಗೆ ಸಂಯೋಜನೆಗೊಳಿಸಿ ಅನುಷ್ಠಾನಪಡಿಸಲಾಗಿದೆ.

ಅನುಕಂಪ ಆಧಾರದ ನೇಮಕಾತಿ ಪೋರ್ಟಲ್:
ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಪ್ರಾಣ ಕಳೆದುಕೊಂಡ ಪೊಲೀಸ್ ಅಧಿಕಾರಿಗಳ ಕುಟುಂಬಗಳಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಉದ್ದೇಶದಿಂದ ಅನುಕಂಪ  ನೇಮಕಾತಿಯನ್ನು ಪಾರದರ್ಶಕವಾಗಿ ಹಾಗೂ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡಲಾಗುತ್ತಿದೆ. 
ಇದರಿಂದ ಅರ್ಜಿದಾರರು ಕಚೇರಿಗಳಿಗೆ ಅನವಶ್ಯಕವಾಗಿ ಭೇಟಿ ನೀಡುವ ಅವಧಿ ಕಡಿಮೆಯಾಗಲಿದ್ದು,ಮೃತ ನೌಕರನ ಕುಟುಂಬಕ್ಕೆ ನೆಮ್ಮದಿಯನ್ನು ನೀಡುವಲ್ಲಿ ನೆರವಾಗಲಿದೆ.

ಕೆಎಸ್‌ಪಿ ಎಐ:
ಪೊಲೀಸ್ ಇಲಾಖೆಯ ಹೊಸದಾಗಿ ಅನುಷ್ಟಾನಗೊಳಿಸುತ್ತಿರುವ ಕೆಎಸ್‌ಪಿ ಎಐ ತಂತ್ರಾಂಶವು ಆರ್ಟಿಫಿಶಿಯಲ್ ಇಂಟಲಿಜೆನ್ಸ್, ಮಶೀನ್ ಲರ್ನಿಂಗ್ ತಂತ್ರಜ್ಞಾನದ ಮೂಲಕ ಪ್ರಕರಣದ ಸಂಕ್ಷಿಪ್ತ ಸಂಗತಿಗಳನ್ನ ಉಪ ಸಂಗತಿಗಳಾಗಿ ವಿಭಜಿಸುವ, ಪ್ರಕ್ರಿಯೆಯನ್ನು ಸ್ವಯಂಚಾಲಿತ ಗೊಳಿಸಕೊಳ್ಳುವ ಮೂಲಕ ಪ್ರಕರಣದ ವಿಶ್ಲೇಷಣೆಯಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರಲಿದೆ. ಲಭ್ಯವಿರುವ ದತ್ತಾಂಶದ ಮೇಲೆ ತರಬೇತಿ ಪಡೆದ ಅತ್ಯಾಧುನಿಕ ಎಐ ಮಾದರಿಯನ್ನು ಬಳಸಿಕೊಂಡು, ಮಾನವ ಹಸ್ತಕ್ಷೇಪವಿಲ್ಲದೆ ಪ್ರಕರಣಕ್ಕೆ ಸಂಬಂಧಿಸಿದ ಅನ್ವಯವಾಗುವ ಕಾಯ್ದೆಗಳು ಮತ್ತು ವಿಭಾಗಗಳನ್ನು ಪರಿಣಾಮಕಾರಿಯಾಗಿ ಗುರುತಿಸಲಿದೆ.

ಆರ್ಥಿಕ ಅಪರಾಧಗಳ ತನಿಖಾ ತಂತ್ರಾಂಶ
ಆನ್‌ಲೈನ್ ಹಣಕಾಸು ವಹಿವಾಟುಗಳು ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ಆರ್ಥಿಕ ಅಪರಾಧಗಳು ಸಹ ಹೆಚ್ಚಾಗುತ್ತಿದ್ದು ಅಪಾರ ಪ್ರಮಾಣದ ದತ್ತಾಂಶವನ್ನು ವಿಶ್ಲೇಷಿಸಲು ಮತ್ತು ಅಪರಾಧಕ್ಕೆ ಸಂಬಂಧಪಟ್ಟ ಕುರುಹುಗಳನ್ನು ಗುರುತಿಸಲು, ಸ್ವಯಂಚಾಲಿತ ಮಾದರಿ ಗುರುತಿಸುವಿಕೆ, ಹಣಕಾಸು ವಹಿವಾಟಿನ ಪರಸ್ಪರ ಸಂಬಂಧಗಳ ವಿಶ್ಲೇಷಣೆಯಲ್ಲಿ ಈ ತಂತ್ರಾಂಶವು ಸಹಕಾರಿಯಾಗಲಿದೆ.

click me!