
ಮೈಸೂರು (ನ.17): ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮದಲ್ಲಿ ನಾಡಗೀತೆ ಹಾಡುವ ವೇಳೆ ಸಿಎಂ ಸಿದ್ದರಾಮಯ್ಯ ಎದ್ದು ನಿಲ್ಲುವುದಕ್ಕೆ ತಡ ಮಾಡಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಳಲೆ ಗ್ರಾಮದಲ್ಲಿ ನಡೆದಿದೆ.
ಕಡೇಮಾಲಮ್ಮ ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮದಲ್ಲಿ ನಡೆದಿರುವ ಘಟನೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಳಲೆ ಗ್ರಾಮದಲ್ಲಿರುವ ದೇವಸ್ಥಾನ. ನಾಡಗೀತೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು. ವೇದಿಕೆ ಮೇಲೆ ಆಸೀನರಾಗಿದ್ದ ಸಿದ್ದರಾಮಯ್ಯ ಮಗ ಯತೀಂದ್ರ ಸಿದ್ದರಾಮಯ್ಯರ ಪೋನ್ ಹಿಡಿದು ಏನೋ ಪರಿಶೀಲನೆ ನಡೆಸುತ್ತಿದ್ದರು. ಸುಮಾರು ಹೊತ್ತು ಪೋನ್ ನೋಡಿಕೊಂಡು ಕುಳಿತಿದ್ದ ಸಿದ್ದರಾಮಯ್ಯ.
ರಾಮ ಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧ ಇಲ್ಲ: ಸಿಎಂ ಸಿದ್ದರಾಮಯ್ಯ
ಈ ವೇಳೆ ನಾಡಗೀತೆ ಹಾಡುವಾಗ ಎಲ್ಲರೂ ಎದ್ದು ನಿಲ್ಲಬೇಕು ಎಂದರೂ ನಿಂತುಕೊಳ್ಳದ ಸಿಎಂ ಸಿದ್ದರಾಮಯ್ಯ. ಪಕ್ಕದಲ್ಲಿದ್ದ ಶಾಸಕ ದರ್ಶನ್, ದ್ರುವನಾರಾಯಣ್ ಆಯೋಜಕರಿಗೆ ಕಾಯುವಂತೆ ಕೈ ಸನ್ನೆ ಮಾಡಿದರು.ಕೊನೆಗೆ ಯತೀಂದ್ರ ಪೋನ್ ವಾಪಸ್ ಪಡೆದ ನಂತರ ನಾಡಗೀತೆಗೆಗಾಗಿ ಎದ್ದು ನಿಂತ ಸಿಎಂ ಸಿದ್ದರಾಮಯ್ಯ. ಈ ಘಟನೆ ವಿಡಿಯೋ ದಾಖಲಾಗಿದ್ದು ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಟೀಕಿಸಿದ್ದಾರೆ.
ಸಿಎಂ ನೋಡಲು ನೂಕುನುಗ್ಗಲು:
ನಂಜನಗೂಡು:ನಂಜನಗೂಡಿನ ಎಂ.ಜಿ. ರಸ್ತೆಯಲ್ಲಿರುವ ಶ್ರೀ ಕನಕದಾಸ ಸಾರ್ವಜನಿಕ ವಿದ್ಯಾಲಯದ ಕಟ್ಟಡದ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ. ಸಿಎಂ ಸಿದ್ದರಾಮಯ್ಯರನ್ನು ನೋಡಲು ಮುಗಿಬಿದ್ದ ಜನರು. ಈ ವೇಳೆ ತಳ್ಳಾಟ ನೂಕಾಟ ನೆಡಯಿತು.
ಗೃಹಲಕ್ಷ್ಮೀ ಯೋಜನೆ: ನಾಡದೇವತೆ ಚಾಮುಂಡೇಶ್ವರಿಗೂ ಪ್ರತಿತಿಂಗಳ ₹2000 ನೀಡಲು ಸರ್ಕಾರ ಅಸ್ತು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ