
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡು, ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂತೆ ದೆಹಲಿಯ ರೆಸಿಡೆಂಟ್ ಕಮಿಷನರ್ ಅವರಿಗೆ ಸೂಚನೆ ನೀಡಲಾಗಿದೆ.
ಪಹಲ್ಗಾಮ್ ಉಗ್ರರ ದಾಳಿ: ಕರ್ನಾಟಕ ಪ್ರವಾಸಿಗ ಬಲಿ, ರಕ್ತಸಿಕ್ತ ಚಿತ್ರಣ!
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಘೋರ ಭಯೋತ್ಪಾದಕ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಈ ಆಘಾತಕಾರಿ ಘಟನೆಯಲ್ಲಿ ಬಲಿಯಾದವರಲ್ಲಿ ಕನ್ನಡಿಗರೂ ಸೇರಿದ್ದಾರೆ. ವಿಷಯ ತಿಳಿದ ತಕ್ಷಣ, ನಾನು ತುರ್ತು ಸಭೆ ಕರೆದು ಮುಖ್ಯ ಕಾರ್ಯದರ್ಶಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದೆ. ದೆಹಲಿಯಲ್ಲಿ ನಿವಾಸ ಆಯುಕ್ತರೊಂದಿಗೂ ಮಾತನಾಡಿದ್ದೇನೆ.
ನನ್ನ ನಿರ್ದೇಶನಗಳನ್ನು ಅನುಸರಿಸಿ, ಹಿರಿಯ ಅಧಿಕಾರಿಗಳ ಮತ್ತು ಪೊಲೀಸ್ ಸಿಬ್ಬಂದಿಯ ಒಂದು ತಂಡವನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಕಳುಹಿಸಲಾಗಿದೆ. ಆಯುಕ್ತ ಚೇತನ್ ನೇತೃತ್ವದ ಕ್ರೀಡಾ ಇಲಾಖೆಯ ಸಾಹಸ ತಂಡವೂ ಕೂಡ ಪ್ರಯಾಣದಲ್ಲಿದೆ.
'ಯಾರನ್ನೂ ಸುಮ್ಮನೆ ಬಿಡೋದಿಲ್ಲ..' ಪಹಲ್ಗಾಮ್ ಟೆರರಿಸ್ಟ್‌ಗಳಿಗೆ ಪ್ರಧಾನಿ ಮೋದಿ ಎಚ್ಚರಿಕೆ!
ಎಲ್ಲಾ ಬೆಳವಣಿಗೆಗಳನ್ನು ನಾ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅಗತ್ಯವಿರುವ ಎಲ್ಲ ಬೆಂಬಲವನ್ನು ನೀಡಲಾಗುವುದು. ಭರವಸೆ ಇರಿಸಿ. ಕರ್ನಾಟಕ ಸರ್ಕಾರವು ಬಾಧಿತರೊಂದಿಗೆ ದೃಢವಾಗಿ ನಿಂತಿದೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.
25ಕ್ಕೂ ಹೆಚ್ಚು ಮಂದಿ ಬಲಿ: ಪಹಲ್ಗಾಮ್‌ನ ಬೈಸರನ್‌ನಲ್ಲಿ ಮಂಗಳವಾರ ನಡೆದ ಘೋರ ಭಯೋತ್ಪಾದಕ ದಾಳಿಯನ್ನು ಜಮ್ಮು ಮತ್ತು ಕಾಶ್ಮೀರ ರಾಷ್ಟ್ರೀಯತಾವಾದಿ ಪೀಪಲ್ಸ್ ಫ್ರಂಟ್ (ಜೆಕೆಎನ್‌ಪಿಎಫ್) ಬಲವಾಗಿ ಖಂಡಿಸಿದೆ. ಅಮಾಯಕ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಈ ದಾಳಿಯಲ್ಲಿ 25ಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ ಅನ್ನೋ ಮಾಹಿತಿ ಇದೆ. ಸರ್ಕಾರದ ಕಡೆಯಿಂದ ಈ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಬೇಕಿದೆ. ಪಹಲ್ಗಾಮ್‌ನ ಆಫ್-ದಿ-ರೋಡ್ ಹುಲ್ಲುಗಾವಲು ಬೈಸರನ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಸರನ್‌ನಲ್ಲಿ 2ರಿಂದ 3 ಉಗ್ರರು ಕಾಣಿಸಿಕೊಂಡು ಪ್ರವಾಸಿಗರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ ಎಂದು ನಮ್ಮ ವರದಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ