
ಚಿತ್ರದುರ್ಗ(ಜ.28)ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನಲ್ಲಿ ಸಂಬೋಧಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಶೋಷಿತರ ಜಾಗೃತಿ ಸಮಾವೇಶದಲ್ಲಿನ ಭಾಷಣದಲ್ಲಿ ಸಿದ್ದರಾಮಯ್ಯ ಬಿಜೆಪಿಯನ್ನು ಟೀಕಿಸುವ ಭರದಲ್ಲಿ ರಾಷ್ಟ್ರಪತಿಯನ್ನು ಏಕವಚನದಲ್ಲಿ ಉಲ್ಲೇಖಿಸಿದ್ದರು. ಆಕ್ರೋಶ, ವಿವಾದ ಜೋರಾಗುತ್ತಿದ್ದಂತೆ ಸಿದ್ದರಾಮಯ್ಯ ತಮ್ಮ ಮಾತಿಗೆ ವಿಷಾಷ ವ್ಯಕ್ತಪಡಿಸಿದ್ದಾರೆ. ಬಾಯಿತಪ್ಪಿನಿಂದ ಏಕವಚನದಲ್ಲಿ ಸಂಬೋಧಿಸಿದ್ದೇನೆ. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಈ ಸಮಾಜದಲ್ಲಿ ಶೋಷಣೆ ನಡೆಯುತ್ತಲೇ ಬಂದಿದೆ. ಜಾತಿ ವ್ಯವಸ್ಥೆ ಈ ಶೋಷಣೆಗೆ ಮುಖ್ಯ ಕಾರಣ. ಈಗಲೂ ಶೋಷಿತರ ಶೋಷಣೆ ನಡೆಯುತ್ತಿದೆ ಎಂದು ರಾಷ್ಟ್ರಪತಿ ದ್ರೌಪತಿ ಮುರ್ಮು ಉಲ್ಲೇಖ ಮಾಡಿದ್ದಾರೆ. ಬಿಜೆಪಿ ಸರ್ಕಾರ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ ನೀಡಿಲ್ಲ. ರಾಮ ಮಂದಿರ ಉದ್ಘಾಟನೆಗೂ ಆಹ್ವಾನ ನೀಡಿಲ್ಲ ಎಂದು ಭಾಷಣ ಮಾಡಿದ್ದಾರೆ. ಈ ವೇಳೆ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿದ್ದರು. ಇದರ ವಿರುದ್ಧ ರಾಜ್ಯ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇತ್ತ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿದ್ದರಾಮಯ್ಯ ವಜಾಗೆ ಆಗ್ರಹಿಸಿ್ದರು. ಈ ಬೆಳವಣಿಗೆ ಬೆನ್ನಲ್ಲೇ ಸಿದ್ದಾರಾಮಯ್ಯ ಟ್ವೀಟ್ ಮೂಲಕ ವಿಷಾಧ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರಪತಿಗಳನ್ನ ಏಕವಚನದಲ್ಲಿ ಸಂಬೋಧಿಸಿ ಅವಮಾನ; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರ ವಜಾಕ್ಕೆ ಎಚ್‌ಡಿಕೆ ಒತ್ತಾಯ
ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ ಬಿಜೆಪಿ ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು.ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಭೋದಿಸಿದೆ. ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡಾ ಏಕವಚನದಲ್ಲಿ ಸಂಭೋದಿಸುವುದು ರೂಢಿ.ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಕುರಿ ಕಾಯುವವನ ಮಗ ಸಿಎಂ ಆದ ಅಂತಾರೆ ; ನಾನು 5 ಗ್ಯಾರಂಟಿ ಘೋಷಿಸಿದ್ದು ತಪ್ಪೇ? : ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ ವಿಷಾಧ ವ್ಯಕ್ತಪಡಿಸಿದ ಬೆನ್ನಲ್ಲೇ ಬಿಜೆಪಿ ನಾಯಕರು ಮತ್ತೆ ಕಿಡಿ ಕಾರಿದ್ದಾರೆ. ಮಾತನಾಡುವಾಗ ಏಕಚವನದಲ್ಲಿ ಮಾತನಾಡಿ ಬಳಿಕ ಅದಕ್ಕೆ ಗ್ರಾಮೀಣ ಶೈಲಿ ಅನ್ನೋ ತೇಪೆ ಹಚ್ಚುವುದನ್ನು ಎಷ್ಟು ವರ್ಷ ಮಾಡುತ್ತೀರಿ ಎಂದು ಬಿಜೆಪಿ ನಾಯಕ ಸುನೀಲ್ ಕುಮಾರ್ ಪ್ರಶ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ