ಆ್ಯಸಿಡ್‌ ದಾಳಿ ಸಂತ್ರಸ್ತೆಗೆ ತಮ್ಮದೇ ಕಚೇರಿಯಲ್ಲಿ ನೌಕರಿ ಕೊಟ್ಟ ಸಿಎಂ ಸಿದ್ದರಾಮಯ್ಯ

Published : Jul 01, 2023, 02:00 AM IST
ಆ್ಯಸಿಡ್‌ ದಾಳಿ ಸಂತ್ರಸ್ತೆಗೆ ತಮ್ಮದೇ ಕಚೇರಿಯಲ್ಲಿ ನೌಕರಿ ಕೊಟ್ಟ ಸಿಎಂ ಸಿದ್ದರಾಮಯ್ಯ

ಸಾರಾಂಶ

ಕಳೆದ ವರ್ಷ ವಿಕೃತ ವ್ಯಕ್ತಿಯೊಬ್ಬನಿಂದ ಬೆಂಗಳೂರಿನಲ್ಲಿ ಆ್ಯಸಿಡ್‌ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸ್ನಾತಕೋತ್ತರ ಪದವೀಧರ ಯುವತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಬೆಂಗಳೂರು (ಜು.01): ಕಳೆದ ವರ್ಷ ವಿಕೃತ ವ್ಯಕ್ತಿಯೊಬ್ಬನಿಂದ ಬೆಂಗಳೂರಿನಲ್ಲಿ ಆ್ಯಸಿಡ್‌ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸ್ನಾತಕೋತ್ತರ ಪದವೀಧರ ಯುವತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಶುಕ್ರವಾರ ತಮ್ಮ ಅಧಿಕೃತ ಸರ್ಕಾರಿ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಸಿದ್ದರಾಮಯ್ಯ ಅವರು ಸಂತ್ರಸ್ತೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು.

2022ರ ಏಪ್ರಿಲ್‌ 28ರಂದು ಬೆಂಗಳೂರಿನ ಸುಂಕದಕಟ್ಟೆಯಲ್ಲಿ ಆ್ಯಸಿಡ್‌ ದಾಳಿಗೆ ತುತ್ತಾಗಿದ್ದ ಸಂತ್ರಸ್ತೆ ಎಂ.ಕಾಂ ಪದವೀಧರೆ ಆಗಿದ್ದಾರೆ. ತಂದೆ ಮತ್ತು ತಾಯಿಯ ಜತೆ ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು. ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಲ್ಲೂ ಉದ್ಯೋಗದ ಮನವಿ ಮಾಡಿದ್ದೆವು. ಅವರು ಭರವಸೆ ನೀಡಿದ್ದರು. ಆದರೆ ಉದ್ಯೋಗ ಮಾತ್ರ ಕೊಡಲಿಲ್ಲ ಎಂದು ಅಳಲು ತೋಡಿಕೊಂಡರು. ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿಗಳು ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೇಂದ್ರದಿಂದ ಅಕ್ಕಿ ಕೊಡದಿದ್ದರೂ 5 ಕೆಜಿ ಅಕ್ಕಿ, ರೂ.170 ಕೊಡುತ್ತೇವೆ: ಶಾಸಕ ಲಕ್ಷ್ಮಣ ಸವದಿ

ಎಂಎಡಿಬಿಗೆ ಅನುದಾನ ಹೆಚ್ಚಿಸಲು ಸಿಎಂ ಬಳಿ​ಗೆ ನಿಯೋ​ಗ: ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ ಜಿಲ್ಲೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಬಿಡುಗಡೆಗೊಳಿಸುತ್ತಿರುವ ಅನುದಾನವನ್ನು ಹೆಚ್ಚಿಸುವಂತೆ ಮಂಡಳಿಯ ಸರ್ವ ಸದಸ್ಯರ ನಿಯೋಗದೊಂದಿಗೆ ಜು.7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ನೂತ​ನ ಅಧ್ಯಕ್ಷ ಡಿ.ಸುಧಾಕರ್‌ ಹೇಳಿದರು.

ನಗರದ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿ, ಮಂಡಳಿಯು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಶಕ್ತವಾಗಿದ್ದು, ಮಂಡಳಿಯ ವತಿಯಿಂದ ಕೈಗೊಳ್ಳಲಾದ ಈವರೆಗಿನ ಕಾಮಗಾರಿಗಳು ತೃಪ್ತಿಕರವಾಗಿವೆ. ಈ ಮಂಡಳಿಯನ್ನು ಇನ್ನಷ್ಟುಕ್ರಿಯಾಶೀಲವಾಗಿ ಮಾಡುವಲ್ಲಿ ಪ್ರಾಮಾಣಿಕವಾಗಿ ಯತ್ನಿಸಲಾಗುವುದು ಎಂದರು. ಜು.7ರಂದು ರಾಜ್ಯ ಸರ್ಕಾರದ ಬಜೆಟ್‌ ಮಂಡನೆಯಾಗಲಿದ್ದು, ಬಜೆಟ್‌ ಮೊದಲೇ ಮಂಡಳಿಯ ಮೊದಲ ಸಭೆ ಇದಾಗಿದ್ದು, ಹೆಚ್ಚಿನ ಅನುದಾನಕ್ಕೆ ಶಾಸಕರು ಆಗ್ರಹಿಸಿದರು. 

ಜಾತಿಗೊಂದು ಜಯಂತಿ ಮಾಡಿ ತಪ್ಪು ಗ್ರಹಿಕೆ ಬೇರೂರುತ್ತಿದೆ: ಶಾಸಕ ಜಿ.ಟಿ.ದೇವೇಗೌಡ

ಇಂದಿನ ಸಭೆಯಲ್ಲಿ ಪ್ರತಿ ಶಾಸಕರಿಗೆ .3 ಕೋಟಿ ನೀಡಬೇಕೆಂಬ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಹಿಂದೆ .1 ಕೋಟಿ ನೀಡಲು ಸರ್ಕಾರ ತೀರ್ಮಾನಿಸಿತ್ತು. ಒಟ್ಟು .350 ಕೋಟಿ ಪ್ರಸ್ತಾವನೆಯನ್ನು ಕೂಡ ಹಿಂದಿನ ಎಂಎಡಿಬಿ ಸಭೆಯಲ್ಲಿ ಠರಾವು ಪಾಸ್‌ ಮಾಡಲಾಗಿತ್ತು. ಅದನ್ನೇ ಈ ಬಾರಿಯೂ ಕೂಡ ಸಭೆಯಲ್ಲಿ ಆಗ್ರಹಿಸಲಾಯಿತು. 44 ಶಾಸಕರು ಕಾಮಗಾರಿಯ ಪ್ರಸ್ತಾವನೆ ಸಲ್ಲಿಸಿರಲಿಲ್ಲ. ಈ ಬಾರಿ ಆಯ್ಕೆಯಾದ ಶಾಸಕರಿಗೆ ಪ್ರಸ್ತಾವನೆ ಸಲ್ಲಿಸಲು ವಿನಂತಿಸಲಾಯಿತು. 2023 -24ನೇ ಸಾಲಿಗೆ ಹಿಂದಿನ ಸರ್ಕಾರ ಒಟ್ಟು . 43 ಕೋಟಿ ಅನುದಾನವನ್ನು ಆಯವ್ಯಯದಲ್ಲಿ ನಿಗದಿ ಮಾಡಿದ್ದು, ಹೊಸ ಬಜೆಟ್‌ನಲ್ಲಿ ಮಂಡಳಿಗೆ ಅನುದಾನವನ್ನು ನಿರೀಕ್ಷಿಸಲಾಗಿದೆ ಎಂದು ಎಂಎಡಿಬಿ ಅಧ್ಯಕ್ಷ ಡಿ.ಸುಧಾಕರ್‌ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್