
ಬೆಂಗಳೂರು (ಆ.19): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡ) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್ ಕೋರ್ಟ್‌ನಿಂದ ಯಾವುದೇ ಆದೇಶಗಳನ್ನು ನೀಡುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಮುಡ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೀಡಲಾಗಿದ್ದ ಪ್ರಾಸಿಕ್ಯೂಷನ್ ನೋಟೀಸ್ ನೀಡಿದ್ದರು. ಆದರೆ, ಇದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ವಾದ ಮತ್ತು ಪ್ರತುವಾದಗಳನ್ನು ಆಲಿಸಿ ಅರ್ಜಿ ವಿಚಾರಣೆಯನ್ನು ಆ.29ಕ್ಕೆ ಮುಂದೂಡಿಕ ಮಾಡಲಾಯಿತು. ಆದರೆ, ಆ.29ರ ಒಳಗಾಗಿ ಸೆಷನ್ಸ್ ಕೋರ್ಟ್ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಯಾವುದೇ ಆದೇಶಗಳನ್ನು ಹೊರಡಿಸುವಂತಿಲ್ಲ ಎಂದು ಹೈಕೋರ್ಟ್ ನ್ಯಾಯಾಧೀಶರು ಮಧ್ಯಂತರ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
Muda Scam: ಒಂದಲ್ಲ 3 ದೂರು.. ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಮೂವರು ದೂರುದಾರರ ಹಿಸ್ಟರಿ ಏನು?
ನಾಳೆ ವಿಚಾರಣಾ ನ್ಯಾಯಾಲಯದಲ್ಲಿ ಆದೇಶ ನೀಡಿದರೆ ಹೈಕೋರ್ಟ್ ಪ್ರಕ್ರಿಯೆ ನಿಷ್ಪಲವಾಗಲಿದೆ. ಹೈಕೋರ್ಟ್ ಮುಂದಿನ ಆದೇಶ ನೀಡುವವರೆಗೂ ಸೆಷನ್ಸ್ ಕೋರ್ಟ್ ವಿಚಾರಣೆ ಮುಂದೂಡಬೇಕು. ಆಗಸ್ಟ್ 29ರ ವರೆಗೆ ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೂಚನೆ ನೀಡಲಾಗಿದೆ. ಅಂದರೆ, ಆಗಸ್ಟ್ 29ರವರೆಗೆ ಸಿಎಂ ಸಿದ್ದರಾಮಯ್ಯ ಸೇಫ್ ಆಗಿರುತ್ತಾರೆ. ಆ.29ರ ವರೆಗೆ ಯಾವುದೇ ವಿಚಾರಣೆ/ ಆದೇಶ ನೀಡದೇ ವಿಚಾರಣೆ ಮುಂದುವರೆಸಲು ಹೈಕೋರ್ಟ್ ಸೂಚನೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇದ್ದ ಸ್ನೇಹಮಯಿ ಕೃಷ್ಣ ಹಾಗೂ ಟಿ.ಜೆ.ಅಬ್ರಹಾಂ ಅವರ ಖಾಸಗಿ ದೂರುಗಳ ವಿಚಾರಣೆ ಮುಂದೂಡಲು ಹೈಕೋರ್ಟ್ ಸೂಚನೆ ನೀಡಿದೆ.
ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ರಾಜ್ಯಪಾಲರು ಯಾರೋ ದಾರಿಯಲ್ಲಿ ಹೋಗುವವರು ನೀಡಿದ ದೂರಿನ ಅನ್ವಯ ಪ್ರಾಸಿಕ್ಯೂಷನ್ ಕುರಿತಂತೆ ಸಿಎಂಗೆ ಷೋಕಾಸ್ ನೊಟೀಸ್ ಜಾರಿ ಮಾಡಿದ್ದಾರೆ. ಅವರಿಗೆ ಸಚಿವ ಸಂಪುಟದಿಂದ ಈ ಪ್ರಾಸಿಕ್ಯೂಷನ್ ಕೈ ಬಿಡುವಂತೆ ನಿರ್ಣಯ ಕೈಗೊಂಡು ನೂರಾರು ಪುಟಗಳ ಉತ್ತರವನ್ನು ಕೊಡಲಾಗಿತ್ತು. ಆದರೆ, ಕ್ಯಾಬಿನೆಟ್ ಸಲಹೆ ಪರಿಗಣಿಸದೇ ರಾಜ್ಯಪಾಲರು ಪ್ರಾಸಿಕ್ಯೂಷನ್ ಆದೇಶ ಮಾಡಿದ್ದಾರೆ. ನೂರು ಪುಟಗಳ ಕ್ಯಾಬಿನೆಟ್ ನಿರ್ಧಾರಕ್ಕೆ ರಾಜ್ಯಪಾಲರು ಎರಡು ಪುಟಗಳ ಉತ್ತರ ನೀಡಿದ್ದಾರೆ. ಯಾಕೆ ಪೂರ್ವಾನುಮತಿ ನೀಡಲಾಗಿದೆ ಎಂಬ ಬಗ್ಗೆ ಒಂದೇ ಒಂದು ಕಾರಣ ನೀಡಿಲ್ಲ. ಸರ್ಕಾರವನ್ನ ಅಸ್ಥಿರಗೊಳಿಸಲು ಇಂತಹ ಕ್ರಮಗೊಳ್ಳಲಾಗಿದೆ ಎಂದು ವಾದ ಮಂಡಿಸಿದರು.
ಸಾರ್ವಜನಿಕ ಸೇವಕರಾಗಿ ಸಿಎಂ ಯಾವುದೇ ಆದೇಶ ಮಾಡಿಲ್ಲ. ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಆದೇಶ ಮಾಡಿಲ್ಲ. ಹೊಸ ಬಿಎನ್ ಎಸ್ಎಸ್ ಕಾಯಿದೆಯನ್ನ ತಪ್ಪಾಗಿ ಅರ್ಥೈಸಲಾಗಿದೆ. ಅಪ್ಲೀಕೇಷನ್ ಆಫ್ ಮೈಂಡ್ ಬಳಕೆ ಮಾಡದೇ ರಾಜ್ಯಪಾಲರು ಆದೇಶ ಮಾಡಿದ್ದಾರೆ. ವಿವೇಚನಾರಹಿತವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ಮಾಡಿದ್ದಾರೆ. ಕ್ಯಾಬಿನೆಟ್ ಆದೇಶವನ್ನ ತಿರಸ್ಕರಿಸಿ ರಾಜ್ಯಪಾಲರು ಆದೇಶ ಮಾಡುವಂತಿಲ್ಲ. ಮಧ್ಯಪ್ರದೇಶ ಪೊಲೀಸ್ ಎಸ್ಟಾಬ್ಲಿಷ್ ಮೆಂಟ್ ಕೇಸನ್ನ ರಾಜ್ಯಪಾಲರು ಉಲ್ಲೇಖ ಮಾಡಿದ್ದಾರೆ ಎಂದು ಕೋರ್ಟ್‌ಗೆ ತಿಳಿಸಿದರು.
ಪಿಸಿ ಆ್ಯಕ್ಟ್ 17A ಅಡಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ. ಅಬ್ರಹಾಂ, ಪ್ರದೀಪ್ ಕುಮಾರ್ ಹಾಗೂ ಸ್ನೇಹಮಯಿ ಕೃಷ್ಣ ದೂರು ಆಧರಿಸಿ ಆದೇಶ ಮಾಡಲಾಗಿದೆ. ಷೋಕಾಸ್ ನೋಟಿಸ್ ನಲ್ಲಿ ಪ್ರದೀಪ್ ಕುಮಾರ್ ಹಾಗೂ ಸ್ನೇಹಮಯಿ ಕೃಷ್ಣ ಹೆಸರು ಉಲ್ಲೇಖಿಸಿಲ್ಲ. ಟಿ.ಜೆ.ಅಬ್ರಹಾಂ ದೂರಿಗೆ ಸಂಬಂಧಿಸಿದಂತೆ ಮಾತ್ರ ಷೋಕಾಸ್ ನೋಟಿಸ್ ನೀಡಲಾಗಿತ್ತು. ಅಬ್ರಹಾಂ ದೂರು ಆಧರಿಸು ದೂರು ನೀಡಿದ ದಿನವೇ ಷೋಕಾಸ್ ನೋಟಿಸ್ ನೀಡಲಾಗಿದೆ. 12 ಪ್ರಮುಖ ಪ್ರಕರಣಗಳ ಪ್ರಾಸಿಕ್ಯೂಷನ್ ಅರ್ಜಿಗಳು ಪೆಂಡಿಂಗ್ ಇದೆ. ಆ ಎಲ್ಲಾ ಕೇಸ್ ಗಳ ತನಿಖೆ ಮುಗಿದಿವೆ, ಅವುಗಳ ಬಗ್ಗೆ ಕ್ರಮಕೈಗೊಂಡಿಲ್ಲ. ಕ್ಯಾಬಿನೆಟ್ ಸಲಹೆ ಪಾಲಿಸಬೇಕಿಲ್ಲ ಎಂದು ಆದೇಶದಲ್ಲಿ ರಾಜ್ಯಪಾಲರು ಹೇಳಿದ್ದಾರೆ. ಈಗಾಗಲೇ ಹೈಪವರ್ಡ್ ಕಮಿಷನ್ ಅನ್ನ ರಾಜ್ಯ ಸರ್ಕಾರ ನೇಮಕ ಮಾಡಿದೆ. ಕ್ಯಾಬಿನೆಟ್ ನೀಡಿರುವ ಸಲಹೆ ತುಂಬಾ ಕಾನೂನಾತ್ಮಕವಾಗಿದೆ. ಎಲ್ಲಾ ಕಾನೂನು ಪಾಂಡಿತ್ಯ ಇರುವ ಉತ್ತರ ನೀಡಲಾಗಿದೆ. ಆದರೆ, ಸ್ವಾತಂತ್ರವಾಗಿ ನಿರ್ದರಿಸಿದ್ದೇನೆ ಎಂದು ಹೇಳುವ ರಾಜ್ಯಪಾಲರು ಒಂದೇ ಒಂದು ಕಾರಣ ನೀಡಿಲ್ಲ. ಈವರೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದೇಕೆ ಎಂದು ರಾಜ್ಯಪಾಲರು ಹೇಳಿಲ್ಲ ಎಂದು ವಕೀಲರಾದ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ