
ವಿಧಾನಸಭೆ (ಡಿ.17): ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಉತ್ತರ ಕರ್ನಾಟಕಕ್ಕೆ ₹15,000 ಕೋಟಿ ವಿಶೇಷ ಅನುದಾನ ನೀಡಿದ್ದು, ಎಲ್ಲ ಕ್ಷೇತ್ರಗಳ ಸಮಸ್ಯೆಗಳನ್ನು ಕಡಿಮೆ ಮಾಡಲು ಸಾಕಷ್ಟು ಕೊಡುಗೆ ನೀಡಿದೆ ಎಂದು ಕಾಂಗ್ರೆಸ್ ಸದಸ್ಯ ಅಜಯ್ ಧರಂಸಿಂಗ್ ಹೇಳಿದ್ದಾರೆ.
2012-13ರಲ್ಲಿ ಯುಪಿಎ ಸರ್ಕಾರ 371 ಜೆ ತಿದ್ದುಪಡಿ ಮಾಡಿದ್ದರಿಂದ ಈವರೆಗೆ ಈ ಭಾಗಕ್ಕೆ ₹25,000 ಕೋಟಿಗಳಷ್ಟು ಅನುದಾನ ಹರಿದುಬಂದಿದೆ. ಈ ಹಿಂದೆ 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಪ್ರಧಾನ ಮಂತ್ರಿ, ಎಲ್.ಕೆ ಅಡ್ವಾಣಿ ಅವರು ಉಪ ಪ್ರಧಾನಮಂತ್ರಿ ಆದಾಗಲೇ 371 ಜೆ ಪ್ರಸ್ತಾಪವನ್ನು ಎಸ್.ಎಂ.ಕೃಷ್ಣ ನೇತೃತ್ವದ ಸರ್ಕಾರ ಕಳುಹಿಸಿತ್ತು. ಆಗ ಬಿಜೆಪಿಯವರು ಇದನ್ನು ಮಾಡಲು ಸಾಧ್ಯವೇ ಇಲ್ಲ ಎಂದು ತಿರಸ್ಕರಿಸಿದ್ದರು.
ಆದರೆ, 2012-13ರಲ್ಲಿ ಪ್ರಧಾನಮಂತ್ರಿಯಾಗಿದ್ದ ದಿ.ಮನಮೋಹನ್‌ಸಿಂಗ್, ಕಾಂಗ್ರೆಸ್‌ನ ಸೋನಿಯಾಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್ ಅವರಿಂದ 371 ಜೆ ಬಂದಿತ್ತು. ಅದಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ವರ್ಷ ₹1,000 ಕೋಟಿ, 2ನೇ ವರ್ಷ ₹1,500 ಕೋಟಿ ಬಳಿಕ ₹3,000 ಕೋಟಿ, ಈಗ ₹15,000 ಕೋಟಿ ಬಿಡುಗಡೆ ಮಾಡಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ