ಹಂಪನಾ ಬದುಕು, ಬರಹ, ಸಾರ್ಥಕತೆ ಇಡೀ ಸಮಾಜಕ್ಕೆ ಮಾದರಿ: ಸಿಎಂ ಸಿದ್ದರಾಮಯ್ಯ

Published : Oct 12, 2025, 06:25 PM IST
Siddaramaiah

ಸಾರಾಂಶ

‘ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಹಂಪನಾ ಅವರ ಕೊಡುಗೆ ಅಪಾರ. ನಾನು ರಾಜಕೀಯ ಪ್ರವೇಶಿಸಿದಾಗಿನಿಂದಲೂ ನನಗೆ ಹಂಪನಾ ಜೊತೆ ಸಂಪರ್ಕವಿದೆ. ನಾನು ಅವರ ಕಟ್ಟಾ ಅಭಿಮಾನಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು (ಅ.12): ‘ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಹಂಪನಾ ಅವರ ಕೊಡುಗೆ ಅಪಾರ. ನಾನು ರಾಜಕೀಯ ಪ್ರವೇಶಿಸಿದಾಗಿನಿಂದಲೂ ನನಗೆ ಹಂಪನಾ ಜೊತೆ ಸಂಪರ್ಕವಿದೆ. ನಾನು ಅವರ ಕಟ್ಟಾ ಅಭಿಮಾನಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವೀರಲೋಕ ಪ್ರಕಾಶನವು ಗಾಂಧಿ ಸ್ಮಾರಕ ಭವನದ ಸಹಯೋಗದಲ್ಲಿ ಕುಮಾರಪಾರ್ಕ್‌ ರಸ್ತೆಯ ಗಾಂಧಿ ಭವನದಲ್ಲಿ ಆಯೋಜಿಸಿದ್ದ ‘ಹಂಪನಾ-90’ ಸಾಹಿತ್ಯ ಅವಲೋಕನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಂಪ ನಾಗರಾಜಯ್ಯ ಅವರು ಒಳ್ಳೆಯ ವಾಗ್ಮಿಗಳು. ಉತ್ತಮ ಭಾಷಣಕಾರರೂ ಹೌದು. ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗಿ, ಬೆಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಉತ್ತಮ ಆಡಳಿತವನ್ನೂ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಬದಲಾವಣೆ ಬಯಸುವ ಸಾಹಿತಿ: ಹಂಪನಾ ಅವರು ಕೇವಲ ಸಾಹಿತ್ಯ ರಚನೆಗಾಗಿ ಸಾಹಿತಿಯಾದವರಲ್ಲ. ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿಯಾಗಿದ್ದಾರೆ. ಹಂಪನಾ ಅವರು ಸಮಾಜಮುಖಿ ಆಗುವ ಮೂಲಕ ತಮ್ಮ ಬದುಕು ಸಾರ್ಥಕಗೊಳಿಸಿಕೊಂಡಿದ್ದಾರೆ.‌ ಇವರು ಕನ್ನಡಿಗರ ಹೆಮ್ಮೆಯ ನಾಗರಾಜಯ್ಯ. ಇವರ ಸಾಹಿತ್ಯ ಮತ್ತು ಬದುಕಿಗೆ ನಾನು ಸಾಕ್ಷಿ ಆಗಿರುವುದು ನನ್ನ ಜೀವನದ ಸೌಭಾಗ್ಯ ಎಂದು ಬಣ್ಣಿಸಿದರು. ಹಂಪನಾ ಅವರ ಬದುಕು, ಬರಹ ಹಾಗೂ ಸಾರ್ಥಕತೆ ಇಡೀ ಸಮಾಜಕ್ಕೆ ಮಾರ್ಗದರ್ಶನವಾಗಿದೆ. ಭಾಷಾಶಾಸ್ತ್ರ, ಸಂಶೋಧನೆ, ಮಕ್ಕಳ ಸಾಹಿತ್ಯ, ವಿಮರ್ಶೆ ಸೇರಿ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಬೆರಗು ಮೂಡಿಸುವ ಕೆಲಸ ಮಾಡಿದ್ದಾರೆ. ಕಮಲಾ ಮತ್ತು ಹಂಪನಾ ಅವರು ಅದ್ಭುತ ದಂಪತಿ. ಇಬ್ಬರೂ ಸಾಹಿತ್ಯ ಕೃಷಿಯಲ್ಲಿ ಸಾಧನೆ ಮಾಡಿದವರು. ಇಬ್ಬರೂ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಪ್ರಶಂಸಿಸಿದರು.

ಹೇಗೆ ಜೀವಿಸುತ್ತೇವೆಂಬುದು ಮುಖ್ಯ

ಪ್ರತಿಯೊಬ್ಬರೂ ಒಂದು ಬಾರಿ ತಾವು ನಡೆದು ಬಂದ ಹಾದಿಯನ್ನು ಒಮ್ಮೆ ಹಿಂದಿರುಗಿ ನೋಡಬೇಕು. ಸೂಕ್ತ ಉತ್ತರ ಸಿಕ್ಕಿದರೆ ಬದುಕು ಸಾರ್ಥಕವಾಗುತ್ತದೆ. ಇಲ್ಲದಿದ್ದರೆ ಬದುಕು ನಿರರ್ಥಕವಾಗುತ್ತದೆ. ಎಷ್ಟು ವರ್ಷ ಜೀವಿಸುತ್ತೇವೆ ಎಂಬುದು ಮುಖ್ಯವಲ್ಲ. ಹೇಗೆ ಬದುಕುತ್ತೇವೆ ಎಂಬುದು ಮುಖ್ಯ ಎಂದು ಅಭಿಪ್ರಾಯಪಟ್ಟರು. ನಂತರ ನಡೆದ ‘ಹಂಪನಾ ಸಾಹಿತ್ಯ ಅವಲೋಕನ’ದಲ್ಲಿ ಸಾಹಿತಿಗಳಾದ ಪ್ರತಿಭಾ ನಂದಕುಮಾರ್‌, ಎಂ.ಎಸ್‌.ಆಶಾದೇವಿ, ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ.ಕೃಷ್ಣ, ವೀರಲೋಕ ಪ್ರಕಾಶನದ ವೀರಕಪುತ್ರ ಶ್ರೀನಿವಾಸ್‌ ಮತ್ತಿತರರು ಪಾಲ್ಗೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!