ಸರ್ಕಾರಿ ವಕೀಲರ ನೇಮಕಾತಿ ಅಕ್ರಮವನ್ನು ಇಲಾಖಾ ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ

By Sathish Kumar KH  |  First Published Jun 6, 2023, 5:52 PM IST

ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ ಕೇಳಿಬಂದಿದ್ದು, ಇಲಾಖಾ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.


ಬೆಂಗಳೂರು (ಜೂ.06): ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ ಕೇಳಿಬಂದಿದ್ದು, ಕೂಡಲೇ ಈ ಬಗ್ಗೆ ಇಲಾಖಾ ಹಂತದ ತನಿಖೆಯನ್ನು ಕೈಗೊಂಡು 10 ದಿನಗಳಲ್ಲಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. 

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರಗಳನ್ನು ಹಾಗೂ ನೇಮಕಾತಿಗಳಲ್ಲಿ ನಡೆದ ಅಕ್ರಮಗಳನ್ನು ತನಿಖೆಗೆ ಒಳಪಡಿಸುವುದಾಗಿ ಹೇಳಿದ್ದ ಕಾಂಗ್ರೆಸ್‌ ಸರ್ಕಾರ ಈಗ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ ಕೇಳಿಬಂದಿದ್ದು, ಇಲಾಖಾ ತನಿಖೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಟಿಪ್ಪಣಿ ಹೊರಡಿಸ್ದಾರೆ. ಸರ್ಕಾರಿ ಅಭಿಯೋಜಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ ಕೇಳಿಬಂದಿತ್ತು. 23 -07-22 ಮತ್ತು 24-07-22 ರಂದು ನಡೆದ ಸಹಾಯಕ ಸರ್ಕಾರಿ ಅಭಿಯೋಜಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಮರುಪರೀಕ್ಷೆ ಮಾಡುವಂತೆ ಸಾಕಷ್ಟು ವಕೀಲ ಆಕಾಂಕ್ಷಿಗಳು ಮನವಿ ಮಾಡಿದ್ದರು. ಜೊತೆಗೆ, ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಮಾಡಲಾಗಿದೆ ಎಂದು ದೂರುಗಳನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಲಾಖಾ ತನಿಖೆಗೆ ವಹಿದಿದ್ದಾರೆ ಎಂದು ಕೇಳಿಬಂದಿದೆ. 

Tap to resize

Latest Videos

undefined

ಕೆ.ಎಸ್. ಈಶ್ವರಪ್ಪಗೆ ಜೂನ್ 30 ನಿರ್ಣಯಕ ದಿನ: ಸಂತೋಷ್‌ ಆತ್ಮಹತ್ಯೆ ಬಿ ರಿಪೋರ್ಟ್‌ ರದ್ದಾಗುವ ಭೀತಿ

10 ದಿನದೊಳಗೆ ವರದಿ ಸಲ್ಲಿಸಿ: ಇನ್ನು ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ವರದಿ ಕೇಳಿದ್ದಾರೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಅಕ್ರಮ ಎಸಗಿದ ತಪ್ಪಿತಸ್ಥರ ವಿವರದೊಂದಿಗೆ 10 ದಿನಗಳೊಳಗೆ ವರದಿ ಕೊಡುವಂತೆ ತಿಳಿಸಿದ್ದಾರೆ. 

ರಾಜ್ಯದಲ್ಲಿ ಈಗ ಸರ್ಕಾರಿ ಸಹಾಯಕ ಅಭಿಯೋಜನಕರು ಮತ್ತು ಸಹಾಯಕ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಈಗ ತನಿಖೆಗೆ ವಹಿಸಲಾಗಿದೆ. ಆದರೆ, ಇದಕ್ಕೂ ಮೊದಲೇ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣವು ಕೋರ್ಟ್‌ ವಿಚಾಋಣೆಯಲ್ಲಿದೆ. ಈವರೆಗೆ ಹಲವು ಅಧಿಕಾರಿಗಳು, ಕಿಂಗ್‌ಪಿನ್‌ಗಳು ಜೈಲು ಪಾಲಾಗಿದ್ದಾರೆ. ಇನ್ನು ಶಿಕ್ಷಕರ ನೇಮಕಾತಿಯಲ್ಲಿಯೂ ಅಕ್ರಮ ನಡೆದಿದ್ದು, ತನಿಖೆ ನಡೆಸುವಂತೆ ಕೆಲವು ಅಭ್ಯರ್ಥಿಗಳು ಒತ್ತಾಯಿಸಿದ್ದರು. ಈಗ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಬಿಜೆಪಿ ಸರ್ಕಾರದಲ್ಲಿ ನಡೆದ ಎಲ್ಲ ಅಕ್ರಮಗಳ ತನಿಖೆ ನಡೆಸುವುದು ಖಚಿತವೆಂದು ಕಂಡುಬರುತ್ತಿದೆ. 

ಯಡಿಯೂರಪ್ಪ ಮನೆಯಲ್ಲಿಯೇ ಪಿಎಸ್‌ಐ ಹಗರಣ ನಡೆದಿದೆ ಎಂದಿದ್ದ ಸಿದ್ದರಾಮಯ್ಯ:  ಪೊಲೀಸ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಹಗರಣ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆಯಲ್ಲೇ ನಡೆದಿದೆ ಎಂದು ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ  ಸಿದ್ದರಾಮಯ್ಯ(Siddaramaiah) ಗಂಭೀರ ಆರೋಪ ಮಾಡಿದ್ದರು. 2500 ಕೋಟಿ ಕೊಟ್ಟರೆ ಬಿಜೆಪಿಯಲ್ಲಿ ಮುಖ್ಯಮಂತ್ರಿ ಆಗಬಹುದು ಎಂದು ಸ್ವಪಕ್ಷದ ಶಾಸಕರೇ ಹೇಳಿದ್ದಾರೆ. ಹೀಗಾಗಿ ಇವರ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಮತ್ತೇನಿದೆ ಎಂದು ಇದೇ ವೇಳೆ ಪ್ರಶ್ನಿಸಿದರು. ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಕಾಂಗ್ರೆಸ್‌ ಪ್ರಜಾಧ್ವನಿ (Congress Prajadhwaniyatre) ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆಪರೇಶನ್‌ ಕಮಲಕ್ಕೆ ಎಲ್ಲಿಂದ ಹಣ ಬಂತು? ಲೂಟಿ ಹೊಡೆದ ಲಂಚದ ಹಣದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಉತ್ತಮ ಆಡಳಿತ ಕೊಡಲು ಸಾಧ್ಯವಿಲ್ಲ ಎಂದು ಆರೋಪಿಸಿದ್ದರು.

click me!