ಎತ್ತಿನಹೊಳೆ ಯೋಜನೆ ಲೋಕಾರ್ಪಣೆ: ಗೌರಿಹಬ್ಬದಂದೇ ಹರಿದ ಗಂಗೆ, 2ನೇ ಹಂತ ನಾನೇ ಉದ್ಘಾಟಿಸುವೆ ಎಂದ ಸಿದ್ದು..!

ಎತ್ತಿನಹೊಳೆ ಎರಡನೇ ಹಂತ 2027ಕ್ಕೆ 7 ಜಿಲ್ಲೆಗಳ ಲಕ್ಷಾಂತರ ಮನೆಗಳಿಗೆ ತಲುಪಿಸುತ್ತೇವೆ. ಅದಕ್ಕೆ ಇನ್ನೂ 1 ಸಾವಿರ ಕೋಟಿ ರು. ಅಗತ್ಯವಿದ್ದು, ಕೊಡಲು ಸರ್ಕಾರ ಸಿದ್ಧವಿದೆ. ಪ್ರಸ್ತುತ ಮೊದಲ ಹಂತ ಉದ್ಘಾಟನೆಯಾಗಿದೆ. ಎರಡನೇ ಹಂತ 2027 ಕ್ಕೆ ಮುಕ್ತಾಯಗೊಂಡು ಇಡೀ ಯೋಜನೆ ಯಶಸ್ವಿ ಜಾರಿ ಆಗುತ್ತದೆ. ಲಕ್ಷಾಂತರ ಫಲಾನುಭವಿಗಳಿಗೆ ಯೋಜನೆಯ ಅನುಕೂಲ ತಲುಪಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ 
 


ಹಾಸನ(ಸೆ.07):  ಎತ್ತಿನಹೊಳೆ ಯೋಜನೆಯಡಿ ವಾರ್ಷಿಕ 19 ಟಿಎಂಸಿ ನೀರು ದೊರೆಯುತ್ತಿದೆ. ಆದರೆ, ಈ ಯೋಜನೆಗೆ 14.5 ಟಿಎಂಸಿ ನೀರಿನ ಅವಶ್ಯಕತೆ ಇರುವುದರಿಂದ ಕೊರತೆ ಬೀಳುವ ನೀರನ್ನು ತಗ್ಗು ಪ್ರದೇಶದಲ್ಲಿ ಇರುವ ಇತರ ಹಳ್ಳಿಗಳಿಂದ ಸಂಗ್ರಹಿಸಿ ಪೂರೈಸಲು ಕ್ರಮ ಕೈಗೊಳ್ಳಲಾಗು ವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಶುಕ್ರವಾರ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್‌ಹೌಸ್‌ ಮತ್ತು ಹೆಬ್ಬಹಳ್ಳಿಯ 4ನೇ ವಿತರಣಾ ತೊಟ್ಟಿ ಬಳಿ ಚಾಲನೆ ನೀಡಿ ಮಾತನಾಡಿದರು. 
ಈ ಯೋಜನೆಯಡಿ 7 ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲು 14 ಟಿಎಂಸಿ ಹಾಗೂ ಆ ಜಿಲ್ಲೆಗಳ 527 ಕೆರೆಗಳನ್ನು ತುಂಬಿಸಲು 10.5 ಟಿಎಂಸಿ ನೀರಿನ ಅವಶ್ಯಕತೆ ಇದೆ. ಅಂದರೆ ಒಟ್ಟು 24.5 ಟಿಎಂಸಿ ನೀರಿನ ಅಗತ್ಯ ಬೀಳುತ್ತಿದೆ. ಆದರೆ, ಕಳೆದ ಹತ್ತು ವರ್ಷಗಳ ತಾಂತ್ರಿಕ ವರದಿ ಪ್ರಕಾರ ಎತ್ತಿನಹೊಳೆಯಲ್ಲಿ ಸರಾಸರಿ 19.5 ಟಿಎಂಸಿ ನೀರು ಲಭ್ಯವಾಗುತ್ತದೆ. ಹೀಗಾಗಿ ಕೊರತೆ ಬೀಳುವ ನೀರನ್ನು ತಗ್ಗಿನ ಹಳಗಳಿಂದ ಸಂಗ್ರಹಿಸಿ ಪೂರೈಸುವ ಚಿಂತನೆಯಿದ್ದು, ಈ ಹಿನ್ನೆಲೆಯಲ್ಲಿ ಸರ್ವೆ ಕಾರ್ಯ ಆರಂಭ ಮಾಡಲಾಗಿದೆ ಎಂದರು. 

Latest Videos

ಎತ್ತಿನಹೊಳೆ ಯೋಜನೆ: ಹಾಸನ, ಚಿಕ್ಕಮಗಳೂರಿಗೆ ನೀರು; ಕೋಲಾರ, ಚಿಕ್ಕಬಳ್ಳಾಪುರಕ್ಕೆ ಖಾಲಿ ಚೊಂಬು?

ಎತ್ತಿನಹೊಳೆ ಎರಡನೇ ಹಂತ 2027ಕ್ಕೆ 7 ಜಿಲ್ಲೆಗಳ ಲಕ್ಷಾಂತರ ಮನೆಗಳಿಗೆ ತಲುಪಿಸುತ್ತೇವೆ. ಅದಕ್ಕೆ ಇನ್ನೂ 1 ಸಾವಿರ ಕೋಟಿ ರು. ಅಗತ್ಯವಿದ್ದು, ಕೊಡಲು ಸರ್ಕಾರ ಸಿದ್ಧವಿದೆ. ಪ್ರಸ್ತುತ ಮೊದಲ ಹಂತ ಉದ್ಘಾಟನೆಯಾಗಿದೆ. ಎರಡನೇ ಹಂತ 2027 ಕ್ಕೆ ಮುಕ್ತಾಯಗೊಂಡು ಇಡೀ ಯೋಜನೆ ಯಶಸ್ವಿ ಜಾರಿ ಆಗುತ್ತದೆ. ಲಕ್ಷಾಂತರ ಫಲಾನುಭವಿಗಳಿಗೆ ಯೋಜನೆಯ ಅನುಕೂಲ ತಲುಪಲಿದೆ.

2ನೇ ಹಂತ ನಾನೇ ಉದ್ಘಾಟಿಸುವೆ 

ಎತ್ತಿನಹೊಳೆಗೆ ನನ್ನ ಕಾಲದಲ್ಲೇ ಭೂಮಿ ಮೊದಲ ಹಂತದ ಯೋಜನೆಯನ್ನು ನಾನೇ ಉದ್ಘಾಟಿಸಿದ್ದೇನೆ. ಎರಡನೇ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿ ಯೋಜನೆಯನ್ನು ಪೂರ್ಣ ಮಾಡಿ ಕುಡಿಯುವ ನೀರನ್ನು ಕೊಟ್ಟ ಕೊಡುತ್ತೇವೆ. ಈ ನೀರಿನಿಂದ ಕೆರೆಗಳನ್ನು ತುಂಬಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಹಲವು ಎಡರು ತೊಡರು ಎದುರಿಸಿ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಯಶಸ್ತಿಗೊಳಿಸಲಾಗಿದೆ. ಈ ಹಿಂದೆ ಎತ್ತಿನಹೊಳೆ ಯೋಜನೆ ಬಗ್ಗೆ ಟೀಕೆ ಮಾಡಿದವರು ಈಗ ಎಲ್ಲಿದ್ದಾರೆ? ಟೀಕೆಗಳು ಸಾಯುತ್ತವೆ. ಆದರೆ, ಕೆಲಸಗಳು ಮಾತ್ರ ಉಳಿಯುತ್ತವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ತಿಳಿಸಿದ್ದಾರೆ. 

click me!