Latest Videos

ರೈತರ ಆತ್ಮಹತ್ಯೆಗೆ ಕಾರಣ ಪತ್ತೆಹಚ್ಚಲು ಸಿಎಂ ಸಿದ್ದರಾಮಯ್ಯ ಸೂಚನೆ

By Kannadaprabha NewsFirst Published May 24, 2024, 7:32 AM IST
Highlights

ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಮುಂದುವರೆದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಿರುವ ಜಿಲ್ಲೆಗಳಲ್ಲಿ ಇದಕ್ಕೆ ಕಾರಣ ಹಾಗೂ ಪರಿಹಾರ ಏನು ಎಂದು ಅಧ್ಯಯನ ನಡೆಸಲು ಸೂಚಿಸಿದರು.

ಬೆಂಗಳೂರು (ಮೇ.24): ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಮುಂದುವರೆದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಿರುವ ಜಿಲ್ಲೆಗಳಲ್ಲಿ ಇದಕ್ಕೆ ಕಾರಣ ಹಾಗೂ ಪರಿಹಾರ ಏನು ಎಂದು ಅಧ್ಯಯನ ನಡೆಸಲು ಸೂಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ, ರೈತರ ಆತ್ಮಹತ್ಯೆ ಪ್ರಕರಣಗಳ ಕುರಿತು ಎಲ್ಲಾ ಜಿಲ್ಲೆಗಳಿಂದ ಮಾಹಿತಿ ಪಡೆದುಕೊಂಡರು.

ರಾಜ್ಯದಲ್ಲಿ 2023-24 ರಲ್ಲಿ 842 ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ಪರಿಹಾರಕ್ಕೆ ಕೋರಿ ಬಂದಿರುವ ಅರ್ಜಿಗಳ ಪೈಕಿ 90 ಮನವಿಗಳು ತಿರಸ್ಕೃತವಾಗಿದೆ. 132 ಡಿಬಿಟಿಗೆ ಬಾಕಿಯಾಗಿವೆ. 62 ಉಪವಿಭಾಗಾಧಿಕಾರಿಗಳ ಹಂತದಲ್ಲಿ ಬಾಕಿ ಇವೆ. ಉಳಿದ ರೈತರ ಕುಟುಂಬಗಳಿಗೆ ಪರಿಹಾರ ವಿತರಿಸಲಾಗಿದೆ ಎಂದು ಅಧಿಕಾರಿಗಳು ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದರು.

ಕ್ರಿಕೆಟ್ ವಿಚಾರಕ್ಕೆ ಹುಡುಗರ ಮಧ್ಯೆ ಜಗಳ; ದೊಡ್ಡವರ ಮಧ್ಯೆ ಮಾರಮಾರಿ ವಿಡಿಯೋ ವೈರಲ್!

ಈ ವೇಳೆ ಸಿದ್ದರಾಮಯ್ಯ, ಇದರಲ್ಲಿ ಬಹಳ ಪ್ರಕರಣಗಳು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯ ನಿರೀಕ್ಷೆಯಲ್ಲಿರುವುದರಿಂದ ವಿಳಂಬವಾಗಿದೆ. ಈ ಪ್ರಕರಣಗಳಲ್ಲಿಯೂ ತ್ವರಿತವಾಗಿ ಪರಿಹಾರ ವಿತರಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಮುಂದುವರೆದು ರೈತರ ಆತ್ಮಹತ್ಯೆಗೆ ಕಾರಣ ಏನು ಎಂಬುದನ್ನು ತಿಳಿದುಕೊಳ್ಳಬೇಕೆಂದು ಸೂಚಿಸಿದರು. ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಿರುವ ಜಿಲ್ಲೆಗಳಲ್ಲಿ ಇದಕ್ಕೆ ಕಾರಣ ಹಾಗೂ ಪರಿಹಾರ ಏನು ಎಂದು ಅಧ್ಯಯನ ನಡೆಸಲು ತಿಳಿಸಿದರು.

ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ: ಪಂಚ ಗ್ಯಾರಂಟಿಗಳು 4.60 ಕೋಟಿ ಜನರನ್ನು ತಲುಪಿವೆ; ರಣದೀಪ್ ಸುರ್ಜೆವಾಲ

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಕೃಷ್ಣಬೈರೇಗೌಡ, ಎಚ್.ಕೆ. ಪಾಟೀಲ್‌, ಕೆ.ಎಚ್.‌ ಮುನಿಯಪ್ಪ, ಚಲುವರಾಯಸ್ವಾಮಿ, ಬೈರತಿ ಸುರೇಶ್‌, ಶಿವರಾಜ್‌ ತಂಗಡಗಿ, ಪ್ರಿಯಾಂಕ್‌ ಖರ್ಗೆ, ರಹೀಂ ಖಾನ್‌, ಶಿವಾನಂದ ಪಾಟೀಲ, ಎಸ್.‌ಎಸ್.‌ಮಲ್ಲಿಕಾರ್ಜುನ್‌, ಸಂತೋಷ್‌ ಲಾಡ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌ ಸೇರಿ ಹಲವರು ಹಾಜರಿದ್ದರು.

click me!