ಮುಡಾ ಕೇಸಲ್ಲಿ ಸಿಎಂಗೆ ಸಂಕಷ್ಟ: ಪ್ರಾಸಿಕ್ಯೂಷನ್‌ ಭೀತಿಯಲ್ಲಿ ಸಿದ್ದು..!

Published : Aug 01, 2024, 08:00 AM ISTUpdated : Aug 01, 2024, 10:20 AM IST
ಮುಡಾ ಕೇಸಲ್ಲಿ ಸಿಎಂಗೆ ಸಂಕಷ್ಟ: ಪ್ರಾಸಿಕ್ಯೂಷನ್‌ ಭೀತಿಯಲ್ಲಿ ಸಿದ್ದು..!

ಸಾರಾಂಶ

ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವು ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಅಗತ್ಯವಿಲ್ಲ ಎಂಬ ನಿರ್ಣಯ ತೆಗೆದು ಕೊಂಡರೂ ರಾಜ್ಯಪಾಲರು ಯಾವ ನಡೆ ಅನುಸರಿಸಲಿದ್ದಾರೆ ಎಂಬ ಬಗ್ಗೆ ಕುತೂಹಲ ಮೂಡಿದೆ. ಈಗಾಗಲೇ ರಾಜ್ಯಪಾಲರು ಕಾನೂನು ತಜ್ಞರ ಅಭಿಪ್ರಾಯ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು(ಆ.01):  ಮುಡಾ ಹಗರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ರಾಜ್ಯಪಾಲರಿಗೆ ನೀಡಿದ ದೂರು ಮತ್ತು ಇದರ ಬೆನ್ನಲ್ಲೇ ಈ ಬಗ್ಗೆ ಸರ್ಕಾರದಿಂದ ವರದಿ ಕೇಳಿದ ರಾಜ್ಯಪಾಲರ ಕ್ರಮದಿ೦ದಾಗಿ ರಾಜ್ಯ ರಾಜಕಾರಣದಲ್ಲಿ ತಲ್ಲಣ ನಿರ್ಮಾಣವಾಗಿದ್ದು, ಇದೀಗ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್‌ ಭೀತಿ ಎದುರಾಗಿದೆ.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರಿಗೆ ವರದಿ ನೀಡುವ ಬಗ್ಗೆ ಚರ್ಚೆ ನಡೆಯಲಿದ್ದು, ಬಹುತೇಕ ಪ್ರಾಸಿಕ್ಯೂಷನ್ ಮನವಿಯನ್ನು ತಿರಸ್ಕರಿಸುವಂತೆ ಶಿಫಾರಸು ಮಾಡುವ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.ಪಾಲರು ತಮ್ಮ ವಿವೇಚನೆ ಆಧಾರದ ಮೇಲೆ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದು ಕುತೂಹಲಕರವಾಗಿದ್ದು, ರಾಜ್ಯ ರಾಜಕಾರಣದಲ್ಲಿ ವಿಪ್ಲವ ಉಂಟಾಗುವ ಸಂಭವನೀಯತೆಯೂ ನಿರ್ಮಾಣವಾಗಿದೆ.

ಬಿಜೆಪಿ-ಜೆಡಿಎಸ್‌ ಕ್ಷಮಾಯಾತ್ರೆ ಮಾಡಲಿ: ಸಲೀಂ ಅಹಮದ್‌

ಮುಡಾದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು 55.80 ಕೋಟಿ ರು. ಅಕ್ರಮ ಲಾಭ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಜುಲೈ 18ರಂದು ಮೈಸೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳ ಸಹಿತ ರಾಜ್ಯ ಪಾಲರಿಗೆ ದೂರು ಸಲ್ಲಿಸಿರುವ ಟಿ.ಜೆ.ಅಬ್ರಹಾಂ, ಭಾರತೀಯ ನ್ಯಾಯ ಸಂಹಿತೆ- 2023ರ ಸೆಕ್ಷನ್ 218 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ- 1988ರ ಸೆಕ್ಷನ್ 17 ಎ ಮತ್ತು 19ರ ಅಡಿಯಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ವಿಚಾರಣೆಗೆ ಅನುಮತಿ ನೀಡುವಂತೆ ಕೋರಿದ್ದಾರೆ. ಈ ಬಗ್ಗೆ ರಾಜ್ಯಪಾಲರು ವರದಿ ಕೇಳಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದು ರಾಜ್ಯಪಾಲರನ್ನು ಭೇಟಿ ಮಾಡಿ ಸ್ಪಷ್ಟನೆ ಸ್ಪಷ್ಟನೆ ನೀಡಿದ್ದಾರೆ. ನೀಡಿ ಇನ್ನು ಅಧಿಕೃತವಾಗಿ ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡುವ ಕುರಿತು ಸರ್ಕಾರದ ಅಭಿಪ್ರಾಯವನ್ನು ಕೇಳಿರುವುದರಿಂದ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ತಿರಸ್ಕರಿಸಿ ಸಂಪುಟ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವು ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಅಗತ್ಯವಿಲ್ಲ ಎಂಬ ನಿರ್ಣಯ ತೆಗೆದು ಕೊಂಡರೂ ರಾಜ್ಯಪಾಲರು ಯಾವ ನಡೆ ಅನುಸರಿಸಲಿದ್ದಾರೆ ಎಂಬ ಬಗ್ಗೆ ಕುತೂಹಲ ಮೂಡಿದೆ. ಈಗಾಗಲೇ ರಾಜ್ಯಪಾಲರು ಕಾನೂನು ತಜ್ಞರ ಅಭಿಪ್ರಾಯ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಅಬ್ರಹಾಂ ನೀಡಿದ ದೂರಿನಲ್ಲೇನಿದೆ?: ಟೆ.ಜಿ.ಅಬ್ರಹಾಂ ಅವರು ರಾಜ್ಯಪಾಲರಿಗೆ ಸಲ್ಲಿಸಿರುವ ದೂರಿನಲ್ಲಿ, 1998-99ರಿಂದ 2000-2001 ಅವಧಿಯವರೆಗೆ ಮೈಸೂರಿನ ಕೆಸರೆ ಗ್ರಾಮದ ಸರ್ವೆ ನಂ.464ರ 3.16 ಎಕರೆ ಜಮೀನು ಮುಡಾ ಹೆಸರಿನಲ್ಲಿ ಪಹಣಿ ಇದ್ದರೂ 1998ರ ಮೇ 18ರಂದು ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಆಗಿದ್ದಾಗ ಮುಡಾ ಹೆಸರಿನಲ್ಲಿದ್ದ ಜಮೀನನ್ನು ನಿಂಗ ಎಂಬ ಮೃತ ವ್ಯಕ್ತಿಯ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಭೂಮಿ ಮುಡಾ ಹೆಸರಿನಲ್ಲಿದ್ದ ಕಾರಣ ಮುಡಾ ದವರು ದೇವನೂರು ಬಡಾವಣೆ ಮೂರನೇ ಹಂತದ ಹೆಸರಿನಲ್ಲಿ ಬಡಾವಣೆನಿರ್ಮಾಣಮಾಡಿ2003-2004ರಲ್ಲೇನಿವೇಶನಗಳನ್ನು ಮಾಡಿ ಹಂಚಿಕೆ ಮಾಡಿದ್ದರು.

2004ರ ಆ.25ರಂದು ಬಡಾವಣೆ ಅಭಿವೃದ್ಧಿಪಡಿಸಿ ನಿವೇಶನ ಹಂಚಿಕೆ ಮಾಡಿದ್ದ ಜಮೀನನ್ನು ಬಳಿಕ ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ 5.95 ಲಕ್ಷರು.ಗಳಿಗೆ ಖರೀದಿಸಿ ರುವುದಾಗಿ ಅಕ್ರಮ ಕ್ರಯಪತ್ರ ಸೃಷ್ಟಿಸಲಾಗಿದೆ. ಬಳಿಕ ಸಿದ್ದರಾ ಮಯ್ಯ ಅವರಪತ್ನಿಗೆ ದಾನ ಕ್ರಯ ಮಾಡಿದ್ದು, ಅವರು 2014ರಲ್ಲಿ ಮುಡಾ ತಮ್ಮ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಮಾರಿರು ವುದರಿಂದ ಪರಿಹಾರ ನೀಡಬೇಕೆಂದು ಕೋರುತ್ತಾರೆ. 2021ರಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಸದಸ್ಯರಿರುವ ಮುಡಾ ಸಭೆಯಲ್ಲಿ ಅವರಿಗೆ ನಿಯಮಬಾಹಿರವಾಗಿ 8.24 ಕೋಟಿ ರು. ಮಾರ್ಗಸೂಚಿ ದರ ಹಾಗೂ 55.80 ಕೋಟಿ ರು. ಮಾರುಕಟ್ಟೆ ಮೌಲ್ಯದ 14 ಪರ್ಯಾಯ ನಿವೇಶನಗಳನ್ನು ನೀಡಲಾಗಿದೆ.
ಈ ಬಗ್ಗೆ ಎಲ್ಲಾ ದಾಖಲೆ ಸಲ್ಲಿಸಿದ್ದು, ಅಪರಾಧಿಕ ಒಳಸಂಚು, ವಂಚನೆ, ಭ್ರಷ್ಟಾಚಾರ, ಅಪರಾಧಿಕದುರ್ನಡತೆ, ಅಪ್ರಾಮಾಣಿಕತೆ, ರಾಜ್ಯದ ಹಣಕಾಸು ದುರ್ಬಳಕೆ ಅಡಿಗಳಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು ಎಂದು ಕೋರಿದ್ದಾರೆ.

ಮುಡಾ ಹಗರಣಕ್ಕೆ ಸಚಿವ ಬೈರತಿ ಸುರೇಶ್ ನೇರ ಕಾರಣ, ಜೈಲಿಗೆ ಕಳಿಸಿ: ಎಚ್.ವಿಶ್ವನಾಥ್

ಸಚಿವರೊಂದಿಗೆ ಇಂದು ಸಿಎಂ ಉಪಾಹಾರ ಸಭೆ

ಪ್ರಾಸಿಕ್ಯೂಷನ್ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬೆಳಗ್ಗೆ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಉಪಾಹಾರ ಕೂಟ ಏರ್ಪಡಿಸಿದ್ದಾರೆ. ಈ ವೇಳೆ ಪ್ರಾಸಿಕ್ಯೂಷನ್ ಬಗ್ಗೆ ವರದಿ ಕೇಳಿರುವ ರಾಜ್ಯಪಾಲರ ನಡೆ ಬಗ್ಗೆ ಯಾವ ಕ್ರಮ ಅನುಸರಿಸಬಹುದು ಎಂಬ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಬಿಎಸ್‌ವೈಗೆ ಸಂಕಷ್ಟ ಒಡ್ಡಿದ್ದ ಪ್ರಾಸಿಕ್ಯೂಷನ್

ಈ ಹಿಂದೆ ಯಡಿ ಯ೦ ರ ಪ ವಿರುದ್ಧದ ಡಿನೋ ಟಿಫಿಕೇಶನ್ ಪ್ರಕ ರಣದ ಸಂಬಂಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡ ವಕೀಲರಾದ ಸಿರಾಜಿನ್ ಬೇಕೆಂದು ಬಾಷಾ, ಬಾಲರಾಜ್ ಅಂದಿನ ಗೌರ್ನರ್ ಭಾರದ್ವಾಜ್ ಅವರಿಗೆ 2010ರಲ್ಲಿ ಮನವಿ ಸಲ್ಲಿಸಿದ್ದರು. ಅದನ್ನು ತಿರಸ್ಕರಿಸಲು ಸಂಪುಟ ನಿರ್ಧರಿಸಿದ್ದರೂ, ಭಾರದ್ವಾಜ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಹೈಕೋರ್ಟ್ ಪ್ರಾಸಿಕ್ಯೂಷನ್ ಅನುಮತಿ ರದ್ದುಪಡಿಸಿತ್ತಾದರೂ ಹಲವು ಬೆಳವಣಿಗೆ ನಡೆದು ಬಿಎಸ್‌ವೈ ಮುಖ್ಯ ಮಂತ್ರಿ ಸ್ಥಾನ ಕಳೆದುಕೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ