ಈ ಬಾರಿ 3.7 ಲಕ್ಷ ಕೋಟಿ ಗಾತ್ರದ ಬಜೆಟ್‌ ಮಂಡಿಸಲಿರುವ ಸಿಎಂ ಸಿದ್ದು?

By Kannadaprabha News  |  First Published Jan 23, 2024, 6:17 AM IST

ಕಳೆದ ವರ್ಷಕ್ಕೆ ಹೋಲಿಸಿದರೆ ಬಜೆಟ್‌ ಗಾತ್ರ ಶೇ.13 ರಷ್ಟು ಹೆಚ್ಚಳ ಆಗುವ ಸಾಧ್ಯತೆಯಿದೆ. ಕಳೆದ 3.27 ಲಕ್ಷ ಕೋಟಿ ರು.ಗಳಿಂದ 3.7 ಲಕ್ಷ ಕೋಟಿ ರು.ಗಳಿಗೆ ಬಜೆಟ್‌ ಗಾತ್ರ ಹೆಚ್ಚಾಗುವ ಸಾಧ್ಯತೆ ಇದೆ. 


ಬೆಂಗಳೂರು(ಜ.23):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.16ರಂದು 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಲು ಸಿದ್ಧತೆ ಆರಂಭಿಸಿದ್ದು, ಸೋಮವಾರ ಹನ್ನೆರಡು ಇಲಾಖೆಗಳ ಅಧಿಕಾರಿಗಳ ಜತೆ ಬಜೆಟ್‌ ಪೂರ್ವಭಾವಿ ಸಿದ್ಧತೆ ಸಭೆ ನಡೆಸಿದರು. 

ಕಳೆದ ವರ್ಷಕ್ಕೆ ಹೋಲಿಸಿದರೆ ಬಜೆಟ್‌ ಗಾತ್ರ ಶೇ.13 ರಷ್ಟು ಹೆಚ್ಚಳ ಆಗುವ ಸಾಧ್ಯತೆಯಿದೆ. ಕಳೆದ 3.27 ಲಕ್ಷ ಕೋಟಿ ರು.ಗಳಿಂದ 3.7 ಲಕ್ಷ ಕೋಟಿ ರು.ಗಳಿಗೆ ಬಜೆಟ್‌ ಗಾತ್ರ ಹೆಚ್ಚಾಗುವ ಅಂದಾಜಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಖಲೆಯ 15ನೇ ಬಾರಿಗೆ ಬಜೆಟ್ ಮಂಡನೆ ಮಾಡಲು ಸಿದ್ಧತೆ ನಡೆಸಿರುವ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಬೆಳಗ್ಗೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಯುವಜನ ಸೇವೆ ಮತ್ತು ಕ್ರೀಡೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಧ್ಯಾಹ್ನ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೌಶಲ್ಯಾಭಿವೃದ್ಧಿ ಸೇರಿ ಹಲವು ಇಲಾಖೆ ಅಧಿಕಾರಿಗಳ ಜೊತೆ ಸಭೆಯಲ್ಲಿ ಸಿಎಂ ಪಾಲ್ಗೊಂಡರು.

Tap to resize

Latest Videos

undefined

ಪ್ರಧಾನಿ ಮೋದಿಯನ್ನು ಚರ್ಚೆಗೆ ಕರೆದು ಸಿದ್ದು ಉದ್ಧಟತನ: ಎಚ್‌ಡಿಕೆ ಆಕ್ರೋಶ

ವೈದ್ಯಕೀಯ ಶಿಕ್ಷಣ, ಕೃಷಿ, ಶಾಲಾ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಜೆಟ್ ಸಿದ್ಧತೆ ಬಗ್ಗೆ ಚರ್ಚಿಸಿದರು. ಇದಕ್ಕೂ ಮೊದಲು ಶನಿವಾರ ಹತ್ತಕ್ಕೂ ಹೆಚ್ಚು ಇಲಾಖೆಗಳ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ಸಭೆ ನಡೆಸಿದ್ದರು.

click me!