
ಕೊಪ್ಪಳ (ನ.21) : ತಾಲೂಕಿನ ಬಸಾಪುರದಲ್ಲಿ ವಿಮಾನ ನಿಲ್ದಾಣದ ಲಾಂಜ್‌ನಲ್ಲಿ ಸೋಮವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಕೆಲ ಸಹೋದ್ಯೋಗಿಗಳು ಸುಮಾರು ಅರ್ಧ ಗಂಟೆ ಕಾಲ ಚರ್ಚೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ವಿಜಯಪುರದಲ್ಲಿ ಸಹಕಾರ ಸಪ್ತಾಪದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಿಶೇಷ ವಿಮಾನ ಮೂಲಕ ಮುಂಜಾನೆ ಆಗಮಿಸಿದ್ದ ಸಿದ್ದರಾಮಯ್ಯ ಸಂಜೆ ಮರಳಿ ಬೆಂಗಳೂರಿಗೆ ತೆರಳುವ ವೇಳೆ ಈ ಚರ್ಚೆ ನಡೆಯಿತು.
ವಿಮಾನ ನಿಲ್ದಾಣದ ವಿಐಪಿ ಲಾಂಜ್‌ನಲ್ಲಿ ಸಿದ್ದರಾಮಯ್ಯ, ಸಚಿವರಾದ ಎಂ.ಬಿ.ಪಾಟೀಲ್, ಕೆ.ಎನ್.ರಾಜಣ್ಣ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಗಂಭೀರ ಚರ್ಚೆ ನಡೆಸಿದರು.
ಕಾಂಗ್ರೆಸ್ ಮುಖಂಡನಿಂದ ಅತ್ಯಾಚಾರ: ಒಬ್ಬಳನ್ನು ಒಬ್ಬನೇ ವ್ಯಕ್ತಿ ರೇಪ್ ಮಾಡೋಕೆ ಅಸಾಧ್ಯವೆಂದ ಮಾಜಿ ಶಾಸಕ ಬಯ್ಯಾಪುರ
ಈ ಕುರಿತು ಸಿದ್ದರಾಮಯ್ಯ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಆದರೆ, ಎಂ.ಬಿ. ಪಾಟೀಲರನ್ನು ಪ್ರಶ್ನಿಸಿದಾಗ ಯಾವುದೇ ಸಭೆ, ಚರ್ಚೆ ಆಗಿಲ್ಲ. ಸುಮ್ಮನೆ ಕೂತಿದ್ದೆವು ಎಂದು ಉತ್ತರಿಸಿದರು.
ದೆಹಲಿಯಿಂದ ಕಾಲ್ ಬಂದಿತ್ತು ಎಂಬ ವಿಚಾರವೂ ತೇಲಿ ಬಂತು, ಈ ಬಗ್ಗೆ ಪಾಟೀಲರ ಬಳಿ ಪ್ರಶ್ನೆ ಎತ್ತಿದಾಗ, ನಿಮಗೇನಾದರೂ ಹೇಳಿದ್ರಾ? ಯಾವುದೇ ಕಾಲ್ ಇಲ್ಲ, ಏನಿಲ್ಲ ಎನ್ನುತ್ತ ಮುಂದೆ ಸಾಗಿದರು.
ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಗೆದ್ದಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಿಡಿಗೇಡಿಗಳು!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ