
ಬೆಂಗಳೂರು (ನ.22) ಕರ್ನಾಟಕ ರಾಜಕಾರಣ ರಂಗೇರಿದೆ. ಮುಖ್ಯಮಂತ್ರಿ ಬದಲಾವಣೆ, ಸಂಪುಟ ಪುನರ್ ರಚನೆ ಸೇರಿದಂತೆ ಹಲವು ವಿಚಾರಗಳು ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಬೆಳವಣಿಗೆ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಹಾಗೂ ಬೆಂಬಲಿಗ ಶಾಸಕರು ಹೈಕಮಾಂಡ್ ಬೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದೀಗ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಸದಾಶಿವನಗರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನೆಗೆ ಆಗಮಿಸಿದ್ದಾರೆ. ಖರ್ಗೆ ಜೊತೆ ಮಹತ್ವದ ಮಾತುಕತೆ ನಡೆಸುತ್ತಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಮಹತ್ವದ ಚರ್ಚೆಗೆ ಮುಖ್ಯಮಂತ್ರಿಗಳ ಜೊತೆ ಬೆಂಬಲಿಗ ಶಾಸಕರು ಆಗಮಿಸ್ತಾರೆ ಅನ್ನೋ ಮಾಹಿತಿ ಇತ್ತು. ಇತ್ತ ಸಿದ್ದರಾಮಯ್ಯ ನಿವಾಸದಲ್ಲಿ ಸಚಿವ ಜಮೀರ್ ಅಹಮ್ಮದ್, ಈಶ್ವರ ಖಂಡೆ ಸೇರಿದಂತೆ ಕೆಲ ಪ್ರಮುಖ ನಾಯಕರು ಜಮಾಯಿಸಿದ್ದರು. ಆದರೆ ಖರ್ಗೆ ಭೇಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಆಗಮಿಸಿದ್ದಾರೆ. ಇವರ ಜೊತೆ ಯಾವುದೇ ಶಾಸಕರು ಆಗಮಿಸಿಲ್ಲ.
ಅರಮನೆ ಮೈದಾನದಲ್ಲಿ ನಡೆದ ಸಚಿವ ಡಿ ಸುಧಾಕರ್ ಪುತ್ರನ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ, ಬಳಿಕ ನೇರವಾಗಿ ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಆಗಮಿಸುವ ಹಿನ್ನಲೆಯಲ್ಲಿ ಭಾರಿ ಭಿಗಿ ಭದ್ರತೆ ನಿಯೋಜಿಸಲಾಗಿದೆ. ರಸ್ತೆಯ ಎರಡು ಕಡೆ ಬ್ಯಾರಿಕೇಡ್ ಅಳವಡಿಸಲಾಗಿದೆ. ಮಲ್ಲಿಕಾರ್ಜುನ್ ಖರ್ಗೆ ನಿವಾಸದ ರಸ್ತೆ ಬಂದ್ ಮಾಡಲಾಗಿದೆ.ಎಐಸಿಸಿ ಅಧ್ಯಕ್ಷರ ಮನೆಯ ನೂರು ಮೀಟರ್ ಅಂತರದಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ.
ಇತ್ತ ಅಧಿಕಾರ ಹಸ್ತಾಂತರ ಚರ್ಚೆಗಳ ನಡುವೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುವ ವೇಳೆ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಮುಖ್ಯಮಂತ್ರಿಗಳು ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗುತ್ತಿದ್ದಾರೆ. ಡಿಕೆ ಶಿವಕುಮಾರ್ ಭೇಟಿಯಾಗುತ್ತಿಲ್ಲವೇ ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಇಲ್ಲಿಂದ 100 ಮೀಟರ್ ದೂರದಲ್ಲಿದ್ದಾರೆ. ಯಾವಾಗ ಬೇಕಾದರೂ ಭೇಟಿಯಾಗಬಹುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ