
ಬೆಳಗಾವಿ (ಅ.13): ಒಂದೆಡೆ ಮುಡಾ ಹಗರಣ ತನಿಖೆ, ಇನ್ನೊಂದೆಡೆ ಕೈ ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ಸಭೆ ನಡೆದಿರುವ ಬೆನ್ನಲ್ಲೇ ಎಲ್ಲ ಸಂಕಷ್ಟಗಳಿಂದ ಪಾರು ಮಾಡುವಂತೆ ಸಿಎಂ ಸಿದ್ದರಾಮಯ್ಯ ಬೆಳಗಾವಿಯ ಪ್ರಸಿದ್ಧ ಸವದತ್ತಿ ಯಲ್ಲಮ್ಮ ದೇವಿ ಮೊರೆ ಹೋಗಿದ್ದಾರೆ.
ವಿವಿಧ ಕಾಮಗಾರಿಗಳ ಲೋಕಾರ್ಪಣೆ ಹಿನ್ನೆಲೆ ಇಂದು ಬೆಳಗಾವಿಯ ಸವದತ್ತಿಗೆ ಭೇಟಿ ನೀಡಿದರು. ನಿನ್ನೆ ದಸರಾ ಹಬ್ಬದ ಪ್ರಯುಕ್ತ ಮೈಸೂರಿಗೆ ತೆರಳಿದ್ದರು. ಸಂಜೆ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಅಲ್ಲಿಂದ ನೇರವಾಗಿವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿಗಳು. ಅಲ್ಲಿಂದ ರಸ್ತೆ ಮಾರ್ಗವಾಗಿ ಸವದತ್ತಿಗೆ ತಲುಪಿದರು. ಈ ವೇಳೆ ಯಲ್ಲಮ್ಮ ದೇವಸ್ಥಾನಕ್ಕೆ ತೆರಳಿ ಪತ್ನಿ ಪಾರ್ವತಿ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮುಡಾ ಹಗರಣದ ಕೇಂದ್ರಬಿಂದುವಾಗಿರುವ ಸಿಎಂ ಪತ್ನಿ ಪಾರ್ವತಿ. ಯಾವುದೇ ಕ್ಷಣದಲ್ಲೂ ಸಿಎಂ ಪತ್ನಿ ಪಾರ್ವತಿಗೆ ಲೋಕಾಯುಕ್ತ ನೋಟಿಸ್ ಕೊಡುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಹಿನ್ನೆಲೆ ಸಂಕಷ್ಟದಿಂದ ಪತ್ನಿಯನ್ನು ಪಾರು ಮಾಡುವಂತೆ ಶಕ್ತಿದೇವತೆ ಸವದತ್ತಿ ಯಲ್ಲಮ್ಮ ದೇವಿಯ ಮೊರೆ ಹೋಗಿರುವ ಮುಖ್ಯಮಂತ್ರಿ.
ಭೂ ಹಗರಣದ ಸೈಟ್ ರಿಟರ್ನ್ಸ್ ಸರ್ಕಾರ: ಸಿದ್ದು ಬೆನ್ನಲ್ಲೇ ಖರ್ಗೆಯಿಂದಲೂ 5 ಎಕರೆ ಸೈಟ್ ವಾಪಸ್!
ಮುಡಾ ಹಗರಣ ವಿರುದ್ಧ ಇ.ಡಿ ಯಲ್ಲಿ ದೂರು ದಾಖಲಾದ ಬೆನ್ನಲ್ಲೇ ಮುಡಾಗೆ ಪತ್ರ ಬರೆದು 14 ಸೈಟ್ ಮರಳಿಸಿದ್ದ ಪಾರ್ವತಿ ಸಿದ್ದರಾಮಯ್ಯನವರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ