ನೈತಿಕ ಪೊಲೀಸ್‌ಗಿರಿ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ: ಸಿಎಂ

Published : Sep 09, 2023, 08:39 AM IST
ನೈತಿಕ ಪೊಲೀಸ್‌ಗಿರಿ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ: ಸಿಎಂ

ಸಾರಾಂಶ

ನೈತಿಕ ಪೊಲೀಸ್‌ಗಿರಿ ನೆಪದಲ್ಲಿ ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ಬೆಂಗಳೂರು (ಸೆ.9):  ನೈತಿಕ ಪೊಲೀಸ್‌ಗಿರಿ ನೆಪದಲ್ಲಿ ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ಶಿವಾಜಿನಗರದ ಸೇಂಟ್‌ ಮೇರಿ ಬೆಸಿಲಿಕಾ ಚಚ್‌(St. Mary's Basilica Church, Shivajinagar)ರ್‍ನಲ್ಲಿ ಆಯೋಜಿಸಿದ್ದ ತಾಯಿ ಮೇರಿ ಜಯಂತ್ಯೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವ ಧರ್ಮವೂ ಮನುಷ್ಯರನ್ನು ದ್ವೇಷ ಮಾಡಿ ಎಂದು ಹೇಳುವುದಿಲ್ಲ. ಆದರೆ ಕೆಲವು ಕಪಟಿಗಳು ಧರ್ಮದ ಹೆಸರಿನಲ್ಲಿ ಮನುಷ್ಯರು, ಸಮಾಜವನ್ನು ವಿಭಜಿಸುವ ಕೆಲಸವನ್ನು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಇಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ. ನೈತಿಕ ಪೊಲೀಸ್‌ಗಿರಿ ನೆಪದಲ್ಲಿ ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

ಭಾರತವೇ ಒಂದು ಭಾವೈಕ್ಯ ಕೇಂದ್ರ. ಇಲ್ಲಿ ಜಾತಿ-ಧರ್ಮದ ಹೆಸರಿನಲ್ಲಿ ಮನುಷ್ಯ ದ್ವೇಷಕ್ಕೆ ಜಾಗ ಇಲ್ಲ. ಕೆಲವರು ಮನುಷ್ಯ ದ್ವೇಷವನ್ನೇ ಸಂಸ್ಕೃತಿಯನ್ನಾಗಿ ಆಚರಿಸಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ವಾತಾವರಣ ಹರಡಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಭಾರತದ ಭಾವೈಕ್ಯತಾ ಪರಂಪರೆಯನ್ನು ಕಾಪಾಡಲು ಬದ್ಧವಾಗಿದೆ ಎಂದು ತಿಳಿಸಿದರು.

ಭಾವೈಕ್ಯತಾ ಕೇಂದ್ರ

ಸೇಂಟ್‌ ಮೇರಿಯಮ್ಮನವರ ಬೆಸಿಲಿಕಾ ಚಚ್‌ರ್‍ ದೊಡ್ಡ ಭಾವೈಕ್ಯತಾ ಕೇಂದ್ರವಾಗಿದೆ. ಬೆಸಿಲಿಕಾ ಪ್ರಾರ್ಥನಾ ಮಂದಿರಕ್ಕೆ ಎಲ್ಲಾ ಜಾತಿ, ಧರ್ಮದವರೂ ಬರುತ್ತಾರೆ. ಹೀಗಾಗಿ ಇದೊಂದು ಭಾವೈಕ್ಯತಾ ಕೇಂದ್ರವಾಗಿ ರೂಪುಗೊಂಡಿದೆ. ಹೀಗಾಗಿ ನಾನು ಈ ಜಯಂತ್ಯೋತ್ಸವಕ್ಕೆ ಮತ್ತು ಹಬ್ಬಕ್ಕೆ ಪ್ರತಿ ವರ್ಷ ತಪ್ಪದೆ ಹಾಜರಾಗುತ್ತೇನೆ. ಇದು ನನಗೆ ಬಹಳ ಖುಷಿಯ ಸಂಗತಿಯಾಗಿದೆ. ಕ್ರೈಸ್ತ ಸಮುದಾಯವು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅಪಾರ ಪ್ರಗತಿ ಸಾಧಿಸಿ ನಾಡಿಗೆ ಸೇವೆ ಸಲ್ಲಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಿವಾಜಿನಗರ ಮೆಟ್ರೋ ರೈಲು ನಿಲ್ದಾಣಕ್ಕೆ ಸೇಂಟ್‌ ಮೇರೀಸ್‌ ನಿಲ್ದಾಣ ಎಂದು ನಾಮಕರಣ ಮಾಡಬೇಕು ಎಂಬುದು ಸೇರಿ ಸಮುದಾಯದ ಮುಖಂಡರ ಮೂರು ಬೇಡಿಕೆಗಳ ಬಗ್ಗೆ ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅಂತರ್ಜಾತಿ ವಿವಾಹದಿಂದ ಅಸಮಾನತೆ, ಜಾತಿ ವ್ಯವಸ್ಥೆ ತೊಡೆದು ಹಾಕಲು ಸಾಧ್ಯ: ಸಿಎಂ

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಶಾಸಕ ರಿಜ್ವಾನ್‌ ಹರ್ಷದ್‌, ಆಚ್‌ರ್‍ ಬಿಷಪ್‌ ಡಾ.ಪೀಟರ್‌ ಮಚಾದೋ ಮತ್ತಿತರ ಧರ್ಮಗುರುಗಳು ಉಪಸ್ಥಿತರಿದ್ದರು.

ಕ್ರೈಸ್ತ ಅಭಿವೃದ್ಧಿ ನಿಗಮ ಶೀಘ್ರ ಸ್ಥಾಪನೆ

ಕ್ರೈಸ್ತರ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪಿಸುವುದಾಗಿ ನಾವು ಬಜೆಟ್‌ನಲ್ಲೇ ಘೋಷಿಸಿದ್ದೇವೆ. ಇದಕ್ಕಾಗಿ ನೂರು ಕೋಟಿ ರುಪಾಯಿ ಮೀಸಲಿಟ್ಟು ಆದಷ್ಟುಬೇಗ ನಿಗಮ ಸ್ಥಾಪಿಸಿ ಅದಕ್ಕೆ ಅರ್ಹ ಅಧ್ಯಕ್ಷರನ್ನು ನೇಮಿಸಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

20000 ರೈತರ ಜತೆ ಸೇರಿ ಡಿ. 9ಕ್ಕೆ ಸುವರ್ಣಸೌಧಕ್ಕೆ ಮುತ್ತಿಗೆ : ಬಿವೈವಿ
ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ