ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಶಂಭುಲಿಂಗ ಚಿಕಿತ್ಸೆಗೆ ಸಿಎಂ ಆರ್ಥಿಕ ನೆರವು

Kannadaprabha News   | Kannada Prabha
Published : Mar 31, 2026, 07:33 AM IST
CM Siddaramaiah Provides Personal Medical Aid to Newspaper Distributors’ President Shambhulinga

ಸಾರಾಂಶ

ರಾಜ್ಯ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಕೆ. ಶಂಭುಲಿಂಗ ಅವರು ಜಿ.ವಿ.ಸಿಂಡ್ರೋಮ್ ಎಂಬ ಅಪರೂಪದ ಕಾಯಿಲೆಯಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರ ತುರ್ತು ಚಿಕಿತ್ಸೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಯಕ್ತಿಕವಾಗಿ ₹5 ಲಕ್ಷ ನೆರವು ನೀಡಿದ್ದಾರೆ. 

ಬೆಂಗಳೂರು (ಮಾ.31): ರಾಜ್ಯ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಕೆ. ಶಂಭುಲಿಂಗ ಅವರ ತುರ್ತು ಚಿಕಿತ್ಸೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವಿನ ಹಸ್ತ ಚಾಚಿದ್ದು, ವೈಯಕ್ತಿಕವಾಗಿ ₹5 ಲಕ್ಷ ನೆರವು ನೀಡಿದ್ದಾರೆ.

ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ತೀವ್ರ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿದ್ದಾರೆ. ಈಗಾಗಲೇ ₹16 ಲಕ್ಷಕ್ಕೂ ಹೆಚ್ಚು ವೆಚ್ಚವಾಗಿದ್ದು, ಇನ್ನೂ ₹20 ಲಕ್ಷ ಅಗತ್ಯವಿದೆ. ಈ ಸಂಕಷ್ಟದ ಹೊತ್ತಿನಲ್ಲಿ ಚಿಕಿತ್ಸಾ ವೆಚ್ಚಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಯಕ್ತಿಕವಾಗಿ ₹5 ಲಕ್ಷ ನೆರವು ನೀಡಿದ್ದು, ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಆಸ್ಪತ್ರೆಗೆ ತಲುಪಿಸಿದ್ದಾರೆ.

ನೆರವು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಲ್ಲ ರೀತಿಯ ಸಹಕಾರ ನೀಡಿದ ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಧನ್ಯವಾದ ತಿಳಿಸಿದ್ದಾರೆ.

ಜಿ.ವಿ.ಸಿಂಡ್ರೋಮ್ ಎಂಬ ಅಪರೂಪದ ಕಾಯಿಲೆ

ಕಳೆದ 12 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಭುಲಿಂಗ ಅವರು ಕೈ ಕಾಲುಗಳಲ್ಲಿ ಸ್ವಾಧೀನ ಕಳೆದುಕೊಂಡಿದ್ದಾರೆ. ಚಿಕಿತ್ಸೆಯ ವೆಚ್ಚವೂ ದುಬಾರಿಯಾಗಿದೆ. ಅವರಿಗೆ ಇಂಟ್ರಾವೆನಸ್ ಇಮ್ಯುನೊಗ್ಲಾಬ್ಯುಲಿನ್ (ಐವಿಐಜಿ) ಚಿಕಿತ್ಸೆ ನೀಡಲಾಗುತ್ತಿದ್ದು, ದಿನವೊಂದಕ್ಕೆ 1.53 ಲಕ್ಷ ರು. ವೆಚ್ಚವಾಗುತ್ತಿದೆ. ಕಳೆದ 12 ದಿನಗಳಲ್ಲಿ ಈ ಚಿಕಿತ್ಸೆಗೆ ಸುಮಾರು 15.50 ಲಕ್ಷ ರು. ಖರ್ಚಾಗಿದೆ.

ಆರೋಗ್ಯ ಸ್ಥಿತಿ ಗಂಭೀರ

ಶಂಭುಲಿಂಗ ಅವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದೆ. ಇನ್ನೂ 2-3 ದಿನಗಳಲ್ಲಿ ಫಿಸಿಯೋಥೆರಪಿಗಾಗಿ ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಬೇಕಿದೆ. ಇದಕ್ಕೆ ಒಂದು ತಿಂಗಳಿಗೆ ಸುಮಾರು 5 ಲಕ್ಷ ರು.ಗಿಂತ ಹೆಚ್ಚು ವೆಚ್ಚವಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಶಂಭುಲಿಂಗ ಅವರ ಕುಟುಂಬದ ಆರ್ಥಿಕ ಸ್ಥಿತಿ ತುಂಬಾ ದುರ್ಬಲವಾಗಿರುವ ಕಾರಣ ಆರ್ಥಿಕ ನೆರವನ್ನು ಕುಟುಂಬದವರು ನಿರೀಕ್ಷಿಸುತ್ತಿದ್ದಾರೆ ಎಂದು ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಪ್ರಶಾಂತ್ ಕುಮಾರ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ನೆರವಾಗಲು ಬಯಸುವವರು 99863 27778 ಅಥವಾ 98444 04563 ಸಂಪರ್ಕಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹಣಕಾಸು ವ್ಯವಹಾರ, ಹಿರಿಯ ನಾಗರಿಕನಿಗೆ ದುಬಾರಿ ಬಡ್ಡಿ ವಿಧಿಸಿದವನ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚನೆ | ಏನಿದು ಪ್ರಕರಣ?
Karnataka News Live: ಪೂಜೆ ಮಾಡಿ ಹೊಸ್ತಿಲು ಮೇಲೆ ಇಟ್ಟಿದ್ದ ಹೂ 6 ತಿಂಗಳ ಕಂದಮ್ಮನ ಉಸಿರಾಟ ನಿಲ್ಲಿಸ್ತು! ತಾಯಂದಿರೇ ಈ ತಪ್ಪು ಮಾಡ್ಬೇಡಿ!