ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪ್ರತಿಮೆ ಪ್ರತಿಷ್ಠೆಗೆ ನಮ್ಮದೇನೂ ವಿರೋಧವಿಲ್ಲ. ಆದರೆ ಬಿಜೆಪಿ ಅದರಲ್ಲಿ ರಾಜಕೀಯ ಮಾಡಲು ಹೊರಟಿದೆ. ಉದ್ಘಾಟನಾ ಸಭೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದು, ಇದನ್ನು ವಿರೋಧಿಸುತ್ತೇವೆಯೇ ಹೊರತು ಶ್ರೀರಾಮಚಂದ್ರನ್ನಾಗಲಿ, ಮಂದಿರವನ್ನಾಗಲಿ ವಿರೋಧಿಸಿಲ್ಲ ಅಂತ ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಯಚೂರು(ಜ.14): ಇದೇ ಜ.22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ವೇದಿಕೆಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದು, ಅದಕ್ಕೆ ವಿರೋಧವಿದೆಯೇ ಹೊರತು ಶ್ರೀರಾಮಚಂದ್ರ, ಉದ್ಘಾಟನೆಗೆ ಮಂದಿರದ ಯಾವುದೇ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಶನಿವಾರ ಸುದ್ದಿಗಾರರ ಜೊತೆ ಮಾತನಾಡಿ, ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪ್ರತಿಮೆ ಪ್ರತಿಷ್ಠೆಗೆ ನಮ್ಮದೇನೂ ವಿರೋಧವಿಲ್ಲ. ಆದರೆ ಬಿಜೆಪಿ ಅದರಲ್ಲಿ ರಾಜಕೀಯ ಮಾಡಲು ಹೊರಟಿದೆ. ಉದ್ಘಾಟನಾ ಸಭೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದು, ಇದನ್ನು ವಿರೋಧಿಸುತ್ತೇವೆಯೇ ಹೊರತು ಶ್ರೀರಾಮಚಂದ್ರನ್ನಾಗಲಿ, ಮಂದಿರವನ್ನಾಗಲಿ ವಿರೋಧಿಸಿಲ್ಲ ಅಂತ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಯವರಿಗೆ ರಾಮನೊಬ್ಬನೇ ದೇವರಾ?: ಸಚಿವ ತಿಮ್ಮಾಪುರ ಕಿಡಿ
22ರ ನಂತರ ಅಯೋಧ್ಯೆಗೆ ತೆರಳುವ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಎಲ್ಲೂ ಅಯೋಧ್ಯೆಗೆ ಹೋಗುತ್ತೇನೆ, ಹೋಗುವುದಿಲ್ಲ ಎಂದು ಹೇಳಿಲ್ಲ ಎಂದರು.