
ಬೆಂಗಳೂರು(ಜ.21): ಮೈಕ್ರೋ ಫೈನಾನ್ಸ್ ವ್ಯವಹಾರದವರು ಮೈಸೂರು, ಚಾಮರಾಜನಗರ ಸೇರಿ ರಾಜ್ಯದಲ್ಲಿ ಎಲ್ಲೇ ಜನರಿಗೆ ಕಿರುಕುಳ ನೀಡಿದರೂ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಜನರಿಗೆ ಕಿರುಕುಳ ನೀಡುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರು, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋಫೈನಾನ್ಸ್ ಭೀತಿಯಿಂದ ಜನ ಊರು ಬಿಡುತ್ತಿರುವ ಬಗ್ಗೆ ಅವರು ಪ್ರತಿಕ್ರಿಯಿಸಿದರು.
ಮತ್ತಷ್ಟು ಮೈಕ್ರೋ ಫೈನಾನ್ಸ್ ಕಿರಿಕ್: ನೂರಾರು ಜನ ಪರಾರಿ!
ಜನರನ್ನು ಹೆದರಿಸಿ ಕಿರುಕುಳ ನೀಡುವುದನ್ನು ನಾವು ಸಹಿಸುವುದಿಲ್ಲ. ಕೇವಲ ಮೈಸೂರು ಮಾತ್ರವಲ್ಲ ಎಲ್ಲೇ ಮಾಡಿದರೂ ಅದು ತಪ್ಪೇ. ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ವ್ಯವಹಾರಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ತಪ್ಪಿತಸ್ಥರ ಮೇಲೆ ಕ್ರಮ:
ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಘಟನೆ ಬಗ್ಗೆ ಯಾರು ಯಾರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಬಗ್ಗೆ ಪೂರ್ಣ ಮಾಹಿತಿ ಇಲ್ಲ. ಏನೇ ಆಗಿದ್ದರೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ‍್ಳಲಾಗುವುದು. ಯಾರೇ ತಪ್ಪು ಮಾಡಿದರೂ ಕ್ರಮ ಜರುಗಿಸುತ್ತೇವೆ ಎಂದು ಹೇಳಿದರು.
ಮೈಕ್ರೋ ಫೈನಾನ್ಸ್ ಕಂಪನಿಗಳ ಟಾರ್ಚರ್: ಸಾಲ ತೀರಿಸಲಾಗದೆ ಗ್ರಾಮ ತೊರೆದ 100ಕ್ಕೂ ಹೆಚ್ಚು ಕುಟುಂಬಗಳುb
ನಾವೇನೂ ಮಾಡಲು ಆಗಲ್ಲ: ಗೃಹ ಸಚಿವ ಪರ
ಬೆಂಗಳೂರು: ಮೈಕ್ರೋ ಫೈನಾನ್ಸ್ ವಂಚನೆ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ‘ಫೈನಾನ್ಸ್ ವಂಚನೆ ತಡೆಗೆ ಹಣಕಾಸು ಇಲಾಖೆ ದಾರಿ ಹುಡುಕಬೇಕು. ನಾವು ಇದರಲ್ಲಿ ಏನೂ ಮಾಡಲು ಆಗುವುದಿಲ್ಲ’ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ