ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ರಾಮನಗರ ಜಿಲ್ಲೆಯ ವಿವಿಧ ಶಾಸಕರು, ವಿಧಾನ ಪರಿಷತ್ ಸದಸ್ಯರ ನಿಯೋಗ ನನ್ನನ್ನು ಭೇಟಿ ಮಾಡಿ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಮನವಿ ಸಲ್ಲಿಸಿದೆ. ಇದನ್ನು ಸಚಿವ ಸಂಪುಟದ ಮುಂದೆ ಇಡಲಾಗುವುದು. ಅಲ್ಲಿ ಚರ್ಚೆ ಆಗಬೇಕು. ಅಲ್ಲಿಯವರೆಗೂ ನಾನೇನೂ ಹೇಳುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು(ಜು.10): ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಬೇಕೆಂದು ಆ ಜಿಲ್ಲೆಯ ಜನಪ್ರತಿನಿಧಿಗಳು ಸಲ್ಲಿಸಿರುವ ಮನವಿಯ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಆಗಬೇಕು. ಅದಕ್ಕೂ ಮೊದಲೇ ನಾನು ಏನೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗೋಷ್ಠಿ ವೇಳೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ರಾಮನಗರ ಜಿಲ್ಲೆಯ ವಿವಿಧ ಶಾಸಕರು, ವಿಧಾನ ಪರಿಷತ್ ಸದಸ್ಯರ ನಿಯೋಗ ನನ್ನನ್ನು ಭೇಟಿ ಮಾಡಿ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಮನವಿ ಸಲ್ಲಿಸಿದೆ.
ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ; ಡಿಕೆಶಿ ನಿಯೋಗದಿಂದ ಸಿಎಂಗೆ ಪತ್ರ
ಇದನ್ನು ಸಚಿವ ಸಂಪುಟದ ಮುಂದೆ ಇಡಲಾಗುವುದು. ಅಲ್ಲಿ ಚರ್ಚೆ ಆಗಬೇಕು. ಅಲ್ಲಿಯವರೆಗೂ ನಾನೇನೂ ಹೇಳುವುದಿಲ್ಲ ಎಂದು ತಿಳಿಸಿದರು.